
ಧಾರವಾಡ (ಸೆ.10) : ‘ಬಿ.ಕೆ.ಹರಿಪ್ರಸಾದ್ ಎಲ್ಲೂ ನನ್ನ ಹೆಸರು ಹೇಳಿ ಟೀಕೆ ಮಾಡಿಲ್ಲ. ಹೀಗಾಗಿ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಬೇಕಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಯಾರೋ ಒಬ್ಬರು ಸಮಾಜವಾದಿ ಹೆಸರಲ್ಲಿ ಮಜಾವಾದಿಯಾಗಿದ್ದಾರೆ. ಹ್ಯುಬ್ಲೋ ವಾಚ್ ಕಟ್ಟಿಕೊಂಡು, ಪಂಚೆಯುಟ್ಟು ಒಳಗೆ ಖಾಕಿ ಚಡ್ಡಿ ಹಾಕಿ ಓಡಾಡುತ್ತಿದ್ದಾರೆಂಬ ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ತಮ್ಮ ಹೆಸರೆತ್ತದೆ ಮಾಡಿದ ಟೀಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಶನಿವಾರ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ನನ್ನನ್ನು ಮಂತ್ರಿ ಮಾಡದ್ದಕ್ಕೆ ಧನ್ಯವಾದ, ಜನರೇ ಇವರಿಗೆ ಪಾಠ ಕಲಿಸ್ತಾರೆ, ಸಿದ್ದು ವಿರುದ್ಧ ಹರಿಪ್ರಸಾದ್ ವಾಗ್ದಾಳಿ
ಬಿ.ಕೆ.ಹರಿಪ್ರಸಾದ್ ಅವರು ನನ್ನ ಹೆಸರು ಹೇಳಿ ಟೀಕೆ ಮಾಡಿಲ್ಲ. ಹೀಗಾಗಿ ಅವರ ಜನರಲ್ ಸ್ಟೇಟ್ಮೆಂಟ್ಗಳ ಕುರಿತು ನಾನು ಮಾತನಾಡಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಶನಿವಾರ ನಡೆದ ‘ಈಡಿಗ, ಬಿಲ್ಲವ, ನಾಮಧಾರಿ, ದೀವರು ಸೇರಿ ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆ’ ವೇಳೆ ಮಾತನಾಡಿದ ಬಿಕೆ ಹರಿಪ್ರಸಾದ್ ಸಿದ್ದರಾಮಯ್ಯ ವಿರುದ್ಧ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದರು.‘ರಾಜ್ಯದಲ್ಲಿ ಯಾರೋ ಒಬ್ಬರು ಸಮಾಜವಾದಿ ಹೆಸರಿನಲ್ಲಿ ಮಜಾವಾದಿಯಾಗಿದ್ದಾರೆ. ಹ್ಯೂಬ್ಲೋ ವಾಚ್ ಕಟ್ಟಿಕೊಂಡು, ಪಂಚೆಯುಟ್ಟು, ಒಳಗೆ ಖಾಕಿ ಚಡ್ಡಿ ಹಾಕಿ ಓಡಾಡುತ್ತಿದ್ದಾರೆ’ಭಾಷಣದ ಉದ್ದಕ್ಕೂ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವರ ಹೆಸರು ಹೇಳದೆ ತೀವ್ರ ಟೀಕಾಪ್ರಹಾರ ನಡೆಸಿದ್ದರು.
ಪಂಚೆ ಹಾಕೊಂಡು, ಹ್ಯೂಬ್ಲೋಟ್ ವಾಚ್ ಕಟ್ಕೊಂಡ್ರೆ ಸಮಾಜವಾದಿ ಆಗೋಲ್ಲ: ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಹರಿಪ್ರಸಾದ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ