ಮುಂದಿನ ವರ್ಷ ರಾಜ್ಯದ ಆರ್ಥಿಕ ಸಾಮರ್ಥ್ಯ ಇನ್ನಷ್ಟು ಹೆಚ್ಚುತ್ತದೆ. ಅಭಿವೃದ್ಧಿ ಇನ್ನಷ್ಟು ವೇಗ ಪಡೆಯುತ್ತದೆ. ರಾಜ್ಯದ ನಗರ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ 6000 ಕೋಟಿ ರು. ಹಾಗೂ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ 2000 ಕೋಟಿ ರು. ಸೇರಿ ಒಟ್ಟಾರೆಯಾಗಿ 8000 ಕೋಟಿ ರು. ಒದಗಿಸಲಾಗುವುದು ಎಂದು ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ(ಡಿ.18): ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹಣ ನೀಡುವಂತೆ ಕೇಳಿದ ಶಾಸಕರಿಗೆ ಮುಂದಿನ ವರ್ಷ ₹8000 ಕೋಟಿ ಅನುದಾನ ನೀಡುವದಾಗಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಶಾಸಕ ರಿಗೆ ಭರವಸೆ ನೀಡಿದ್ದಾರೆ. ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆ ಅಭಿವೃದ್ಧಿಗೆ ಹಣ ನೀಡುವುದಾಗಿ ಹೇಳಿದರು.
ಮುಂದಿನ ವರ್ಷ ರಾಜ್ಯದ ಆರ್ಥಿಕ ಸಾಮರ್ಥ್ಯ ಇನ್ನಷ್ಟು ಹೆಚ್ಚುತ್ತದೆ. ಅಭಿವೃದ್ಧಿ ಇನ್ನಷ್ಟು ವೇಗ ಪಡೆಯುತ್ತದೆ. ರಾಜ್ಯದ ನಗರ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ 6000 ಕೋಟಿ ರು. ಹಾಗೂ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ 2000 ಕೋಟಿ ರು. ಸೇರಿ ಒಟ್ಟಾರೆಯಾಗಿ 8000 ಕೋಟಿ ರು. ಒದಗಿಸಲಾಗುವುದು ಎಂದು ಭರವಸೆ ನೀಡಿದರು.
undefined
'ನನ್ನ ಜೀವ ಹೋದ್ರೂ ಮುಡಾ ಹಗರಣ ತಾರ್ಕಿಕ ಅಂತ್ಯಕ್ಕೆ ತರುತ್ತೇನೆ'; ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸ್ನೇಹಮಯಿ ಕೃಷ್ಣ!
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ 2028ರ ಚುನಾವಣೆಗೆ ಮುನ್ನುಡಿ ಬರೆದಿದೆ. ಈಗಿನಿಂದಲೇ 2028ರ ಚುನಾವಣೆಗೆ ಸಿದ್ದರಾಗಿ ಎಂದು ಕರೆ ನೀಡಿದರು.
ಸಭೇಲಿ ಮಾತಾಡಲು ಬಿಡದ್ದಕ್ಕೆ ಕಾಂಗ್ರೆಸ್ ಶಾಸಕರು ಗರಂ
ಕ್ಷೇತ್ರದಲ್ಲಿ ಅಭಿವೃದ್ಧಿ ಕಾವ್ಯಗಳಿಗೆ ಹಿನ್ನಡೆ ಹಿನ್ನೆಲೆ ಸಿಎಲ್‌ಪಿ ಸಭೆ ಯಲ್ಲಿ ಅನುದಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾ ಯಿಸಲು ಶಾಸಕರು ಸಿದ್ಧತೆ ಮಾಡಿ ಕೊಂಡಿದ್ದರು. ಆದರೆ ಸಭೆಯಲ್ಲಿ ಮಾತನಾಡಲು ಶಾಸಕರಿಗೆ ಅವ ಕಾಶವನ್ನೇ ನೀಡಲಿಲ್ಲ. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತನಾಡುತ್ತಿದ್ದಂತೆಯೇ ಸಭೆ ಮುಕ್ತಾಯಗೊಳಿಸಲಾಯಿತು. ಸಭೆಯಲ್ಲಿ ಮಾತನಾಡಲು ಅವಕಾಶ ಸಿಗದಿದ್ದಕ್ಕೆ ಶಾಸಕರು ತೀವ್ರ ಬೇಸರ ವ್ಯಕ್ತಪಡಿಸಿದರು.