ಸಿಎಂ ಸಿದ್ದರಾಮಯ್ಯ ನಿದ್ದೆಯಿಂದ ಈಗ ಎದ್ದಿದ್ದಾರೆ, ಮೋದಿ ಟೀಕಿಸಿ ಮತ್ತೆ ಮಲಗುತ್ತಾರೆ: ಮಾಜಿ ಸಿಎಂ ಬೊಮ್ಮಾಯಿ

Published : Jan 17, 2024, 03:03 PM ISTUpdated : Jan 17, 2024, 03:04 PM IST
ಸಿಎಂ ಸಿದ್ದರಾಮಯ್ಯ ನಿದ್ದೆಯಿಂದ ಈಗ ಎದ್ದಿದ್ದಾರೆ, ಮೋದಿ ಟೀಕಿಸಿ ಮತ್ತೆ ಮಲಗುತ್ತಾರೆ: ಮಾಜಿ ಸಿಎಂ ಬೊಮ್ಮಾಯಿ

ಸಾರಾಂಶ

ರಾಜ್ಯದ ಅಭಿವೃದ್ಧಿ ಮಾಡದೇ ನಿದ್ದೆಯಿಂದ ಈಗ ಎದ್ದಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಮತ್ತೆ ಮಲಗುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.  

ಬೆಂಗಳೂರು (ಜ.17): ದಿವಸಕ್ಕೆ ಹದಿನೆಂಟು ತಾಸು ದೇಶಕ್ಕಾಗಿ ಕೆಲಸ‌ ಮಾಡುವ ಒಂಭತ್ತುವರೆ ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕಠಿಣ ಪರಿಶ್ರಮಿ, ಅಪ್ಪಟ ದೇಶಭಕ್ತ ನಮ್ಮ ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿ ಯನ್ನು ಮಾಡಿದ್ದು,  ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯ ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕೆ ಮಾಡಿದ್ದಾರೆ.

ರಾಜ್ಯಕ್ಕೆ ಅನುದಾನ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿದ್ದೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವು ಫೋಟೋಗಳನ್ನು ಎಡಿಟ್‌ ಮಾಡಿ ಪೋಸ್ಟ್ ಹಂಚಿಕೊಂಡಿದ್ದರು. ಇದಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣದ ಮೂಲಕ ತಿರುಗೇಟು ನೀಡಿದ್ದಾರೆ. 'ಯುಪಿಎ 2004-2014 ರ ಹತ್ತು ವರ್ಷದ ಆಡಳಿತದಲ್ಲಿ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ 81,795.19 ಕೋಟಿ ರೂ. ಹಾಗೂ ಅನುದಾನ ಹಂಚಿಕೆ  ರೂಪದಲ್ಲಿ 60779.84 ಕೋಟಿ ರೂ.  ಹಣ ಬಂದರೆ. ಮೋದಿ ಅವಧಿಯಲ್ಲಿ 2014-2023 ಡಿಸೆಂಬರ್ ವರೆಗೆ ತೆರಿಗೆ ಹಂಚಿಕೆಯಲ್ಲಿ 2,82,791 ಕೋಟಿ ರೂ. ಬಂದರೆ, ಅನುದಾನ ಹಂಚಿಕೆಯಲ್ಲಿ 2,08,882.02 ಕೋಟಿ ರೂ. ಬಂದಂತಹ ಹಣ ಇವರ ಕಣ್ಣಿಗೆ ಕಾಣುತ್ತಿಲ್ಲ.

ಕೇಂದ್ರದ ಸ್ಕಿಲ್‌ ಡೆವಲಪ್ಮೆಂಟ್ ಸಚಿವರಾಗಿದ್ದ ಅನಂತ ಕುಮಾರ್ ಹೆಗಡೆ ಅದರ ಸ್ಪೆಲ್ಲಿಂಗ್ ಹೇಳಲಿ!

ಮೇ ತಿಂಗಳಲ್ಲಿ 360, ಕೋಟಿ ರೂ.  ಬಿಡುಗಡೆಯಾಗಿದ್ದು, ಈಗ ಮತ್ತೆ 348 ಕೋಟಿ ರೂ. ಬಿಡುಗಡೆಗೆ ತೀರ್ಮಾನಿಸಿದೆ. ಇಷ್ಟಾದರೂ ಕೂಡ ರೈತರಿಗೆ ಬಿಡಿಗಾಸು ಕೊಡಲು ಸಾಧ್ಯವಾಗಿಲ್ಲ. ಪೂರ್ಣ ಪ್ರಮಾಣದಲ್ಲಿ ಪರಿಹಾರ ಕೊಡಲು ನಿಮ್ಮ ಬೊಕ್ಕಸ ಖಾಲಿಯಾಗಿದೆಯೇ ? ಕೃಷ್ಣಾ ಮೆಲ್ದಂಡೆ ಹಾಗೂ ಮಹಾದಾಯಿ ಎರಡೂ ಸುಪ್ರೀಂ ಕೋರ್ಟ್ ನಲ್ಲಿ ವ್ಯಾಜ್ಯ ಇರುವುದು ಗೊತ್ತಿದ್ದರೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡಿಸುವ ರಾಜಕಾರಣ ಏಕೆ ? ಈ ವರ್ಷ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೊಟಿ ರೂ. ಕೇಂದ್ತದ ಬಜೆಟ್ ನಲ್ಲಿದ್ದು ಅದನ್ನು ಪಡೆದುಕೊಳ್ಳಲಾಗದೇ ಗಾಢ ನಿದ್ರೆಯಲ್ಲಿದ್ದವರಾರು? 

ಕಳೆದ ಐದು ವರ್ಷದಲ್ಲಿ 30 ಸಾವಿರ ಕೋಟಿ ರಾಷ್ಟ್ರೀಯ ಹೆದ್ದಾರಿಗೆ ಮೋದಿ ಸರ್ಕಾರ ಹಣ ಒದಗಿಸಿದೆ. ನೀವು ಓಡಾಡುವ ಬೆಂಗಳೂರು ಮೈಸೂರು ಹೈವೆ ನಿರ್ಮಾಣದ ಸಂಪೂರ್ಣ ವೆಚ್ಚ ಮೋದಿ ಸರ್ಕಾರ ಒದಗಿಸಿರುವುದು ನಿಮ್ಮ ಅನುಭವಕ್ಕೆ ಬಂದಿಲ್ಲವೇ ? ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 1327.43 ಕೋಟಿ ರೂ. ಬಿಡುಗಡೆಯಾಗಿದೆ.  ಇದೇ ರೀತಿ ರೈಲ್ವೆ, ಬಂದರು, ಅಭಿವೃದ್ಧಿಗೆ ಮೋದಿಯ ಪಾಲು ನಿಮಗೆ ಕಾಣುತ್ತಿಲ್ಲವೇ ? ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 10990 ಕೋಟಿ ರೂ. ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 62 ಲಕ್ಷ  ಜನರಿಗೆ ಆರೋಗ್ಯದ ಚಿಕಿತ್ಸೆ ಕೊಟ್ಟಿರುವ ಮೋದಿಯವರ ನಿರಂತರ ಪರಿಶ್ರಮ ಹಾಗೂ ಕ್ರಿಯಾಶೀಲತೆಗೆ ಸಾಕ್ಷಿ. ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ 10 ಕೋಟಿ ಡೋಸ್ ಲಸಿಕೆ ಹಾಕಿಸಿದ್ದು ನಿದ್ರೆಯಲ್ಲಿರುವ ನಿಮಗೆಲ್ಲಿ ಕಾಣಿಸುತ್ತದೆ. 

Bengaluru FIR: ಒಂಟಿ ಮಹಿಳೆಯ ಕತ್ತು ಹಿಸುಕಿ ಪರಾರಿ, 800 ಸಿಸಿ ಟಿವಿಗಳಲ್ಲಿ ಕಂಡಿದ್ದು ಕಾಲಷ್ಟೇ!

ಕರ್ನಾಟಕವನ್ನು ಅಭಿವೃದ್ಧಿ ಶೂನ್ಯ ಮಾಡಿ ಅಧೊಗತಿಗೆ ತೆಗೆದುಕೊಂಡು ಹೋಗಿರುವ ನೀವು ನಿದ್ರೆಯಿಂದ ಇನ್ನೂ ಎಚ್ಚೆತ್ತುಕೊಳ್ಳದಿರುವುದೇ ಕರ್ನಾಟಕ ಜನರ ದೌರ್ಭಾಗ್ಯ' ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕೆ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ