ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.10 ಕೋಟಿ ರು. ಸಂಗ್ರಹವಾಗಿ ಮತ್ತೊಮ್ಮೆ ಮಾದಪ್ಪ ಕೋಟ್ಯಾಧಿಪತಿಯಾಗಿದ್ದಾನೆ.
ಹನೂರು (ನ.09): ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.10 ಕೋಟಿ ರು. ಸಂಗ್ರಹವಾಗಿ ಮತ್ತೊಮ್ಮೆ ಮಾದಪ್ಪ ಕೋಟ್ಯಾಧಿಪತಿಯಾಗಿದ್ದಾನೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹದೇಶ್ವರಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭವಾಗಿ ಸಂಜೆವರೆಗೂ ನಿರಂತರವಾಗಿ ನಡೆಯಿತು.
ಅಮಾವಾಸ್ಯೆ, ಸರ್ಕಾರಿ ರಜೆ ದಿನಗಳು, ಮಹಾಲಯ ಅಮಾವಾಸ್ಯೆಯ ಜಾತ್ರಾ ಮಹೋತ್ಸವ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಮಾದಪ್ಪನ ಭಕ್ತರು ಕಾಣಿಕೆಯ ರೂಪದಲ್ಲಿ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,10,78,014 ರು. ಸಂಗ್ರಹವಾಗಿದೆ.ಲೋಹದ ಮೌಲ್ಯಮಾಪಕರಿಗೆ ಅನಾರೋಗ್ಯದ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿಯನ್ನು ಶೇಖರಿಸಿ ಇಡಲಾಗಿದೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಲೆಕ್ಕ ಅಧೀಕ್ಷಕ ನಾಗೇಶ್, ಎಸ್‌ಡಿಎ ಸರಗೂರು ಮಹದೇವಸ್ವಾಮಿ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
undefined
ಕುರ್ಚಿ ಉಳಿಸಿಕೊಳ್ಳಲು ಸಿದ್ದು, ಕಿತ್ತುಕೊಳ್ಳಲು ಡಿಕೆಶಿ ಸಭೆ ಮೇಲೆ ಸಭೆ: ಸಿ.ಟಿ.ರವಿ
ಶ್ರೀಕಂಠೇಶ್ವರ ಸ್ವಾಮಿ ದೇವಾಲಯ ಹುಂಡಿ ಎಣಿಕೆ: ನಂಜನಗೂಡು ಪಟ್ಟಣದ ಪುರಾಣ ಪ್ರಸಿದ್ದ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ 35 ಹುಂಡಿಗಳಲ್ಲಿ 1.25 ಕೋಟಿ ಹಣ ಸಂಗ್ರಹವಾಗಿದೆ. ದಾಸೋಹ ಭವನದಲ್ಲಿ ಬುಧವಾರ ಹುಂಡಿಗಳನ್ನು ತೆರೆದು ಏಣಿಕೆ ಕಾರ್ಯ ನಡೆಸಲಾಯಿತು. ನಗದು 1,25,33,038, ಚಿನ್ನ 115 ಗ್ರಾಂ, 2.4 ಕೆ.ಜಿ. ಬೆಳ್ಳಿ ಹಾಗೂ 12 ವಿದೇಶಿ ಕರೆನ್ಸಿಗಳು ದೊರೆತಿವೆ. ಪಟ್ಟಣದ ಬ್ಯಾಂಕ್ ಆಫ್ಬರೋಡ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ, ನೂರಕ್ಕೂ ಹೆಚ್ಚು ಮಹಿಳಾ ಸ್ವಸಹಾಯ ಸಂಘದ ಮಹಿಳಾ ಸದಸ್ಯೆಯರು ಹುಂಡಿಯ ಹಣ ಏಣಿಕೆ ಕಾರ್ಯದಲ್ಲಿ ನೆರವಾದರು. ದೇವಾಲಯದ ಇಒ ಜಗದೀಶ್ಕುಮಾರ್, ಬ್ಯಾಂಕ್ಆಫ್ಬರೋಡ ವ್ಯವಸ್ಥಾಪಕ ಟೆ.ಕೆ. ನಾಯಕ್, ಲೆಕ್ಕಾಧಿಕಾರಿ ಗುರುಮಲ್ಲಯ್ಯ ಇದ್ದರು.