ಗ್ಯಾರಂಟಿ ಬಳಿಕ ಮತ್ತೊಂದು ದಿಟ್ಟ ಹೆಜ್ಜೆ; ನಾಳೆ 'ಆಶಾಕಿರಣ ಯೋಜನೆ'ಗೆ ಸಿಎಂ ಚಾಲನೆ

By Ravi Janekal  |  First Published Feb 17, 2024, 4:55 PM IST

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ 'ಆಶಾಕಿರಣ ಯೋಜನೆ'ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಫೆ.18ರಂದು ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.


ಬೆಂಗಳೂರು (ಫೆ.17) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ 'ಆಶಾಕಿರಣ ಯೋಜನೆ'ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಫೆ.18ರಂದು ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಶಾಕಿರಣ ಯೋಜನೆಯಡಿ ಈಗಾಗಲೇ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಉಚಿತವಾಗಿ ಕನ್ನಡಕ ವಿತರಿಸಲಿದ್ದಾರೆ ಎಂದು ತಿಳಿಸಿದರು.

Tap to resize

Latest Videos

ನವಜಾತ ಶಿಶು ಚಿಕಿತ್ಸೆಗೆ ನೂತನ ನಿಯೋನೇಟಲ್ ಆಂಬ್ಯುಲೆನ್ಸ್ ಸೇವೆಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

'ಆಶಾಕಿರಣ ಯೋಜನೆ' ದೃಷ್ಟಿ ದೋಷ ಹೊಂದಿದ ಅನೇಕ ಜನಸಾಮಾನ್ಯರ ಪಾಲಿಗೆ ಬೆಳಕಾಗಲಿದ್ದು, ಯೋಜನೆಯನ್ನ ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣಾ ಕಾರ್ಯವನ್ನ ಆಶಾ ಕಾರ್ಯಕರ್ತೆಯರು ನಡೆಸಿದ್ದರು. ಮೊದಲ ಹಂತದಲ್ಲಿ  ಹಾವೇರಿ, ಕಲಬುರಗಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 56, 59, 036 ಜನರನ್ನು ಆಶಾ ಕಾರ್ಯಕರ್ತೆಯರ ಮೂಲಕ ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗಿತ್ತು.‌ ಇವರಲ್ಲಿ 8,28, 884 ಜನರಿಗೆ ನೇತ್ರ ಸಂಬಂಧಿ ತೊಂದರೆಗಳು ಕಂಡುಬಂದಿದ್ದು, ದ್ವಿತೀಯ ಹಂತದ ಚಿಕಿತ್ಸೆಗೆ ಒಳಪಡಿಸಿದಾಗ 2,45,588 ಮಂದಿಗೆ ದೃಷ್ಟಿ ದೋಷ ಇರುವುದು ಪತ್ತೆಯಾಗಿದೆ. 2.45,588 ಜನರಿಗೂ ಉಚಿತ ಕನ್ನಡಕ ಒದಗಿಸುವ ಕಾರ್ಯ ನಾಳೆಯಿಂದ ಪ್ರಾರಂಭವಾಗಲಿದೆ. ಅಲ್ಲದೇ 39,336 ಜನರಿಗೆ ಕಣ್ಣಿನ ಪೊರೆ ತೊಂದರೆ ಕಂಡು ಬಂದಿದ್ದು, ಇವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನೂ ಕೂಡಾ ಉಚಿತವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಆಶಾಕಿರಣ ಯೋಜನೆ ಅಭಿಯಾನವನ್ನ ಆರಂಭಿಸಲಾಗಿದ್ದು, ಈ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 5,277,235 ಜನರನ್ನು ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗಿದೆ. ಇವರಲ್ಲಿ 943,398 ಜನರಲ್ಲಿ ನೇತ್ರ ಸಂಬಂಧಿ ತೊಂದರೆಗಳಿರುವುದು ಪತ್ತೆಯಾಗಿದ್ದು, ಕನ್ನಡಕ ವಿತರಣೆ, ಶಸ್ತ್ರ ಚಿಕಿತ್ಸೆ ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ಕ್ರಮ ವಹಿಸುದಾಗಿ ತಿಳಿಸಿದರು.

 

ಆಶಾ ಕಾರ್ಯಕರ್ತರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ₹7,000 ಗೌರವ ಧನ ಭರವಸೆ ನೀಡಿದ ದಿನೇಶ್ ಗುಂಡೂರಾವ್

ಮುಂದಿನ ಹಂತಗಳಲ್ಲಿ ರಾಮನಗರ, ಯಾದಗಿರಿ, ಕೊಡಗು, ಗದಗ ಹಾಗೂ ಚಿಕ್ಕಮಂಗಳೂರು, ಬೀದರ್, ಕೋಲಾರ, ಬಾಗಲಕೋಟೆ ಜಿಲ್ಲೆಗಳನ್ನು ಆಶಾಕಿರಣ ಯೋಜನೆಗಾಗಿ ಆಯ್ಕೆ ಮಾಡಲಾಗಿದೆ. ಹಂತ, ಹಂತವಾಗಿ ರಾಜ್ಯದ ಉಳಿದ ಜಿಲ್ಲೆಗಳಿಗೆ ಯೋಜನೆ ವಿಸ್ತರಿಸಲಾಗುವುದು. ರಾಜ್ಯದ ಎಲ್ಲ ಜನರಿಗೂ "ಆಶಾಕಿರಣ" ಯೋಜನೆಯಡಿ ಉಚಿತ ಕಣ್ಣಿನ ಆರೈಕೆ ಆರೋಗ್ಯ ಸೇವೆಯನ್ನ ರಾಜ್ಯ ಸರ್ಕಾರದ ಒದಗಿಸುವ ಗುರಿ ಹೊಂದಿದೆ. ಮಕ್ಕಳಿಂದ ವಯೋವೃದ್ಧವರೆಗೂ ಎಲ್ಲರ ಕಣ್ಣಿನ ತಪಾಸಣೆಯನ್ನ ಆರೋಗ್ಯ ಇಲಾಖೆ ಜನರ ಮನೆಬಾಗಿಲಿಗೆ ಹೋಗಿ ಆರೋಗ್ಯ ಸೇವೆ ಒದಗಿಸುತ್ತಿದೆ. 'ಆಶಾಕಿರಣ ಯೋಜನೆ ರಾಜ್ಯದ ಜನಸಾಮಾನ್ಯರ ಬಾಳಲ್ಲಿ ಬೆಳಕಾಗಲಿ  ಆಶಯ ವ್ಯಕ್ತಪಡಿಸಿದರು.‌

click me!