
ಬೆಂಗಳೂರು(ಜ.24): ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಜನರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲ ನಡೆದು ನಂತರ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರ ನಡುವೆಯೇ ಹಾವೇರಿ ಮಹಿಳೆಯರು ಮಾಂಗಲ್ಯ ಉಳಿಸಿ ಅಭಿಯಾನ ಆರಂಭಿಸಿ ಮುಖ್ಯಮಂತ್ರಿಗಳಿಗೆ ಮಾಂಗಲ್ಯದ ಸರವನ್ನು ಕಳುಹಿಸಿ ದ್ದರು. ಹೀಗಾಗಿ ಮೈಕ್ರೋಫೈನಾನ್ ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವುದನ್ನು ಮನಗಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶನಿವಾರ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
7 ಮೈಕ್ರೋ ಫೈನಾನ್ಸ್ ಕಂಪನಿ, ಸಿಬ್ಬಂದಿ ವಿರುದ್ಧ ಎಫ್‌ಐಆರ್
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವ ಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರುಪಾಲ್ಗೊಳ್ಳಲಿ ದ್ದಾರೆ. ಜತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಚಾಮರಾಜನಗರ, ರಾಮನಗರ ಹಾಗೂ ನಂಜನಗೂಡಿನ ಕೆಲವೆಡೆ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳತಾಳಲಾರದೆಜನರು ಊರು ಬಿಟ್ಟು ಹೋಗಿದ್ದ ವರದಿಗಳು ಭಾರಿ ಚರ್ಚೆಗೆ ಕಾರಣವಾಗಿದ್ದವು.
ಮೈಕ್ರೋಫೈನಾನ್ಸ್ ಕಡಿವಾಣಕ್ಕೆ ಶೀಘ್ರ ನೂತನ ಕಾಯ್ದೆ: ಎಚ್‌ಕೆಪಿ
ಗದಗ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಂಧೆ ಹಾಗೂ ಮೀಟರ್ ಬಿಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ಕಾನೂನು ಖಾತೆ ಸಚಿವ ಎಚ್. ಕೆ.ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಿತಿಮೀರಿದ ಖಾಸಗಿ ಫೈನಾನ್ಸ್ ಕಿರುಕುಳ: ಸಿಎಂ ಸೂಚನೆಗೂ ಡೋಂಟ್ಕೇರ್!
ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಹೆಚ್ಚಾಗಿ ಅತ್ಮಹತ್ಯೆ ಪ್ರಕರಣ ಹೆಚ್ಚಳ, ಗ್ರಾಮೀಣ ಭಾಗದ ಜನತೆ ಮನೆ ಗ್ರಾಮಗಳನ್ನೇ ತೊರೆಯುತ್ತಿರುವ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಸರ್ಕಾರ ಇಂಥದ್ದೊಂದು ಕ್ರಮಕ್ಕೆ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕಾನೂನು ಖಾತೆ ಸಚಿವ ಎಚ್. ಕೆ.ಪಾಟೀಲ್, 'ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಂಧೆ ಹಾಗೂ ಮೀಟರ್ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡಿಸಲಾಗುವುದು ಎಂದು ಹೇಳಿದ್ದಾರೆ.
ಬಡವರ ಮಧ್ಯಮ ವರ್ಗದವರ ಶೋಷಣೆ ತಡೆಗಟ್ಟುವುದು ಹಾಗೂ ಅವರನ್ನು ಸಂರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯ' ಎಂದು ಹೇಳಿದರು. ಜೊತೆಗೆ, 'ಈಗ ಮೈಕ್ರೋ ಫೈನಾನ್ಸ್ ಬಗ್ಗೆ ಆರ್‌ಬಿಐ ವ್ಯಾಪ್ತಿಯಲ್ಲಿ ದೂರು ನೀಡಲು ಇರುವ ಸಂಸ್ಥೆಗಳನ್ನು ಗುರುತಿಸಬೇಕಿದೆ. ಮೀಟರ್ ಬಡ್ಡಿ, ಆರ್ಥಿಕವಾಗಿ ಜನರ ಶೋಷಣೆ ಮಾಡಿದರೆ ಸರ್ಕಾರ ಸಹಿಸುವದಿಲ್ಲ. ಅನ್ಯಾಯವಾಗಿ ಬಡ್ಡಿ ಹಾಕಿದ್ದಲ್ಲಿ ಯಾವುದೇ ಕಾರಣಕ್ಕೂ ಸುಮ್ಮನೆ ಕುಳಿತುಕೊಳ್ಳದೇ ದೂರು ನೀಡಬೇಕು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ