ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಡಿ ಮಾದರಿ ರಾಜ್ಯ: ಸಿಎಂ

Published : Jul 22, 2023, 05:45 AM IST
ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಡಿ ಮಾದರಿ ರಾಜ್ಯ: ಸಿಎಂ

ಸಾರಾಂಶ

ಈ ಬಾರಿಯ ಬಜೆಟ್‌ನಲ್ಲಿ ನಮ್ಮ ಸರ್ಕಾರ ಸಾರ್ವತ್ರಿಕ ಮೂಲ ಆದಾಯ ಹೆಚ್ಚಿಸುವ ಆಶಯದೊಂದಿಗೆ ಜನರ ಜೇಬಿಗೆ ದುಡ್ಡು ಕೊಡುವ ಮೂಲಕ ಉದ್ಯೋಗ ಸೃಷ್ಟಿ, ಜಿಡಿಪಿ ಬೆಳವಣಿಗೆ ಮತ್ತು ತೆರಿಗೆ ಮೂಲಕ್ಕೂ ದಾರಿ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ವಿಧಾನ ಪರಿಷತ್‌ (ಜು.22):  ಈ ಬಾರಿಯ ಬಜೆಟ್‌ನಲ್ಲಿ ನಮ್ಮ ಸರ್ಕಾರ ಸಾರ್ವತ್ರಿಕ ಮೂಲ ಆದಾಯ ಹೆಚ್ಚಿಸುವ ಆಶಯದೊಂದಿಗೆ ಜನರ ಜೇಬಿಗೆ ದುಡ್ಡು ಕೊಡುವ ಮೂಲಕ ಉದ್ಯೋಗ ಸೃಷ್ಟಿ, ಜಿಡಿಪಿ ಬೆಳವಣಿಗೆ ಮತ್ತು ತೆರಿಗೆ ಮೂಲಕ್ಕೂ ದಾರಿ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಶುಕ್ರವಾರ ಪ್ರತಿಪಕ್ಷಗಳ ಬಹಿಷ್ಕಾರದ ನಡುವೆಯೇ ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಸಮಪಾಲು, ಸಮಬಾಳು ಎಂಬ ಧ್ಯೇಯವನ್ನಿಟ್ಟುಕೊಂಡು ಸರ್ವಧರ್ಮೀಯರನ್ನು ಒಟ್ಟಿಗೆ ಕೊಂಡೊಯ್ಯಲು ಬಜೆಟ್‌ ಮಂಡಿಸಲಾಗಿದೆ. ಶ್ರಮಿಕರ ಜೇಬಿನಲ್ಲಿ ಹಣ ಇರಬೇಕು ಎನ್ನುವ ಮಾದರಿಯೊಂದಿಗೆ ಸರ್ಕಾರ ನಡೆಸಬೇಕು ಎಂಬುದು ಪ್ರಮುಖ ಧ್ಯೇಯವಾಗಿದೆ ಎಂದರು.

ಗ್ಯಾರಂಟಿ ಮೂಲಕ ಮತದಾರರಿಗೆ ಆಮಿಷ, ಶಾಸಕ ಸ್ಥಾನದಿಂದ ಅನರ್ಹರಾಗ್ತಾರಾ ಸಿದ್ಧರಾಮಯ್ಯ?

ಬಿಜೆಪಿ ಜನರ ಜೇಬಿಗೆ ಕೈಹಾಕಿ ಕಿತ್ತುಕೊಳ್ಳಬೇಕು ಎಂಬ ಉದ್ದೇಶ ಹೊಂದಿತ್ತು. ಆದರೆ, ಕಾಂಗ್ರೆಸ್‌ ದುಡಿಯುವ ಜನರ ಜೇಬಿಗೆ ಹಣ ಹಾಕಬೇಕು ಎಂದು ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ‘ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆ’ಯಡಿ ಮಾದರಿ ರಾಜ್ಯವನ್ನಾಗಿ ಮಾಡಲಾಗುವುದು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕೈಗೆ ದುಡ್ಡು ಕೊಡಲು ನಮ್ಮ ಸರ್ಕಾರ ಪಂಚ ಗ್ಯಾರಂಟಿಗಳನ್ನು ತಂದಿದೆ ಎಂದ ಅವರು, ಸಾಮಾಜಿಕ ಸ್ವಾತಂತ್ರ್ಯ ಇಲ್ಲದಿದ್ದರೆ, ದೇಶಕ್ಕೆ ಸ್ವಾತಂತ್ರ್ಯ ಬಂದರೂ ಪ್ರಯೋಜನವಿಲ್ಲ. ರಾಜಕೀಯ ಪ್ರಜಾಪ್ರಭುತ್ವ ಇದ್ದರೆ ಸಾಲದು, ಸಾಮಾಜಿಕ ಪ್ರಜಾಪ್ರಭುತ್ವ ಇರಬೇಕು ಎಂದು ಹೇಳಿದರು.

ತೆರಿಗೆ ಸೋರಿಕೆಯನ್ನು ತಡೆದು, ತೆರಿಗೆ ಸಂಗ್ರಹಕ್ಕೆ ಪ್ರಮುಖ ಇಲಾಖೆಗಳಿಗೆ ಹೆಚ್ಚಿನ ಗುರಿಯನ್ನು ನೀಡಲಾಗಿದೆ. 13,500 ಕೋಟಿ ತೆರಿಗೆ ಬಾಬ್ತುಗಳಿಂದ ಸಂಗ್ರಹವಾಗುತ್ತದೆ. ನಮ್ಮ ಸರ್ಕಾರ 85,808 ಕೋಟಿ ಹೆಚ್ಚುವರಿ ಸಾಲ ಪಡೆಯುತ್ತಿದೆ. ಯೋಜನೆಗಳ ಆದ್ಯತೀಕರಣದಿಂದ ರೂ. 34,650 ಕೋಟಿ ಕ್ರೋಢೀಕರಣ ಮಾಡಲಾಗುತ್ತದೆ. ಇದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯೊಳಗೆ ಇದೆ. ಮುಂದೆಯೂ ಉಳಿತಾಯ ಬಜೆಟ್‌ ಮಾಡಲು ಪ್ರಯತ್ನಿಸಲಾಗುವುದು ಎಂದರು.

ನಮ್ಮ ಸರ್ಕಾರ ನೀಡಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ತಪ್ಪದೆ ಜಾರಿ ಮಾಡುತ್ತಿದ್ದು, ಜನರೂ ಸಂತುಷ್ಟರಾಗಿದ್ದಾರೆ. ನಮ್ಮ ಬಜೆಟ್‌ ಗಾತ್ರ 3,27,747 ಕೋಟಿ ರು., ಕಳೆದ ಸರ್ಕಾರದ ಬಜೆಟ್‌ಗಿಂತ 62027 ಕೋಟಿ ರು.ನಷ್ಟುಹೆಚ್ಚು. ಇದು ಶೇ.23ರಷ್ಟುಅಭಿವೃದ್ಧಿಯನ್ನು ಸೂಚಿಸುತ್ತಿದೆ. ನಾವು 5 ವರ್ಷದಲ್ಲಿ 14,54,663 ಮನೆಗಳನ್ನು ಕಟ್ಟಿಸಿದೆವು. ನಾವು ಹಿಂದಿನ ಸರ್ಕಾರಕ್ಕಿಂತ 6 ಲಕ್ಷ ಮನೆಗಳನ್ನು ಹೆಚ್ಚಾಗಿ ನಿರ್ಮಿಸಿದ್ದೇವೆ ಎಂದು ಹೇಳಿದರು.

ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

ನಮ್ಮ ಸರ್ಕಾರದ ಅವಧಿಯಲ್ಲಿ 14,169 ಕಿ.ಮೀ. ಹೆದ್ದಾರಿ ಅಭಿವೃದ್ಧಿಪಡಿಸಿದ್ದೆವು. ಅವರ ಸರ್ಕಾರ 8037 ಕಿ.ಮಿ ಮಾತ್ರ ನಿರ್ಮಿಸಿದ್ದಾರೆ. ನಮ್ಮ ಸರ್ಕಾರದ 5 ವರ್ಷದಲ್ಲಿ 696 ಹಾಸ್ಟೆಲ್‌ ನಿರ್ಮಾಣ ಮಾಡಲಾಗಿದೆ .ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾನೂನು ಬಂದ ನಂತರ, ನಮ್ಮ ಸರ್ಕಾರ 5 ವರ್ಷದಲ್ಲಿ 88530 ಕೋಟಿ ಖರ್ಚು ಮಾಡಲಾಗಿದೆ.. ನಮ್ಮ ಬಜೆಟ ಗಾತ್ರ 2018-19 ರಲ್ಲಿ 202297 ಕೊಟಿ ಇತ್ತು. ಆಗ 29691 ಕೋಟಿ ರೂ. ಎಸ್‌ ಸಿ ಎಸ್‌ ಟಿ ಗಳಿಗೆ ಮೀಸಲಿಟ್ಟಿದ್ದೆವು. ಈ ವರ್ಷದ ಬಜೆಟ್‌ ನಲ್ಲಿ ನಮ್ಮ ಸರ್ಕಾರ ಎಸ್‌ಸಿಎಸ್‌ಪಿ -ಟಿಎಸ್‌ಪಿ ಯೋಜನೆಗಳಿಗೆ 34294 ಕೋಟಿ ಮೀಸಲಿಡಲಾಗಿದೆ. ನಮ್ಮದು ಬಡವರ ಪರ ಹಾಗೂ ದಲಿತಪರವಾದ ಸರ್ಕಾರ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ರಾಜ್ಯ ಮೊದಲ ಸ್ಥಾನ: ಗೃಹಸಚಿವ ಪರಮೇಶ್ವರ್
ಜಿಎಸ್‌ಟಿ ದರ ಬದಲಾವಣೆ ಬಳಿಕ ವಾಣಿಜ್ಯ ತೆರಿಗೆ ಸಂಗ್ರಹ ಕುಸಿತ