
ಬೆಂಗಳೂರು : ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಸ್ಪೀಕರ್ ಗೆ ದೂರು ನೀಡಲು ನಿರ್ಧಾರ ಮಾಡಿದ್ದಾರೆ. ಶಾಸಕ ಕುಮಾರಸ್ವಾಮಿ ತಮ್ಮ ಹೆಂಡತಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಲಾಗಿದೆ.
ತನ್ನ ಹೆಂಡತಿಯನ್ನು ಸರಿಯಾಗಿ ನೋಡಿಕೊಳ್ಳದ ಶಾಸಕ ಆಡಳಿತ ಮಾಡೋದು ಹೇಗೆ ಎಂದು ಪ್ರಶ್ನೆ ಮಾಡಲಾಗಿದ್ದು, ಅವರ ಪತ್ನಿಯನ್ನು ಒಂದು ತಿಂಗಳ ಒಳಗಾಗಿ ಮನೆಗೆ ಕರೆದೊಯ್ಯಲು ಕೋರ್ಟ್ ಆದೇಶ ನೀಡಿತ್ತು. ಆದರೆ ಇನ್ನೂ ಪತ್ನಿ ಸವಿತಾರನ್ನು ಮನೆಗೆ ಕರೆದೊಯ್ಯಲಿಲ್ಲ.
ಹೆಣ್ಣಿಗೆ ಗೌರವ ತೋರದ ಬಿಜೆಪಿ ನಾಯಕರು ರಾಜ್ಯಭಾರ ಮಾಡೋದು ಹೇಗೆ. ಶಾಸಕರು ಎಚ್ಚೆತ್ತುಗೊಳ್ಳದಿದ್ದರೆ ಅವರ ಮನೆ ಮುಂದೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು ದಲಿತ ವೆಲ್ ಫೇರ್ ಅಧ್ಯಕ್ಷ ಶಾಂತರಾಜು ಹೇಳಿದ್ದಾರೆ.
ಕುಮಾರಸ್ವಾಮಿ ಅವರನ್ನು ನಾನು ಮಗನ ರೀತಿ ಸಾಕಿ ನಮ್ಮ ಮಗಳನ್ನೇ ಮದುವೆ ಮಾಡಿಕೊಟ್ಟಿದ್ದೆ. ಆದರೆ ಮೂರು ವರ್ಷಗಳಿಂದ ನಮ್ಮ ಕೈಗೆ ಅವರು ಸಿಗುತ್ತಿಲ್ಲ. ನನ್ನ ಮಗಳು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾಳೆ. ನನ್ನ ಮಗಳಿಗೆ ನ್ಯಾಯ ಬೇಕು ಎಂದು ಕುಮಾರಸ್ವಾಮಿ ಅವರ ಪತ್ನಿ ಸವಿತಾ ತಾಯಿ ಪ್ರೇಮಕುಮಾರಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ