Coronavirus| ಕೋವಿಡ್‌ನಿಂದ ಮೃತ ಪೊಲೀಸ್‌ ಕುಟುಂಬಕ್ಕೆ ಪರಿಹಾರ ವಿತರಣೆ

By Kannadaprabha NewsFirst Published Nov 16, 2021, 10:30 AM IST
Highlights

*   ಮ್ಯಾನ್‌ಕೈಂಡ್‌ ಫಾರ್ಮಾ ಕಂಪನಿ’ಯಿಂದ ತಲಾ 3 ಲಕ್ಷ ಪರಿಹಾರ
*   ನೊಂದ ಪೊಲೀಸ್‌ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಪ್ರವೀಣ್‌ ಸೂದ್‌
*   ಪೊಲೀಸ್‌ ಕುಟುಂಬಗಳಿಗೆ ಮ್ಯಾನ್‌ಕೈಂಡ್‌ ಫಾರ್ಮಾ ಕಂಪನಿಯಿಂದ ಸಣ್ಣ ಸಹಾಯ
 

ಬೆಂಗಳೂರು(ನ.16): ರಾಜ್ಯದಲ್ಲಿ(Karnataka) ಕೊರೋನಾ(Coronavirus) ಸೋಂಕಿನಿಂದ ಮೃತಪಟ್ಟಿದ್ದ 90 ಪೊಲೀಸರ ಕುಟುಂಬಗಳಿಗೆ ದೆಹಲಿ(Delhi) ಮೂಲದ ‘ಮ್ಯಾನ್‌ಕೈಂಡ್‌ ಫಾರ್ಮಾ ಕಂಪನಿ’ಯಿಂದ ತಲಾ 3 ಲಕ್ಷ ರು.ನಂತೆ ಒಟ್ಟು 2.70 ಕೋಟಿ ರು. ಮೊತ್ತದ ಪರಿಹಾರದ ಚೆಕ್‌ಗಳನ್ನು ವಿತರಿಸಲಾಗಿದೆ.

ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸೋಮವಾರ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌(Praveen Sood) ಅವರು ಪರಿಹಾರದ ಚೆಕ್‌ಗಳನ್ನು(Compensation check) ವಿತರಿಸಿ ಮಾತನಾಡಿ, ಕೊರೋನಾದಿಂದ ಮೃತಪಟ್ಟ ಪೊಲೀಸರ ಕುಟುಂಬಗಳಿಗೆ(Police Families) ರಾಜ್ಯ ಸರ್ಕಾರ(Government of Karnataka) ತಲಾ 30 ಲಕ್ಷ ರು. ಪರಿಹಾರ ನೀಡಿದೆ. ಅಂತೆಯೆ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ(Government Job) ಸಹ ನೀಡಲಾಗುತ್ತಿದೆ. ಹೀಗಾಗಿ ನಿಮ್ಮೊಂದಿಗೆ ಸರ್ಕಾರವಿದ್ದು, ಇನ್ನು ಮುಂದೆಯೂ ಧೈರ್ಯದಿಂದ ಇರುವಂತೆ ನೊಂದ ಪೊಲೀಸ್‌ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಮ್ಯಾನ್‌ಕೈಂಡ್‌ ಫಾರ್ಮಾ ಕಂಪನಿಯ(Mankind Pharma Company) ಸೀನಿಯರ್‌ ಡಿವಿಷನಲ್‌ ಮ್ಯಾನೇಜರ್‌ ಮನೀಶ್‌ ಅರೋರಾ ಇದ್ದರು.

ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಣೆ ಅವಧಿಯಲ್ಲಿ ಪ್ರಾಣ ಕಳೆದುಕೊಂಡ ಪೊಲೀಸ್‌ರ ಕುಟುಂಬಗಳಿಗೆ ಕಂಪನಿಯಿಂದ ಸಣ್ಣ ಸಹಾಯ(Help) ಮಾಡಲಾಗುತ್ತಿದೆ ಎಂದು ಹೇಳಿದರು.

40,000 ಶಾಲಾ ಸಿಬ್ಬಂದಿಗಿಲ್ಲ ಕೋವಿಡ್‌ ನೆರವು

ಗ್ರಾಪಂ ಗುತ್ತಿಗೆ ನೌಕರರಿಗೂ ಕೋವಿಡ್‌ ಪರಿಹಾರ

ಬೆಂಗಳೂರು: ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರನ್ನು ಕಾಯಂ ಮಾಡುವುದು ಕಷ್ಟ. ಆದರೆ, ಒಂದು ವೇಳೆ ಗುತ್ತಿಗೆ ನೌಕರರು ಕೋವಿಡ್‌(Covid19) ಸೋಂಕಿನಿಂದ ಸಾವನ್ನಪ್ಪಿದರೆ ಅವರ ಕುಟುಂಬದವರಿಗೆ 30 ಲಕ್ಷ ರು. ಪರಿಹಾರ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ(KS Eshwarappa) ಹೇಳಿದ್ದರು. 

ಕಾಯಂ ಆಗಿರುವ ಮತ್ತು ಆಗದಿರುವ ನೌಕರರಿಗೂ ಕೋವಿಡ್‌ ಪರಿಹಾರ ಸಿಗಲಿದ್ದು, ಈವರೆಗೆ 186 ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿವೆ. ಬಳ್ಳಾರಿ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತ್‌ ಗ್ರಾಮ ಮಟ್ಟದ ಕಾರ್ಯಪಡೆಯಲ್ಲದೆ 50 ಮನೆಗಳಿಗೆ ಒಂದು ಸಮಿತಿ ರಚನೆ ಮಾಡಿದ್ದನ್ನು ಕೇಂದ್ರ ಸರ್ಕಾರ(Central Government) ಅಭಿನಂದಿಸಿದೆ. ಜಲಜೀವನ್‌ ಮಿಷನ್‌ನಡಿ(Jaljeevan Mission) ಶುದ್ಧ ಕುಡಿಯುವ ನೀರಿನ ಏಳು ಬೃಹತ್‌ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕೋವಿಡ್‌ ಪರಿಹಾರ ನಿಧಿಗೆ ವೇತನ ನೀಡಿ ಮಾದರಿಯಾದ ಬಸ್‌ ಕಂಡಕ್ಟರ್‌..!

ನರೇಗಾದಡಿ 13 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡಲಾಗಿದ್ದು, ಈಗಾಗಲೇ 4.40 ಕೋಟಿ ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. 9.10 ಲಕ್ಷ ಕಾಮಗಾರಿಗಳು ಪ್ರಾರಂಭವಾಗಿವೆ. ಜಲಜೀವನ್‌ ಮಿಷನ್‌ನಡಿಯಲ್ಲಿ ಪ್ರತಿಯೊಂದು ಮನೆಗೂ ನಳ ಸಂಪರ್ಕ ನೀಡಲಾಗುತ್ತಿದೆ. ಪ್ರತಿ ದಿನ ತಲಾ 55 ಲೀಟರ್‌ ನೀರು ಪೂರೈಸಲಾಗುತ್ತಿದೆ. ಕೆಲವೆಡೆ ಪೈಪ್‌ಲೈನ್‌ ಹಾಕಲಾಗಿದ್ದರೂ ಕೆಲವು ಮನೆಗಳಿಗೆ ನಳದ ಸಂಪರ್ಕ ಇಲ್ಲ. ಇದರ ಕಾಮಗಾರಿ ಮುಂದುವರೆಯಲಿದೆ. ನಳದ ನೀರಿನ ಸಂಪರ್ಕಕ್ಕೆ ಯಾವುದೇ ದರವನ್ನು ನಿಗದಿ ಮಾಡಿಲ್ಲ. ಆದರೆ ಗ್ರಾಮ ಪಂಚಾಯ್ತಿಗಳೇ ನೀರಿನ ದರ ನಿಗದಿ ಮಾಡಲಿದೆ. ಪ್ರತಿ ತಿಂಗಳಿಗೆ 100 ರು. ನಿಗದಿಯಾಗಿದ್ದರೂ ಕೆಲವೆಡೆ ಆ ದರವನ್ನು ನೀಡಲಾಗುತ್ತಿಲ್ಲ ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಒತ್ತು ಕೊಟ್ಟಿದ್ದು, ಜಾಗೃತಿ ಮೂಡಿಸುವ ಕೆಲಸವೂ ನಡೆಯುತ್ತಿದೆ. 1800 ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ ಕೆಲಸ ಮುಗಿಯುತ್ತಿದ್ದು, ಕೆಲವೆಡೆ ತ್ಯಾಜ್ಯ ವಿಲೇವಾರಿಗೆ ಸ್ಥಳ ಸಿಗುತ್ತಿಲ್ಲ. 22 ಲಕ್ಷ ನರೇಗಾ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೋವಿಡ್‌ ಲಸಿಕೆ ನೀಡಲಾಗಿದೆ. ಜಾಬ್‌ಕಾರ್ಡ್‌(Jobcard)ಹೊಂದಿರುವ ಖಾತೆಗಳಿಗೆ ನೇರವಾಗಿ ನರೇಗಾ(NAREGA) ಕಾಮಗಾರಿಯ ಹಣ ಸಂದಾಯವಾಗಲಿದೆ ಎಂದು ವಿವರಿಸಿದರು.
 

click me!