ಪ್ರಕರಣದ ಬಗ್ಗೆ ಇ.ಡಿ ತನಿಖೆ ಪ್ರಶ್ನಿಸಿರುವ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಮುನ್ನಾ ದಿನ ಇಂಥದ್ದೊಂದು ಪತ್ರ ರವಾನೆ ಹಿಂದೆ, ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶವಿದೆ ಎಂದು ಗಂಭೀರ ಆರೋಪ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆ.ಆರ್.ಪೇಟೆ(ಡಿ.05): ಮುಡಾ ಸೈಟ್ ಹಂಚಿಕೆಯಲ್ಲಿ ತಮ್ಮ ಪತ್ನಿ ಅಕ್ರಮ ನಡೆಸಿದ್ದಾರೆ ಎಂದು ಲೋಕಾಯುಕ್ತಕ್ಕೆ ಮಾಹಿತಿ ನೀಡಿ ಪತ್ರ ರವಾನಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಬಗ್ಗೆ ಇ.ಡಿ ತನಿಖೆ ಪ್ರಶ್ನಿಸಿರುವ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಮುನ್ನಾ ದಿನ ಇಂಥದ್ದೊಂದು ಪತ್ರ ರವಾನೆ ಹಿಂದೆ, ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮುಡಾ ಕೇಸಲ್ಲಿ ಸಿದ್ದು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ: ಕುಮಾರಸ್ವಾಮಿ ಭವಿಷ್ಯ
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯ ಹೆಲಿಪ್ಯಾಡ್‌ನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿ ಇ.ಡಿ.ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಅದನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗುರುವಾರ ನಮ್ಮ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾ ಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆ ಅಡಗಿದೆ ಎಂದು ಆರೋಪಿಸಿದರು.
ಡಿ.24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇ.ಡಿ.ಯವರು ಲೋಕಾಯುಕ್ತದ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ಏನೆಂಬುದು ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದು ಟೀಕಿಸಿದರು.
ಬಿಜೆಪಿಗರ ಖಿನ್ನತೆ ಎದ್ದು ಕಾಣುತ್ತಿದೆ ಸೂಚಿಸಿರುವುದು ಇದೇ ಮೊದಲು. ಬಿಜೆಪಿಗರ ಖಿನ್ನತೆ ಇದರಲ್ಲಿ ಕಾಣುತ್ತಿದೆ. ಏನೇ ವಿಚಾರ ಇದ್ದರೂ ಕೋರಿಗೆ ಸಲ್ಲಿಸಬೇಕು. ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೇಕೆ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಲೋಕಾ ತನಿಖೆ ಮೇಲೆ ಪ್ರಭಾವಕ್ಕೆ ಯತ್ನ ರಾಜಕೀಯ ದುರುದ್ದೇಶದಿಂದ ಇ.ಡಿ.ಯಿಂದ ಲೋಕಾಯುಕ್ತಕ್ಕೆ ಪತ್ರ ಬರೆಸಿದ್ದಾರೆ. ಒಂದೇ ವಿಷಯಕ್ಕೆ ಎರಡು ತನಿಖಾ ಸಂಸ್ಥೆ ತನಿಖೆ ನಡೆಸುವುದೇ ಕಾನೂನು ಬಾಹಿರ, ಲೋಕಾಯುಕ್ತ ತನಿಖೆ ಮೇಲೆ ಪ್ರಭಾವ ಬೀರಲು ಇ.ಡಿ. ಪತ್ರ ಬರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಇ.ಡಿ. ತನಿಖೆಯೇ ಕಾನೂನುಬಾಹಿರ ಅಕ್ರಮ ಹಣ ವರ್ಗಾವಣೆ ಬಗ್ಗೆ ಮಾತ್ರ ಇ.ಡಿ. ತನಿಖೆ ಮಾಡಬೇಕು. ಮುಡಾ ಕೇಸಿನ ತನಿಖೆ ಇ.ಡಿ. ವ್ಯಾಪ್ತಿಗೆ ಬರಲ್ಲ. ಹೀಗಾಗಿ ಇ.ಡಿ. ತನಿಖೆ ಕಾನೂನು ಬಾಹಿರ. ಹಾಗಿದ್ದೂ ಲೋಕಾಯುಕ್ತಕ್ಕೆ ಯಾಕೆ ಪತ್ರ ಬರೆದರು? ಇದು ರಾಜಕೀಯ ದುರುದ್ದೇಶದ ಕ್ರಮ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸಾಕ್ಷ್ಯ ಸಿಗದ್ದಕ್ಕೆ ಮಾಹಿತಿ ಸೋರಿಕೆ ಬಿಜೆಪಿ ಸಂಘಟನೆ ಎಲ್ಲೆಲ್ಲಿ ಸಂಕಷ್ಟದಲ್ಲಿ ಇದೆಯೋ ಅಲ್ಲಿ ಸಿಬಿಐ, ಇ.ಡಿ.ಯನ್ನು ಕೇಂದ್ರ ಭೂ ಬಿಡುತ್ತದೆ. ಇ.ಡಿ.ಯು ಕೇಂದ್ರ ಸರ್ಕಾರದ ರಾಜಕೀಯ ಅಸ್ತ್ರ. ಇಷ್ಟು ತಿಂಗಳು ತನಿಖೆ ಮಾಡಿದರೂ ಇ.ಡಿ.ಗೆ ಸಾಕ್ಷ್ಯ ಸಿಕ್ಕಿಲ್ಲ. ಹೀಗಾಗಿ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರಾಜ್ಯಪಾಲರ ಅಧಿಕಾರ ಮತ್ತಷ್ಟು ಕಡಿತಕ್ಕೆ ಸಿದ್ದು ಸರ್ಕಾರ ಚಿಂತನೆ
ತನಿಖೆಗೆ ಇ.ಡಿ.ಗೆ ಅಧಿಕಾರವೇ ಇಲ್ಲ ಈ ಪ್ರಕರಣದಲ್ಲಿ ಇ.ಡಿ.ಗೆ ತನಿಖೆಯ ಅಧಿಕಾರವೇ ಇಲ್ಲ. ಒಂದು ವೇಳೆ ಸ್ವಯಂಪ್ರೇರಿತವಾಗಿ ತನಿಖೆ ನಡೆಸಿದ್ದರೆ ವರದಿಯನ್ನು ಕೋರ್ಟ್‌ಗೆ ಸಲ್ಲಿಸಬೇಕು. ಅದು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯಲು ಇ.ಡಿ.ಯಾರು? ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಅಕ್ರಮ ಇಲ್ಲದಿದ್ರೆ ಸೈಟ್ ವಾಪಸ್ ಕೊಟ್ಟಿದ್ದೇಕೆ? ಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದ . ರಾಮಯ್ಯ ಅವರು ನನ್ನ ಮೇಲೆ ಬಿಜೆಪಿ ಸುಖಾಸುಮ್ಮನೆ ಆರೋಪ ಮಾಡಿದ್ದಾರೆ ಎಂದು ಹೇಳಿದ್ದರು. ಅಕ್ರಮ ನಡೆದಿಲ್ಲ ಎಂದರಾದರೆ, ಸೈಟು ಬದಲಿಗೆ ₹52 ಕೋಟಿ ಕೊಡಿ ಎಂದು ಕೇಳಿದ್ದು ಯಾರು?, ನಿವೇಶನಗಳನ್ನು ಹಿಂದಿರುಗಿಸಿದ್ದೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.