ಏಕರೂಪದ ಪಠ್ಯಕ್ಕೆ ಕಾಲೇಜು ಉಪನ್ಯಾಸಕರ ವಿರೋಧ

By Kannadaprabha NewsFirst Published Jun 8, 2020, 10:47 AM IST
Highlights

ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜು ಉಪನ್ಯಾಸಕರ ವೇತನ ವಿಳಂಬ, ವರ್ಗಾವಣೆ ಸಮಸ್ಯೆ, ವೇತನ ಹೆಚ್ಚಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಪದಾಧಿಕಾರಿಗಳು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು (ಜೂ. 08):  ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜು ಉಪನ್ಯಾಸಕರ ವೇತನ ವಿಳಂಬ, ವರ್ಗಾವಣೆ ಸಮಸ್ಯೆ, ವೇತನ ಹೆಚ್ಚಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಪದಾಧಿಕಾರಿಗಳು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ವಿವಿಗಳಲ್ಲಿ ಏಕರೂಪದ ಪಠ್ಯ ಬೇಡ: ಉನ್ನತ ಶಿಕ್ಷಣ ಸಚಿವರಿಗೆ ಬರಗೂರು ಪತ್ರ

ವಿಧಾನ ಪರಿಷತ್‌ ಸದಸ್ಯ ಅರುಣ್‌ ಶಹಾಪುರ್‌ ನೇತೃತ್ವದಲ್ಲಿ ಇತ್ತೀಚೆಗೆ ಆಯುಕ್ತರನ್ನು ಭೇಟಿ ಮಾಡಿದ ಸಂಘದ ನಿಯೋಗ, ಪದವಿ ಉಪನ್ಯಾಸಕರ ವೇತನ ಬಿಡುಗಡೆ ವಿಳಂಬವಾಗುತ್ತಿದೆ. ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಕೊರತೆ ಕಾಡುತ್ತಿದೆ. ಪದವಿ ಕಾಲೇಜುಗಳಲ್ಲಿನ ಉಪನ್ಯಾಸಕರ ಕೊರತೆ ನೀಗಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಬೇಕು. ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ಪಠ್ಯಕ್ರಮ ಜಾರಿಗೆ ನಮ್ಮ ವಿರೋಧವಿದೆ. ಇದರಿಂದ ವಿವಿಗಳ ಸ್ವಾಯತ್ತೆಗೆ ಧಕ್ಕೆಯಾಗಲಿದೆ ಎಂಬುದು ಸೇರಿದಂತೆ ಹತ್ತಾರು ಬೇಡಿಕೆ ಈಡೇರಿಕೆ ಹಾಗೂ ಸಮಸ್ಯೆಗಳ ಪರಿಹಾರ ಕೋರಿ ಮನವಿ ಸಲ್ಲಿಸಿದರು.

ಉಪನ್ಯಾಸಕರ ಎಲ್ಲ ಬೇಡಿಕೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸಿದ ಆಯುಕ್ತರು ಸರ್ಕಾರದೊಂದಿಗೆ ಚರ್ಚಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವ ಭರವಸೆ ನೀಡಿದರು ಎಂದು ಸಂಘದ ಅಧ್ಯಕ್ಷ ರಘು ಅಕ್ಮಂಚಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!