
ಮೈಸೂರು(ಸೆ.21): ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್ ಆಗಿದೆ. ಈ ಪ್ರಕರಣದ ಲೋಕಾಯುಕ್ತ ತನಿಖೆಯಲ್ಲಿ ವಿಳಂಬವಾಗಲು ಕಾರಣವೇನು ಎಂಬ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ, ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಪ್ರಕರಣದ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬೆಲೆಬಾಳುವಂಥದ್ದು. ಅಧಿಕಾರಿಗಳು ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಹೇಳಿದರೂ ಆ ಸರ್ಕಾರಿ ಜಮೀನು ಕುಮಾರಸ್ವಾಮಿ ಸಂಬಂಧಿಕರಿಗೆ ಡಿನೋಟಿಫೈ ಆಗಿದೆ. ಈ ಕುರಿತು ದಾಖಲೆಗಳನ್ನು ಪರಿಶೀಲಿಸಿ ಮಾತನಾಡುತ್ತೇನೆ ಎಂದರು.
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆ ಸುಳಿವು ನೀಡಿದ ಸಿಎಂ!
ಇದೇ ವೇಳೆ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಈ ಡಿನೋಟಿಫಿಕೇಷನ್ ಪ್ರಕರಣದಲ್ಲಿ 2021ರಿಂದ ಲೋಕಾಯುಕ್ತದವರು ತನಿಖೆ ನಡೆಸಿಲ್ಲ. ಈ ಕುರಿತು ದಾಖಲೆಗಳನ್ನು ಪರಿಶೀಲಿಸುತ್ತೇವೆ ಎಂದರು.
ಇದೇ ವೇಳೆ ನಾವು ಯಾರ ಮೇಲೂ ಸುಖಾಸುಮ್ಮನೆ ಆರೋಪ ಹೊರಿಸುವ ಕೆಲಸ ಮಾಡಿಲ್ಲ ಎಂದ ಮುಖ್ಯಮಂತ್ರಿ, ಕುಮಾರಸ್ವಾಮಿಯವರದು ಹಿಟ್ ಆ್ಯಂಡ್ ರನ್ ಕೇಸ್. ಅವರು ತಾವು ಮಾಡುವ ಯಾವುದೇ ಆರೋಪಕ್ಕೆ ತಾರ್ಕಿಕ ಅಂತ್ಯ ಕಾಣಿಸುವುದೇ ಇಲ್ಲ. ಅವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ಯಾವುದೇ ಹೇಳಿಕೆ ನೀಡುವಾಗ ವಿಷಯದ ಸತ್ಯಾಸತ್ಯತೆ ಅರಿತು ಮಾತನಾಡಬೇಕು ಎಂದು ಹೇಳಿದರು.
ಅಧಿಕಾರಿಗಳು ಬೇಡ ಅಂದರೂ ಡಿನೋಟಿಫೈ
ಸಚಿವರು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬೆಲೆಬಾಳುವಂಥದ್ದು. ಅಧಿಕಾರಿಗಳು ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಹೇಳಿದರೂ ಆ ಸರ್ಕಾರಿ ಜಮೀನು ಕುಮಾರಸ್ವಾಮಿ ಸಂಬಂಧಿಕರಿಗೆ ಡಿನೋಟಿಫೈ ಆಗಿದೆ. ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ವಿರುದ್ಧದ 2021ರ ಈ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದವರು ತನಿಖೆ ನಡೆಸದ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ