
ಬೆಂಗಳೂರು(ಜ.11): ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಗತ್ಯವಾಗಿ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಮ್ಮ ಸರ್ಕಾರ ಇದ್ದಾಗ ಕೇಂದ್ರದ ರಕ್ಷಣಾ ಸಚಿವರಿಗೆ ಮಾತನಾಡಿ ಮತ್ತೆ ಸ್ತಬ್ಧಚಿತ್ರ ಬರುವಂತೆ ಮಾಡಿದ್ದೆವು. ಆ ಪ್ರಯತ್ನವನ್ನು ಸಿದ್ದರಾಮಯ್ಯ ಅವರೂ ಮಾಡಬೇಕು. ಅದನ್ನು ಬಿಟ್ಟು ಕೇಂದ್ರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.
ಸ್ತಬ್ಧಚಿತ್ರ ನಿರಾಕರಣೆ ಬಗ್ಗೆ ಸಿಎಂ ಮೊಸಳೆ ಕಣ್ಣೀರು: ವಿಜಯೇಂದ್ರ
ಹಿಂದೆ 2018ರಲ್ಲಿ ಇವರು ಆಡಳಿತದಲ್ಲಿ ಇದ್ದಾಗ ಆಗಲೂ ಆಯ್ಕೆ ಆಗಿರಲಿಲ್ಲ. ಇವರು ಸುಮ್ಮನೆ ಜನರನ್ನು ಕೆರಳಿಸುವಂತೆ ಮಾಡುತ್ತಿದ್ದಾರೆ. ನಾವು ಕೂಡ ಕರ್ನಾಟಕದ ಟ್ಯಾಬ್ಲೋ ಬರಬೇಕು ಅಂತ ಕೇಂದ್ರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ