ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅನಿವಾರ್ಯ: ಸಚಿವ ಈಶ್ವರ್‌ ಖಂಡ್ರೆ

By Kannadaprabha News  |  First Published Oct 3, 2024, 4:47 AM IST

ವನ್ಯಜೀವಿಗಳ ಸಂಖ್ಯೆಯಲ್ಲಿನ ಹೆಚ್ಚಳ ಹಾಗೂ ಅರಣ್ಯ ಪ್ರದೇಶ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಕಾಡಂಚಿನ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅನಿವಾರ್ಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಭಿಪ್ರಾಯಪಟ್ಟರು.
 


ಬೆಂಗಳೂರು (ಅ.03): ವನ್ಯಜೀವಿಗಳ ಸಂಖ್ಯೆಯಲ್ಲಿನ ಹೆಚ್ಚಳ ಹಾಗೂ ಅರಣ್ಯ ಪ್ರದೇಶ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಕಾಡಂಚಿನ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅನಿವಾರ್ಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಭಿಪ್ರಾಯಪಟ್ಟರು. 70ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಕಬ್ಬನ್‌ ಉದ್ಯಾನದಿಂದ ಲಾಲ್‌ಬಾಗ್‌ವರೆಗೆ ನಡೆದ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಕೃತಿ ಮತ್ತು ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ವನ್ಯಜೀವಿಗಳ ಪಾತ್ರ ಮಹತ್ವದ್ದಾಗಿದೆ. ಆದರೆ, ಹಲವು ಕಾರಣಗಳಿಂದ ಹಲವು ವನ್ಯಜೀವಿಗಳು ಅಳಿವಿನಂಚಿನಲ್ಲಿವೆ. 

ಅದರಲ್ಲಿ ಕೆಲವು ನಶಿಸಿ ಹೋಗಿವೆ. ಹೀಗಾಗಿ ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ. ಜತೆಗೆ ಕಾಡಂಚಿನ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಬೇಕಿದೆ. ಈ ಬಾರಿಯ ವನ್ಯಜೀವಿ ಸಂರಕ್ಷಣೆಯ ಧ್ಯೇಯ ವಾಕ್ಯವೂ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಎಂಬುದಾಗಿದೆ ಎಂದರು. ಜಾಗೃತಿ ನಡಿಗೆಯಲ್ಲಿ ಚಲನಚಿತ್ರ ನಟ ರಿಷಬ್‌ ಶೆಟ್ಟಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್‌ ಕುಮಾರ್‌ ದೀಕ್ಷಿತ್‌, ಸುಭಾಷ್‌ ಮಾಲ್ಕಡೆ ಇದ್ದರು.

Latest Videos

undefined

ರಾಮನಗರವನ್ನು ಬರಪೀಡಿತ ತಾಲೂಕಾಗಿ ಘೋಷಿಸಲು ಒತ್ತಾಯಿಸುವೆ: ಶಾಸಕ ಇಕ್ಬಾಲ್ ಹುಸೇನ್

ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು: ರಸ್ತೆಗಳು ಚೆನ್ನಾಗಿದ್ದರೆ ಮಾತ್ರ ನಮ್ಮ ಭಾಗದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಹಾಗಾಗಿ ಭಾಲ್ಕಿ ತಾಲೂಕಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಪ್ಯಾಕೇಜ್‌ ಸಂಖ್ಯೆ 617ರ ಅಡಿಯಲ್ಲಿನ 25ಕೋಟಿ ರು. ಮೊತ್ತದ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಅರಣ್ಯ. ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಹೇಳಿದರು. 

ಅವರು ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮದಲ್ಲಿ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಪ್ಯಾಕೇಜ್‌ ಸಂಖ್ಯೆ 617 ರ ಅಡಿಯಲ್ಲಿನ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ರಸ್ತೆಗಳು ಚೆನ್ನಾಗಿ ಇಲ್ಲದಿದ್ದರೆ ಮಕ್ಕಳು ಶಾಲಾ ಕಾಲೇಜುಗಳಿಗೆ ಹೋಗಲು, ಬಾಣಂತಿಯರಿಗೆ ಹೆರಿಗೆ ಸಮಯದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಗಲ್ಲ ಮತ್ತು ಬಹಳಷ್ಟು ಅಪಘಾತಗಳು ಸಂಭವಿಸುತ್ತವೆ. ನಾನು ಶಾಸಕನಾಗಿದ್ದಾಗ ಲಂಜವಾಡ ರಸ್ತೆ ಹೇಗಿತ್ತು ಎಂದರೆ ಗಾಡಿಗಳು ಕೆಳಗೆ ಮೇಲೆ ಅಲುಗಾಡುತ್ತಿದ್ದವು ಯಾವಾಗ ವಾಹನಗಳು ಉರುಳಿ ಬೀಳುತ್ತವೆ ಎಂದು ಭಯವಾಗುತ್ತಿತ್ತು ಎಂದರು.

ಭಾಲ್ಕಿ ಚಿಂಚೋಳಿ ರಾಜ್ಯ ಹೆದ್ದಾರಿ 75ರ ಆಯ್ದ ಭಾಗಗಳ ಸುಧಾರಣೆಗೆ 869ಲಕ್ಷ ರು. ಹಾಗೂ ಔರಾದ್‌ ಸದಾಶಿವಗಡ್‌ ರಾಜ್ಯ ಹೆದ್ದಾರಿ 34ರ ಆಯ್ದ ಭಾಗಗಳ ಸುಧಾರಣೆ 511ಲಕ್ಷ ರು. ಹಾಗೂ ಬಾಲಗಾಂವ್‌ (ಮಹಾರಾಷ್ಟ್ರ ಗಡಿ) ಯಿಂದ ಧರ್ಮಪೂರ (ತೆಲಂಗಾಣ ಗಡಿ) ವರೆಗೆ ರಸ್ತೆ ಸುಧಾರಣೆ 1120ಲಕ್ಷ ರು. ಗಳ ಒಟ್ಟು 25 ಕೋಟಿ ರು. ಗಳ ಅಂದಾಜು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರವನ್ನು ಹೊಡೆದೋಡಿಸಲು ಮೈತ್ರಿ ಅಗತ್ಯ: ನಿಖಿಲ್ ಕುಮಾರಸ್ವಾಮಿ

ಲಂಜವಾಡ ಗ್ರಾಮದಲ್ಲಿ 81 ಲಕ್ಷ ರು.ಗಳ ಸಿ.ಸಿ ರಸ್ತೆ. ಚರಂಡಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದ್ದೇನೆ. ಜಲ ಜೀವನ ಮಿಷನ್‌ 23 ಲಕ್ಷ ರು. ಅಂದಾಜು ವೆಚ್ಚದ ಕಾಮಗಾರಿ ಈಗಾಗಲೇ ಮುಗಿದಿದೆ. ಈ ಗ್ರಾಮಕ್ಕೆ ಪಶು ಚಿಕಿತ್ಸಾಲಯದ ಬೇಡಿಕೆ ಇರುವುದರಿಂದ ಅದನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ ಲಂಜವಾಡ ಗ್ರಾಮಕ್ಕೆ ನೀರು ಬರುತ್ತವೆ ಅದರ ಕಾರ್ಯಾರಂಭ ಮಾಡಿದ್ದೇನೆ ಎಂದರು.

click me!