ಸಿದ್ಧಗಂಗಾ ಶ್ರೀಗಳ ಶೋಕಾಚರಣೆ ನಡುವೆಯೂ ಕಾರ್ಯಕ್ರಮ: ಸಚಿವನ ವಿರುದ್ಧ ದೂರು

By Web DeskFirst Published Jan 22, 2019, 6:47 PM IST
Highlights

ಸಿದ್ಧಗಂಗಾ ಶ್ರೀಗಳ ಲಿಂಗೈಕ್ಯಯ ಶೋಕಾಚರಣೆ ನಡುವೆಯೂ ಸರ್ಕಾರಿ ಕಾರ್ಯಕ್ರಮ ಆಯೋಜಿಸಿದ್ದ ರಾಜ್ಯ ಕಾಂಗ್ರೆಸ್ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು, [ಜ.22]: ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲಾಗಿದೆ. 

ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನ ಸರ್ಕಾರಿ ಶೋಕಾಚರಣೆ ಮಾಡುವಂತೆ ಆದೇಶ ಮಾಡಿತ್ತು. 

ಶೋಕಾಚರಣೆ ವೇಳೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಆದರೆ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರಿನ ಖಾಸಗಿ ಫೈ ಸ್ಟಾರ್ ಹೋಟೆಲ್​ನಲ್ಲಿ ‘ಸಂವಿಧಾನ ಸಂವಾದ’ ಎಂಬ ಕಾರ್ಯಕ್ರಮ ಆಯೋಜಿಸಿತ್ತು. 

ಶ್ರೀಳಿಗೆ ಅವಮಾನ? ಶೋಕಾಚರಣೆ ನಡುವೆಯೇ ಕನ್ಹಯ್ಯಾ ಕುಮಾರ್‌ ಕಾರ್ಯಾಗಾರ

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ‘ಕರ್ನಾಟಕ ರಣಧೀರ ಪಡೆ’ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ವಿರುದ್ಧ ದೂರು ದಾಖಲಾಗಿದೆ.

ಇನ್ನು, ಈ ಕಾರ್ಯಕ್ರಮದಲ್ಲಿ ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಯ್ಯ ಕುಮಾರ್, ಎಐಎಂಐಎ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು. 

click me!