
ಬೆಂಗಳೂರು(ಡಿ.29): ರಾಜ್ಯದಲ್ಲಿ ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಭಟನಾಕಾರರಿಗೆ ಎಚ್ಚರಿಸಿದ್ದಾರೆ.
ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ ಎಂದಿರುವ ಸಿದ್ದರಾಮಯ್ಯ, 2022ರ ಮಾ.3ರಂದು ಹೈಕೋರ್ಟ್ ಪ್ರತಿಭಟನೆ, ಧರಣಿಗಳನ್ನು ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾತ್ರ ಮಾಡಬೇಕು. ಇದನ್ನು ಸರ್ಕಾರ ಖಾತರಿಪಡಿಸಬೇಕು ಎಂದು ಸ್ಪಷ್ಟ ಆದೇಶ ನೀಡಿದೆ. ಹೀಗಿದ್ದರೂ ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಕರವೇ ನಾರಾಯಣಗೌಡರನ್ನ ಬಿಡುಗಡೆ ಮಾಡಬೇಕು; ಸಿಎಂ ಸಿದ್ದರಾಮಯ್ಯಗೆ 24 ಗಂಟೆ ಗಡುವು ಕೊಟ್ಟ ವಾಟಾಳ್ ನಾಗರಾಜ್!
ಯಾವುದೇ ಸಂಘಟನೆಯಿರಲಿ ಅಥವಾ ಖಾಸಗಿ ಸಂಸ್ಥೆಗಳಿರಲಿ, ಯಾರೇ ವ್ಯಕ್ತಿಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ