ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಸತತವಾಗಿ 3ನೇ ಬಾರಿಗೆ ಅಧಿಕಾರ ಪಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಬಹಳಷ್ಟು ಪಿತೂರಿ ನಡೆಸಿದ್ದು, ಏನೇ ತಿಪ್ಪರಲಾಗ ಹಾಕಿದರೂ ಸಹ ಕಾಂಗ್ರೆಸ್ ಗ್ಯಾರಂಟಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಗ್ಯಾರಂಟಿ ಬಗ್ಗೆ ರಾಜ್ಯದ ಜನರು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು(ಅ.09): ಒಳಮೀಸಲಾತಿ ವಿಚಾರವಾಗಿ ಶೀಘ್ರ ದಲ್ಲಿಯೇ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ಒತ್ತಾಯಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಂಗಳವಾರ ಕಚೇರಿಯಲ್ಲಿ ಒಳಮೀಸಲಾತಿ ವಿಚಾರವಾಗಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಒಳಮೀಸಲಾತಿ ವಿಚಾರವಾಗಿ ರಾಜ್ಯದ ಪ್ರಮುಖರ ಜತೆ ಸಮಾಲೋಚನಾ ಸಭೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಆಡಳಿತ ಅವಧಿಯಲ್ಲಿ ಮೀಸಲಾತಿ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ವರ್ಗೀಕರಣ ಮಾಡುವ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿದ್ದರು. ಇವುಗಳ ಕುರಿತು ಚರ್ಚಿಸಿ ಒಳ ಮೀಸಲಾತಿ ವಿಚಾರವಾಗಿ ಸರ್ವರೊಂದಿಗೆ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರಕ್ಕೆ ಸಾಕಷ್ಟು ಶಿಫಾರಸುಗಳನ್ನು ಮಾಡಿತ್ತು. ಆ ಶಿಫಾರಸ್ಸುಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಯಥಾವತ್ತಾಗಿ ಜಾರಿಗೊಳಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಈ ಸಂಬಂಧ ಬಿಜೆಪಿನಿಯೋಗವುಮುಖ್ಯಮಂತ್ರಿಗಳನ್ನು ಶೀಘ್ರವೇ ಭೇಟಿ ಮಾಡಲಿದೆ ಎಂದರು.
undefined
ವಿಜಯೇಂದ್ರ ಭೇಟಿ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು
ಹರ್ಯಾಣದಲ್ಲಿ ಮೋದಿ ಗ್ಯಾರಂಟಿಗೆ ಜನರ ಮಣೆ
ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಸತತವಾಗಿ 3ನೇ ಬಾರಿಗೆ ಅಧಿಕಾರ ಪಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಬಹಳಷ್ಟು ಪಿತೂರಿ ನಡೆಸಿದ್ದು, ಏನೇ ತಿಪ್ಪರಲಾಗ ಹಾಕಿದರೂ ಸಹ ಕಾಂಗ್ರೆಸ್ ಗ್ಯಾರಂಟಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಗ್ಯಾರಂಟಿ ಬಗ್ಗೆ ರಾಜ್ಯದ ಜನರು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಪ್ರಜ್ಞಾವಂತ ಜನರು ಮೋದಿ ಅವರ ನಾಯಕತ್ವಕ್ಕೆ ಇನ್ನಷ್ಟು ಹೆಚ್ಚು ಪುಷ್ಠಿ ಕೊಟ್ಟಿದ್ದಾರೆ. ಜಮ್ಮು ಕಾಶ್ಮೀರದಲ್ಲೂ ಬಿಜೆಪಿ ದೊಡ್ಡ ಸಾಧನೆ ಮಾಡಿದೆ. ಹರ್ಯಾಣ ಫಲಿತಾಂಶವು ಮುಂಬರುವ ಮಹಾರಾಷ್ಟ್ರ ರಾಜ್ಯದ ಚುನಾವಣೆಯಲ್ಲಿ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ತಿಳಿಸಿದರು.