
ಬೆಂಗಳೂರು(ಜ.23): ರಾಜ್ಯದಲ್ಲಿ ಈ ಹಿಂದೆ ನಡೆದಿದ್ದ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯ ಏಕ ಸದಸ್ಯ ಆಯೋಗವು ಸೋಮವಾರ ಸರ್ಕಾರಕ್ಕೆ ಬರೋಬ್ಬರಿ 471 ಪುಟಗಳ ವರದಿಯನ್ನು ಸಲ್ಲಿಸಿದೆ.
ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನ್ಯಾ.ಬಿ.ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಆಯೋಗದ ವರದಿಯನ್ನು ಸಲ್ಲಿಸಿದರು. ಮಾಹಿತಿ ಪ್ರಕಾರ, 472 ಪುಟಗಳ ವರದಿಯಲ್ಲಿ ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ 28 ಸಾಕ್ಷ್ಯಾಧಾರಗಳು ಹಾಗೂ 324 ಪೂರಕ ದಾಖಲೆಗಳನ್ನು ಆಯೋಗವು ದಾಖಲಿಸಿದೆ. ಇದರ ಜೊತೆಗೆ ಸರ್ಕಾರದ ನಿರ್ದೇಶನದಂತೆ ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳು ನಡೆಯದಂತೆ, ಪಾರದರ್ಶಕವಾಗಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ನೇಮಕಾತಿ ನಡೆಸಲು ಯಾವೆಲ್ಲಾ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆಯೂ ಆಯೋಗವು ಹಲವು ಶಿಫಾರಸುಗಳನ್ನು ಮಾಡಿದೆ ಎಂದು ತಿಳಿದು ಬಂದಿದೆ.
ಪಿಎಸ್‌ಐ ನೇಮಕಾತಿ ಅಕ್ರಮ: ಅಶ್ವತ್ಥ್, ಎಚ್ಡಿಕೆಗೆ ಆಯೋಗದ ನೋಟಿಸ್
ನ್ಯಾ.ಬಿ. ವೀರಪ್ಪ ಅವರ ಆಯೋಗವು ಮುಚ್ಚಿದ ಲಕೋಟೆಯಲ್ಲಿ ವರದಿ ನೀಡಿದೆ. ವರದಿ ಯನ್ನು ನಾನು ಕೂಡ ನೋಡಿಲ್ಲ. ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ