ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲು ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಮಹಾಬಲ ಸೀತಾಳಭಾವಿ
ಹಾವೇರಿ (ಜ.08): ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲು ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಬಾರಿ ಈ ಪೈಪೋಟಿ ಎಷ್ಟಿದೆ ಅಂದರೆ, ಒಬ್ಬ ಜಿಲ್ಲಾಧ್ಯಕ್ಷರು ಮುಂದಿನ ಸಮ್ಮೇಳನ ನಡೆಸಲು ತಮ್ಮ ಜಿಲ್ಲೆಗೆ ಅವಕಾಶ ನೀಡಿದರೆ ಎಲ್ಲಾ ಜಿಲ್ಲಾ ಕಸಾಪ ಅಧ್ಯಕ್ಷರಿಗೆ ತಲಾ 10 ಗ್ರಾಂ ಚಿನ್ನದ ನಾಣ್ಯ ನೀಡುವುದಾಗಿ ತೆರೆಮರೆಯಲ್ಲಿ ಆಫರ್ ನೀಡಿದ್ದಾರೆ ಎಂದು ಉನ್ನತ ಮೂಲಗಳು ‘ಕನ್ನಡಪ್ರಭ’ಕ್ಕೆ ತಿಳಿಸಿವೆ.
undefined
ಇಷ್ಟು ಪೈಪೋಟಿ ಇದೇ ಮೊದಲು: ಮುಂದಿನ ಸಮ್ಮೇಳನವನ್ನು ತಮ್ಮ ಜಿಲ್ಲೆಗೆ ನೀಡಬೇಕೆಂದು ಇನ್ನುಳಿದ ಕಸಾಪ ಜಿಲ್ಲಾಧ್ಯಕ್ಷರಿಗೆ ಚಿನ್ನದ ನಾಣ್ಯದ ಆಮಿಷವೊಡ್ಡುವಷ್ಟುಪೈಪೋಟಿ ಏರ್ಪಟ್ಟಿರುವುದು ಇದೇ ಮೊದಲು ಎಂದು ಹೇಳಲಾಗಿದೆ. ಪ್ರತಿ ಬಾರಿಯೂ ಮುಂದಿನ ಸಮ್ಮೇಳನ ನಡೆಸಲು ಅವಕಾಶ ಗಿಟ್ಟಿಸಿಕೊಳ್ಳಲು ಜಿಲ್ಲೆಗಳ ನಡುವೆ ಪೈಪೋಟಿ ಇರುತ್ತದೆಯಾದರೂ, ಈ ಬಾರಿ ಅದು ಎಲ್ಲೆ ಮೀರಿದೆ. ಆದರೆ, ಅದಕ್ಕೆ ಕಾರಣ ತಿಳಿದು ಬಂದಿಲ್ಲ.
Kannada Sahitya Sammelana: ಸರ್ಕಾರಗಳಿಂದ ಕನ್ನಡದ ಬಗ್ಗೆ ನಿರ್ಲಕ್ಷ್ಯ: ದೊಡ್ಡರಂಗೇಗೌಡ
ಯಾವ್ಯಾವ ಜಿಲ್ಲೆಗಳ ನಡುವೆ ಪೈಪೋಟಿ: ಮೂಲಗಳ ಪ್ರಕಾರ ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ನಡುವೆ ಮುಂದಿನ ಸಮ್ಮೇಳನ ನಡೆಸಲು ತೀವ್ರ ಪೈಪೋಟಿಯಿದೆ. ಜೊತೆಗೆ, ಬಳ್ಳಾರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳೂ ರೇಸ್‌ನಲ್ಲಿವೆ. ಚಿಕ್ಕಮಗಳೂರಿನಲ್ಲಿ ಸಮ್ಮೇಳನ ನಡೆಸುವಂತೆ ಬಿಜೆಪಿಯ ಹಿರಿಯ ನಾಯಕ ಸಿ.ಟಿ.ರವಿ ಅವರು ಸ್ವತಃ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅವರಿಗೇ ಫೋನ್ ಮಾಡಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು, ಚಿಕ್ಕಬಳ್ಳಾಪುರದಲ್ಲಿ ಸಮ್ಮೇಳನ ನಡೆಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ
ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತ್ಯ ಲೋಕಕ್ಕೆ ಉತ್ಕೃಷ್ಟ ಮುನ್ನುಡಿ ಬರೆಯಲಿದೆ: ಸಿಎಂ ಬೊಮ್ಮಾಯಿ
ಕೆ.ಸುಧಾಕರ್ ಉತ್ಸುಕರಾಗಿದ್ದಾರೆ. ಮಂಡ್ಯ ಹಾಗೂ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸಲು ಅಲ್ಲಿನ ಕಸಾಪ ಜಿಲ್ಲಾಧ್ಯಕ್ಷರು ಬಲವಾಗಿ ಹಕ್ಕೊತ್ತಾಯ ಮಂಡಿಸಿದ್ದಾರೆ. ಬಾಗಲಕೋಟೆಯ ಮುಧೋಳದಲ್ಲಿ ಮುಂದಿನ ಸಮ್ಮೇಳನ ನಡೆಸುವಂತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಬಹಿರಂಗವಾಗಿ ಆಗ್ರಹಿಸಿದ್ದಾರೆ. ಅಂತಿಮವಾಗಿ ಮುಂದಿನ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಾವ ಜಿಲ್ಲೆಯಲ್ಲಿ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.