ಮೈಕ್ರೋ ಫೈನಾನ್ಸ್‌ಗೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಸಿದ್ದರಾಮಯ್ಯ

ಮೈಕ್ರೋ ಫೈನಾನ್ಸ್‌ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರಿದ್ದೇವೆ. ಸುಗ್ರೀವಾಜ್ಞೆ ಹೊರಡಿಸಿದ ಬಳಿಕ ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಬೀಳಲಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

CM Siddaramaiah Talks Over Micro Finance Harassment  in Karnataka

ಮೈಸೂರು(ಫೆ.01): ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ಸದಾ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.

ಮೈಸೂರು ಜಿಲ್ಲೆ ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಶುಕ್ರವಾರ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು. ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ. ಇನ್ನೂ ಸುಗ್ರೀವಾಜ್ಞೆ ಹೊರಡಿಸಿಲ್ಲ. ಸುಗ್ರೀ ವಾಜ್ಞೆ ಹೊರಡಿಸಿದ ನಂತರ ಇದಕ್ಕೆ ಕಡಿವಾಣ ಬೀಳಲಿದೆ. ಜನ ಎಲ್ಲಿ ಸಾಲ ಸಿಗುತ್ತೋ ಅಲ್ಲಿಗೆ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಅವರು ಹೆಚ್ಚು ಬಡ್ಡಿ ಹಾಕುತ್ತಿದ್ದಾರೆ. ಔಟ್ ಸೋರ್ಸ್ ಮೂಲಕ ಗೂಂಡಾಗ ಳನ್ನು ಬಳಸಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ವಿಷಾದಿಸಿದರು. 

Latest Videos

ಮೈಕ್ರೋ ಫೈನಾನ್ಸ್‌ಗಳು ಆರ್‌ಬಿಐ ನಿಯಮದಡಿ ಬರುತ್ತವೆ. ಶೇ.28, 29, 30ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಬೇಸತ್ತು ಸಾಲಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಯಾರು ವಿಪರೀತವಾಗಿ ಬಡ್ಡಿ ವಸೂಲಿ ಮಾಡುತ್ತಿದಾರೋ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದರು.

ಫೈನಾನ್ಸ್ ದೌರ್ಜನ್ಯಕ್ಕೆ ಕಾಯ್ದೆ ಮೂಲಕ ಕಡಿವಾಣ ಶೀಘ್ರ

ಮೈಕ್ರೋ ಫೈನಾನ್ಸ್‌ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀ ವಾಜ್ಞೆ ಮೂಲಕ ಕಠಿಣ ಕಾನೂನು ತರಿದ್ದೇವೆ. ಸುಗ್ರೀವಾಜ್ಞೆ ಹೊರಡಿಸಿದ ಬಳಿಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಬೀಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಕಾನೂನು ಕುರಿತು ಎರಡು, ಮೂರು ದಿನಗಳಲ್ಲಿ ನಿರ್ಧಾರ

ಮೈಕ್ರೋಫೈನಾನ್ಸ್ ಬಗ್ಗೆ ಹಾಲಿ ಕೆಲ ಕಾನೂನುಗಳು ಇವೆ. ಅವನ್ನೆಲ್ಲಾ ಹೊಸ ಕಾನೂನಲ್ಲಿ ಅಳವಡಿಸಿಕೊಳ್ಳುವುದು ಹೇಗೆಂಬ ಚರ್ಚೆ ನಡೆಯುತ್ತಿದೆ. 2-3 ದಿನದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್ ಹೇಳಿದ್ದಾರೆ.  

click me!