ರಾಜ್ಯದಲ್ಲಿ ಉತ್ತಮ ಮಳೆ ಬೆಳೆಗಾಗಿ ಮಾದಪ್ಪನ ಮೊರೆ ಹೋದ ಸಿಎಂ ಸಿದ್ದರಾಮಯ್ಯ!

By Kannadaprabha News  |  First Published Sep 28, 2023, 3:40 AM IST

ರಾಜ್ಯದಲ್ಲಿ ಉತ್ತಮ ಮಳೆಬೆಳೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥನೆ ಮಾಡಿಕೊಂಡರು. ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನಾ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.
 


ಚಾಮರಾಜನಗರ (ಸೆ.28): ರಾಜ್ಯದಲ್ಲಿ ಉತ್ತಮ ಮಳೆಬೆಳೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥನೆ ಮಾಡಿಕೊಂಡರು. ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನಾ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮಳೆಗಾಗಿ ಮಾದಪ್ಪನ ಬಳಿ ದೇವರಲ್ಲಿ ಪ್ರಾರ್ಥಿಸಿರುವೆ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮಳೆಗಾಗಿ ಮೊರೆ ಹೋಗಿರುವೆ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿರುವೆ ಮಾದಪ್ಪನ ಮೇಲೆ ನನಗೆ ನಂಬಿಕೆ ಇದೆ. ಉತ್ತಮ ಮಳೆ ಬೀಳುವ ನೀರೀಕ್ಷೆ ಇದೆ ಎಂದ ಅವರು ತಿಳಿಸಿದರು. ಸಚಿವರಾದ ಕೆ.ವೆಂಕಟೇಶ್, ಎಚ್.ಸಿ.ಮಹದೇವಪ್ಪ ಜೊತೆಗೂಡಿ ಬಂದ ಸಿದ್ದರಾಮಯ್ಯ ಮಾದಪ್ಪನಬೆಟ್ಟದಲ್ಲಿ ಬೆಳ್ಳಿ ದಂಡ ಹಿಡಿದು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿದರು. ಬೆಳ್ಳಿರಥ ಸೇವೆ ನಡೆಸಿದರು.

Tap to resize

Latest Videos

undefined

ಕೋರ್ಟ್‌ ಹೊರಗೆ ಕಾವೇರಿ ಸಮಸ್ಯೆ ಪರಿಹಾರಕ್ಕೆ ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ

ವೈವಾಹಿಕ ಜೀವನಕ್ಕೆ 37 ನವಜೋಡಿ: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಅದ್ಧೂರಿಯಾಗಿ ನೆರವೇರಿತು, 37 ಜೋಡಿಗಳು ಮಲೆಮಹದೇಶ್ವರನ ತಪೋಭೂಮಿಯಲ್ಲಿ ನವ ಜೀವನಕ್ಕೆ ಕಾಲಿಟ್ಟರು. 39 ಮಂದಿ ನವ ಜೋಡಿಗಳು ಸಾಮೂಹಿಕ ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ, 37 ಮಂದಿ ನವಜೀವನಕ್ಕೆ ಕಾಲಿಟ್ಟರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳಸೂತ್ರವನ್ನು ವಿತರಿಸಿ ನವಜೋಡಿಗಳಿಗೆ ಶುಭ ಹಾರೈಸಿದರು‌. ವರನೊಬ್ಬನ ಪೇಟ ಸರಿ ಇಲ್ಲದ್ದನ್ನು ಗಮನಿಸಿ ಏ ಪೇಟಾ ಹೀಗಲ್ಲಾಪ್ಪ ಹೀಗೆ ಹಾಕೋಬೇಕು. ಮದ್ವೆ ಗಂಡಿಗೆ ಪೇಟಧಾರಣೆ ಕುರಿತು ತಿಳಿಹೇಳುವ ಮೂಲಕ ಮಾಂಗಲ್ಯ ಸೂತ್ರ ವಿತರಣೆ ವೇಳೆ ನವ ವರನಿಗೆ ಕಿಚಾಯಿಸಿದರು. ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆರ್ಶೀವಾದ ಪಡೆಯುವ ವೇಳೆ ವರನ ಪೇಟ ಕೆಳಗೆ ಬಿದ್ದಿತು. ಈ ವೇಳೆ ಈ ರೀತಿ ಪೇಟಧಾರಣೆ ಮಾಡಬಾರದು ಕಣಯ್ಯ ಎಂದು ವರನ ಪೇಟವನ್ನ ಸರಿಪಡಿಸುವ ಮೂಲಕ ಗಮನ ಸೆಳೆದರು. 

ಮಕ್ಕಳೊಂದಿಗೆ ಸಿಎಂ ಸಂವಾದ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯಲ್ಲಿರುವ ಕೋಣನಕೆರೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಬುಡಕಟ್ಟು ಆಶ್ರಮ ಶಾಲೆಗೆ ಬುಧವಾರ ಭೇಟಿ ನೀಡಿದರು. ಮುಖ್ಯಮಂತ್ರಿಗಳನ್ನು ಸ್ಥಳೀಯ ಗ್ರಾಮಸ್ಥರು ವಿದ್ಯಾರ್ಥಿಗಳು ಸಾಂಪ್ರದಾಯಿಕ ಗೊರುಕನ ನೃತ್ಯದ ಮೂಲಕ ಬರ ಮಾಡಿಕೊಂಡರು. ಶಾಲಾ ಮಕ್ಕಳು ಗುಲಾಬಿ ಹೂ ನೀಡಿ ಮುಖ್ಯಮಂತ್ರಿಯವರನ್ನು ಸಂತಸದಿಂದ ಸ್ವಾಗತಿಸಿದರು.

ಇದೇ ವೇಳೆ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖ್ಯಮಂತ್ರಿಯವರು ಎಷ್ಟನೇ ತರಗತಿಯಲ್ಲಿ ಓದುತ್ತಿದ್ದೀರ, ನಿಮಗೆ ಏನೇನು ಸೌಲಭ್ಯಗಳಿವೆ ಎಂದು ಕೇಳಿದರು. ಬಳಿಕ ಊಟದ ಹಾಲ್‍ನಲ್ಲಿ ಮಧ್ಯಾಹ್ನದ ಊಟ ಸೇವೆನೆ ಮಾಡುತ್ತಿದ್ದ ಮಕ್ಕಳನ್ನು ನಿಮಗೆ ಊಟಕ್ಕೆ ಏನೇನು ಕೊಡಲಾಗುತ್ತಿದೆ, ಊಟ ರುಚಿಯಾಗಿದೆಯಾ? ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಯವರು ಆಗಮಿಸುತ್ತಿದ್ದಂತೆ ಮಕ್ಕಳು ಹರ್ಷೋದ್ಗಾರದಿಂದ ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಮುಖ್ಯಮಂತ್ರಿಗಳು ಬುಡಕಟ್ಟು ಜನಾಂಗದ ಮುಖಂಡರು, ಸ್ಥಳೀಯ ಕಾಲೋನಿಯ ಜನರ ಅಹವಾಲುಗಳನ್ನು‌ ಆಲಿಸಿದರು.

ಸಂಸದ ಮುನಿಸ್ವಾಮಿ ಒಬ್ಬ ಸೈಕೋ: ಶಾಸಕ ನಾರಾಯಣಸ್ವಾಮಿ

ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಎಚ್.ಎಂ.ಗಣೇಶ್ ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಸಹಕಾರ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಇನ್ನಿತರರು ಇದ್ದರು.

click me!