ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದಿಂದ ಸಮರ್ಥ ವಾದ, ಸಿಎಂ ಬೊಮ್ಮಾಯಿ

By Kannadaprabha News  |  First Published Nov 30, 2022, 7:56 AM IST

ದೆಹಲಿಯಲ್ಲಿ ಅಡ್ವೋಕೇಟ್‌ ಜನರಲ್‌ ರೋಹಟಗಿ ಜತೆ ಚರ್ಚೆ, ಕೋರ್ಟಲ್ಲಿ ಮೇಂಟೈನಬಲಿಟಿ ಕುರಿತಾಗಿ ವಿಚಾರಣೆ


ನವದೆಹಲಿ(ನ.30):  ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣದಲ್ಲಿ ಕರ್ನಾಟಕ ಸಮರ್ಥವಾಗಿ ವಾದ ಮಂಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಹಿರಿಯ ನ್ಯಾಯವಾದಿ ಮುಕುಲ್‌ ರೋಹಟಗಿ ಅವರ ನಿವಾಸದಲ್ಲಿ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಚ್‌ ಜನರಲ್‌ ರೊಹಟಗಿ ಅವರಿಗೆ ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದರು.

ಮಹಾರಾಷ್ಟ್ರ ಸರ್ಕಾರ ಹಾಕಿರುವ ಮೇಂಟೈನಬಲಿಟಿ ಕುರಿತಾಗಿ ವಿಚಾರಣೆ ನಡೆಯಲಿದೆ. ಹಿಂದಿನ ಸಿಜೆಐ ದೀಪಕ್‌ ಮಿಶ್ರಾ ಅವರು ಇದರ ಮೇಂಟೈನಬಲಿಟಿ ವಿಚಾರವನ್ನು ಸಿದ್ಧಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.

Tap to resize

Latest Videos

ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ತರ್ಲೆ ಮಾಡೋಕೆ ಬಂದರೆ ಕಠಿಣ ಕ್ರಮ: ಎಡಿಜಿಪಿ ವಾರ್ನಿಂಗ್

ಕರ್ನಾಟಕಕ್ಕೆ ಸೇರಲು ಗ್ರಾಮಸ್ಥರ ನಿರ್ಧಾರ: 

ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ನಿರ್ಧರಿಸಿರುವ ಬಗ್ಗೆ ಪ್ರತಿ ಕ್ರಿಯೆ ನೀಡಿದ ಸಿಎಂ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್‌ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.
 

click me!