ಕೋಗಿಲು ಸಂತ್ರಸ್ತರ ಬಗ್ಗೆ ಚರ್ಚೆಗೆ ಇಂದು ಸಿಎಂ ಸಭೆ

Kannadaprabha News   | Kannada Prabha
Published : Dec 29, 2025, 09:16 AM IST
CM Siddaramaiah

ಸಾರಾಂಶ

ನಗರದ ಕೋಗಿಲು ಬಳಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯು ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಲಿದೆ.

ಬೆಂಗಳೂರು : ನಗರದ ಕೋಗಿಲು ಬಳಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯು ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಲಿದೆ.

ಕಸ ವಿಲೇವಾರಿ ಘಟಕದ ಜಾಗವನ್ನು ಅಕ್ರಮ ಒತ್ತುವರಿ

ನಗರದ ಕೋಗಿಲು ಲೇಔಟ್​​ ಬಳಿಯ ಕಸ ವಿಲೇವಾರಿ ಘಟಕದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದನ್ನು ಸರ್ಕಾರ ತೆರವುಗೊಳಿಸಿತ್ತು. ಇದರಿಂದ ನಿರಾಶ್ರಿತರಾದವರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಕರ್ನಾಟಕ ಸರ್ಕಾರ ಬುಲ್ಡೋಜರ್‌ ನ್ಯಾಯವನ್ನು ತಂದಿದೆ ಎಂದು ಟೀಕಿಸಿದ್ದರು.

ಸರ್ಕಾರ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳಬೇಕಾಗಿತ್ತು

ಕೇರಳದ ಸಂಸದ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಟ್ವೀಟ್‌ ಮಾಡಿ, ಇಂತಹ ವಿಚಾರದಲ್ಲಿ ಸರ್ಕಾರ ಎಚ್ಚರಿಕೆಯಿಂದ, ಮಾನವೀಯತೆ, ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ಕ್ರಮ ಕೈಗೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು ಪುನರ್‌ವಸತಿ ಕಲ್ಪಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದರು.

ಇದರಿಂದ ವಿಷಯವು ತೀವ್ರ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಭೆ ಕರೆಯಲಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಮನೆಗಳನ್ನು ಅರ್ಹರಿಗೆ ವಿತರಿಸಲು ನಿರ್ಧರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಾಂಧಿ ಹೆಸರ ಅಳಿಸಲು ಬಿಜೆಪಿ ಪಿತೂರಿ : ಸಿಎಂ
ಸಬ್ ಮರೀನ್‌ನಲ್ಲಿ ರಾಷ್ಟ್ರಪತಿ ಯಾನ