ದೇಶ ವಿರೋಧಿ ಹೇಳಿಕೆ ನೀಡುವುದು ಸಚಿವರ ಚಟವಾಗಿದೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸಚಿವರ ಕುಟುಂಬವನ್ನು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ,ಶರವಣನ್
ಬೆಂಗಳೂರು(ಏ.07): ರಾಜ್ಯ ಆರೋಗ್ಯ ಮಂತ್ರಿ ಹಾಗೂ ಗಾಂಧಿ ನಗರದ ಕ್ಷೇತ್ರದ ಶಾಸಕ ದಿನೇಶ್ ಗೂಂಡಾ ರಾವ್‌ರವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಶೇಷಾದ್ರಿಪುರ ಠಾಣೆಗೆ ಶನಿವಾರ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ದೂರು ನೀಡಿದೆ.
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್‌ಐಎ ವಿಚಾರಣೆಗೊಳಗಾದ ಬಿಜೆಪಿ ಕಾರ್ಯಕರ್ತನ ಪರ ಸಮರ್ಥನೆ ಮಾಡುವಾಗ ಸಚಿವ ಗೂಂಡೂರಾವ್‌ರವರ ಮನೆಯಲ್ಲೇ ಅರ್ಧ ಪಾಕಿಸ್ತಾನವಿದೆ.
ಲೋಕಸಭಾ ಚುನಾವಣೆ ರಂಗೇರುತ್ತಿದ್ದರೂ, ಊರ ಉಸಾಬರಿ ಬಿಟ್ಟು ಗೋಶಾಲೆಗೆ ತೆರಳಿದ ಬಸವನಗೌಡ ಪಾಟೀಲ್ ಯತ್ನಾಳ್!
ದೇಶ ವಿರೋಧಿ ಹೇಳಿಕೆ ನೀಡುವುದು ಸಚಿವರ ಚಟವಾಗಿದೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸಚಿವರ ಕುಟುಂಬವನ್ನು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ,ಶರವಣನ್ ಕಿಡಿಕಾರಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕೋಮುಸೌಹಾರ್ದತೆ ಹಾಳು ದುರುದ್ದೇಶದಿಂದ ಸಚಿವ ಮಾಡುವ ಗೂಂಡೂರಾವ್ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೀಡಿದ್ದಾರೆ ಎಂದು ದೂರಿದ್ದಾರೆ.