ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು.
ಮೈಸೂರು (ಡಿ.22): ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗ್ತದಾ? ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ ಎಂದು ಹೇಳಿದರು.
undefined
ಜಯದೇವ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಸಿಗುತ್ತದೆಂದು ಕೇಳಿದ್ದೇನೆ. ನಾನು ಯಾವತ್ತೂ ಅಲ್ಲಿಗೆ ಹೋಗಿಲ್ಲ: ಸಿಎಂ
ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು. ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು ಎಂದರು.
ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ ಎಂದು ಪ್ರಶ್ನಿಸಿದರು.
ಗಂಡ ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ ಎಂದ ಅವರು, ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ವವನ್ನು ನಾನೇ ಉದ್ಘಾಟಿಸುತ್ತೇನೆ, ಅದಕ್ಕೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.
ಐಷಾರಾಮಿ ವಿಮಾನದಲ್ಲಿ ಸಿಎಂ ಸೇರಿ ಹಲವರ ರಾಯಲ್ ಜರ್ನಿ, ಜಮೀರ್ ಗೆ ಕಂಟಕವಾಯ್ತು ವಿಡಿಯೋ, ಬಿಜೆಪಿ ವ್ಯಂಗ್ಯ
ಮುಖ್ಯಮಂತ್ರಿ ಅವರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು.
ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ… pic.twitter.com/TxEaoGPuow