
ಬೆಂಗಳೂರು(ಜ.10): 'ದೇವರಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದನ್ನು ಒಪ್ಪಲ್ಲ. ಆತ ಎಲ್ಲರ ಮನಸಿನಲ್ಲೂ ಇದ್ದಾನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ಲೇಖಕ ಡಾ. ಎಂ.ಎಸ್.ಮುತ್ತುರಾಜ್ ಅವರ 'ಮಂಗಳವಾದ್ಯ' ಕಾದಂಬರಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ನಾರಾಯಣ ಗುರುಗಳು, ಕನಕದಾಸರು ಮತ್ತು ಬಸವಾದಿ ಶರಣರು ಮಾನವೀಯ ಮೌಲ್ಯವನ್ನು ಹೇಳಿದ್ದಾರೆ. ದಲಿತರನ್ನು ದೇವಸ್ಥಾನದ ಒಳಗೆ ಬಿಡದಿದ್ದರೆ ಆ ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿ, ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಸರಳವಾದ ಉಪಾಯ ತೋರಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಕನ್ನಡಿಗ ವಿರೋಧಿ ಸರ್ಕಾರವೆಂದ ಸಿಎಂ ಸಿದ್ದರಾಮಯ್ಯ
ದೇವರಿದ್ದಾನೆ. ಆದರೆ, ದೇವಸ್ಥಾನದಲ್ಲಿ ಮಾತ್ರ ದೇವರಿದ್ದಾನೆ ಎನ್ನುವುದು ಸರಿಯಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ