
ಮೈಸೂರು : ಮೈಸೂರು ಪೊಲೀಸರಿಗೆ ಸಿಎಂ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಮಿನೀಟ್ ಕಾಟ ಹೆಚ್ಚಾಗಿದೆ. ಯಾವ ವರ್ಗಾವಣೆ ಆಗ ಬೇಕಾದರೆ ಸಿಎಂ ಪುತ್ರನಿಗೆ ತೆರಿಗೆ ಕಟ್ಟ ಬೇಕು. ಕಲೆಕ್ಷನ್ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ. ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡ್ತಿವೋ ಅಂತಾ ಪೈಪೋಟಿ ನಡೆಯುತ್ತಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಯಾವ ಜಾತಿಯವನೂ ಆರೋಪಿ ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಮೈಸೂರು ಪೊಲೀಸರಿಗೆ ಮಿನೀಟ್ ಕಾಟ, ವರ್ಗಾವಣೆ ಕಾಟ, ಜಾತಿ ಕಾಟ ಜಾಸ್ತಿ ಆಗಿದೆ ಎಂದು ಅವರು ದೂರಿದರು.
ಮೈಸೂರಿನಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ. ಅದರ ಮೇಲೂ ಪೊಲೀಸರ ರೈಡ್ ಮಾಡಲು ಹೆದರುತ್ತಿದ್ದಾರೆ. ಯಾವ ಸಚಿವನ, ಶಾಸಕನ ಫೋನ್ ಬರುತ್ತದೆ ಅಂತಾ ಪೊಲೀಸರಿಗೆ ಭಯ ಆಗಿದೆ. ಮಿನೀಟ್ ಗೆ ದುಡ್ಡು ತೆಗೆದುಕೊಂಡು ಪೊಲೀಸರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಸಿದ್ದರಾಮಯ್ಯ ಕುರ್ಚಿ ಖಾಲಿಯಾದರೆ ತನಗೆ ಸಿಗುತ್ತೆ ಅಂತಾ ಗೃಹ ಸಚಿವರು ಇಲಾಖೆಯನ್ನೇ ಮೆರೆತಿದ್ದಾರೆ. ಸಿಎಂ ಅವರೇ ನಿಮ್ಮ ಮಗನಿಗೆ ಹೇಳಿ ವರ್ಗಾವಣೆ ದಂಧೆ ನಿಲ್ಲಿಸಲು. ಶಾಸಕರಿಗೆ ವಸೂಲಿ ನಿಲ್ಲಿಸಲು ಹೇಳಿ. ಇಲ್ಲ ನೀವೇ ವಸೂಲಿ ಮಾಡಲು ಬಿಟ್ಟಿದ್ದೀರಾ ಎಂದು ಅವರು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರೇ ನಿಮಗೆ ಹೆಣ್ಣು ಮಕ್ಕಳು ಇಲ್ಲದೆ ಇರಬಹುದು. ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳು ಇಲ್ವಾ? ಬಾಲಕಿ ಅತ್ಯಾ*ರ ಬಗ್ಗೆ ಮಾತಾಡಿ. ನಿಮ್ಮ ಮಗನಿಗೆ ಬುದ್ದಿ ಹೇಳಿ. ವರ್ಗಾವಣೆ ದಂಧೆ ನಿಲ್ಲಿಸಲು ಹೇಳಿ.
- ಪ್ರತಾಪ್ ಸಿಂಹ, ಮಾಜಿ ಸಂಸದರು
ಮುಡಾ ಹಗರಣ- 500 ಕೋಟಿ ಮೌಲ್ಯದ ಸೈಟುಗಳನ್ನು ಜಪ್ತಿ ಸ್ವಾಗತಾರ್ಹ: ಟಿ.ಎಸ್. ಶ್ರೀವತ್ಸ
ಮೈಸೂರು : ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧವಾಗಿದೆ. ಅವರ ಹತ್ತಿರ ಇರುವಂತಹ ಸೈಟುಗಳನ್ನು ಜಪ್ತಿ ಮಾಡಿದ್ದಾರೆ. 500 ಕೋಟಿ ಮೌಲ್ಯದ ಸೈಟುಗಳನ್ನು ಇಡಿ ಜಪ್ತಿ ಮಾಡಿರುವುದು ಸ್ವಾಗತಾರ್ಹ ಎಂದು ಶಾಸಕ ಟಿ.ಎಸ್. ಶ್ರೀವತ್ಸ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಕ್ರಮ ಹೊರ ಬರುತ್ತದೆ ಎಂಬ ವಿಶ್ವಾಸವಿದೆ. ಇನ್ನು ವಶಪಡಿಸಿಕೊಂಡಿರುವ ಸೈಟುಗಳಿಗೆ ಬೋರ್ಡ್ ಹಾಕಬೇಕು ಎಂದು ಎಂಡಿಎ ಅಧಿಕಾರಿಗಳಿಗೆ ಸಲಹೆ ನೀಡಿದರು.
ಮುಡಾ 50:50 ಅನುಪಾತದಲ್ಲಿ ಅಕ್ರಮವಾಗಿ ಹಂಚಿದ್ದ ಸೈಟುಗಳ ತನಿಖೆ ಆಗುತ್ತಿದೆ. 4525 ಸೈಟುಗಳ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲವನ್ನೂ ವಶಪಡಿಸಿಕೊಳ್ಳುವ ವಿಶ್ವಾಸವಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಕುಟುಂಬದವರು 14 ಸೈಟುಗಳನ್ನು ವಾಪಸ್ ಕೊಟ್ಟಿದ್ದಾರೆ. ಉಳಿದವರ ಸೈಟುಗಳು ಕೂಡ ಎಂಡಿಎ ವಶಕ್ಕೆ ಬರಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ