ಮುಖ್ಯಮಂತ್ರಿಗೆ ಅಹವಾಲು ನೀಡಬೇಕೆ? ಫೆ.8ರಂದು ವಿಧಾನಸೌಧದ ಎದುರು ನಡೆಯಲಿರುವ ಬೃಹತ್ ಜನಸ್ಪಂದನ ಮಿಸ್ ಮಾಡಬೇಡಿ!

Published : Jan 25, 2024, 01:55 PM IST
ಮುಖ್ಯಮಂತ್ರಿಗೆ ಅಹವಾಲು ನೀಡಬೇಕೆ? ಫೆ.8ರಂದು ವಿಧಾನಸೌಧದ ಎದುರು ನಡೆಯಲಿರುವ ಬೃಹತ್ ಜನಸ್ಪಂದನ ಮಿಸ್ ಮಾಡಬೇಡಿ!

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ‘ಜನಸ್ಪಂದನ’ ಕಾರ್ಯಕ್ರಮ ಅಭೂತ ಪೂರ್ವ ಯಶಸ್ಸು ಕಂಡ ಎರಡೂವರೆ ತಿಂಗಳ ಬಳಿಕ ಫೆ.8ರಂದು ವಿಧಾನಸೌಧದ ಮುಂಭಾಗ ರಾಜ್ಯಮಟ್ಟದ 2ನೇ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. 

ಬೆಂಗಳೂರು (ಜ.25) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ‘ಜನಸ್ಪಂದನ’ ಕಾರ್ಯಕ್ರಮ ಅಭೂತ ಪೂರ್ವ ಯಶಸ್ಸು ಕಂಡ ಎರಡೂವರೆ ತಿಂಗಳ ಬಳಿಕ ಫೆ.8ರಂದು ವಿಧಾನಸೌಧದ ಮುಂಭಾಗ ರಾಜ್ಯಮಟ್ಟದ 2ನೇ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. 

ಅಂದು ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನ.27ರಂದು ಮೊದಲ ಜನಸ್ಪಂದನ ಕಾರ್ಯಕ್ರಮದ ವೇಳೆ ಬರೋಬ್ಬರಿ 3,812 ಮಂದಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಹಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ್ದರು.
ಅಲ್ಲದೆ, ಮೂರು ತಿಂಗಳಲ್ಲಿ ಮತ್ತೊಮ್ಮೆ ಜನಸ್ಪಂದನ ನಡೆಸುತ್ತೇನೆ. ಆ ವೇಳೆ ಅರ್ಜಿಗಳು ಹೆಚ್ಚು ಬಂದರೆ ತಳಮಟ್ಟದ ಅಧಿಕಾರಿಗಳನ್ನೇ ಹೊಣೆ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಹೀಗಾಗಿ ಫೆ.8ರಂದು ನಡೆಯಲಿರುವ ಜನಸ್ಪಂದನ ಕಾರ್ಯಕ್ರಮ ಕುತೂಹಲ ಮೂಡಿಸಿದೆ.ಜನಸ್ಪಂದನ ಸಿದ್ಧತೆಗೆ ಸಭೆ:

 

ಜನತಾ ದರ್ಶನವನ್ನು ಜನಸ್ಪಂದನ ಎಂದ ಸಿಎಂ: ಕುಮಾರಸ್ವಾಮಿ ಅಭಿನಂದನೆ..!

ಬುಧವಾರ 2ನೇ ಜನಸ್ಪಂದನದ ಸಿದ್ಧತಾ ಸಭೆ ನಡೆಸಿದ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್‌.ಕೆ. ಅತೀಕ್‌, ‘ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು ವಿಶೇಷ ಆಸಕ್ತಿ ವಹಿಸಿ ಸ್ಥಳದಲ್ಲೇ ಕುಂದು ಕೊರತೆ ನಿವಾರಿಸಬೇಕು. ಆಗಮಿಸುವ ವಿಶೇಷಚೇತನರು, ಹಿರಿಯ ನಾಗರಿಕರಿಗೆ ವಿಶೇಷ ವ್ಯವಸ್ಥೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜನಸ್ಪಂದನಕ್ಕೆ ಆಗಮಿಸುವ ಜನರ ಅನುಕೂಲಕ್ಕಾಗಿ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ಸಂಗೊಳ್ಳಿ ರಾಯಣ್ಣ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಬೇಕು. ಜತೆಗೆ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಾಹಾರ, ಊಟದ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶಿಸಿದರು.

ನಮ್ಮ ಸರ್ಕಾರ ಮಾನವೀಯತೆ ಎತ್ತಿ ಹಿಡಿದಿದೆ; .ಎಲ್ಲರಿಗೂ ನ್ಯಾಯ ಖಾತರಿಪಡಿಸುತ್ತದೆ: ಡಿಸಿಎಂ ಡಿಕೆ.ಶಿವಕುಮಾರ

ಪ್ರತ್ಯೇಕ ಕೌಂಟರ್‌ ವ್ಯವಸ್ಥೆ:ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರು ಹಾಗೂ ನಿಗದಿತ ಕೌಂಟರುಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಅಧಿಕಾರಿ ಹಾಗೂ ಸಿಬ್ಬಂದಿಗಳ ಫೆಸಿಲಿಟೇಷನ್‌ ತಂಡ ನಿಯೋಜಿಸುವಂತೆ ಅತೀಕ್‌ ನಿರ್ದೇಶನ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್