
ಹಾವೇರಿ (ಫೆ.15): ಇಲ್ಲಿ ಆಯೋಜಿಸಿದ್ದ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ವಿಧಾನಸೌಧದ ಮುಂದೆ ನಿಂತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅನಾವರಣಗೊಳಿಸಿದರು. ವೇದಿಕೆಯ ಬಲಭಾಗದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ 6.5 ಅಡಿ ಎತ್ತರದ ಮೂರ್ತಿಯನ್ನು ಅನಾವರಣಗೊಳಿಸಿದ ಡಿಕೆಶಿ, ಬಳಿಕ, ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.ತಮ್ಮ ಮೂರ್ತಿಯನ್ನು ನೋಡಿದ ಸಿದ್ದರಾಮಯ್ಯ ಸಂತಸಗೊಂಡು, ಬಹಳ ಉತ್ತಮವಾಗಿ ಮೂರ್ತಿ ರಚಿಸಿದ್ದಾರೆ ಎಂದು ಖುಷಿ ಹಂಚಿಕೊಂಡರು. ನಾನೇ ನಿಂತಂತೆ ಕಾಣುತ್ತದೆ ಎಂದು ವೇದಿಕೆಯಲ್ಲೇ ಸಂತಸ ಹಂಚಿಕೊಂಡರು.
ಭಾಷಣ ಮುಗಿಸಿ ವೇದಿಕೆಯಿಂದ ನಿರ್ಗಮಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯ ಕೆಳಗಿಳಿದು ಬಂದು ತಮ್ಮ ಮೂರ್ತಿಯನ್ನು ಕಣ್ತುಂಬಿಕೊಂಡರು. ಎದುರು ನಿಂತು ಫೋಟೋಗೆ ಪೋಸ್ ನೀಡಿದರು. ಬಳಿಕ ರಾಕ್ ಗಾರ್ಡನ್‌ನ ವೇದಾರಣಿ ಪ್ರಕಾಶ ದಾಸನೂರ ಅವರನ್ನು ಅಭಿನಂದಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 1 ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಸಮೀಪದ ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್‌ನವರು ಈ ಮೂರ್ತಿ ತಯಾರಿಸಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ನಿಂತಂತೆ ಮೂರ್ತಿ ರಚನೆಯಾಗಿದೆ. ಗೊಟಗೋಡಿ ರಾಕ್ ಗಾರ್ಡನ್ ಮುಖ್ಯಸ್ಥ ದಾಸನೂರ್ ಅವರು ಇದನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಮೂರ್ತಿಯನ್ನು ರಾಕ್ ಗಾರ್ಡನ್‌ನಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ