
ಮಂಡ್ಯ(ಜೂ.22): ಸಾಮಾಜಿಕ ಜಾಲತಾಣದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅತ್ಯಂತ ಕೀಳು ಮಟ್ಟದ ಭಾಷೆ ಪ್ರಯೋಗಿಸಿ ಪೋಸ್ಟ್ ಮಾಡಿರುವ ಮಂಗಳ ಎಂಬ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ಮುಖಂಡ, ವಕೀಲ ಎಂ.ಎಸ್. ರಘುನಂದನ್ ಅವರು ಶುಕ್ರವಾರ ಮಂಡ್ಯ ಸೈಬರ್‌ಠಾಣೆಗೆ ದೂರು ನೀಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಹಾಗೂ ದರ್ಶನ್ ಬಂಧನ ಪ್ರಕರಣಕ್ಕೆ ಯಾವುದೇ ಸಂಬಂಧ ಇಲ್ಲ. ಆದಾಗ್ಯೂ ಅನವಶ್ಯಕವಾಗಿ ದರ್ಶನ್ ಪ್ರಕರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಎಳೆದು ತಂದು ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ, ಫೇಸ್‌ಬುಕ್‌ನಲ್ಲಿ ಬಾಯಿಗೆ ಬಂದ ಹಾಗೆ ಬೈದು ಅವಮಾನ ಮಾಡಿ, ಪೋಸ್ಟ್ ಮಾಡಿದ್ದಾಳೆ.
ವೀರ್ ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್; ಕೋಮು ಸೌಹಾರ್ದತೆಗೆ ಕೊಳ್ಳಿ ಇಡಲು ಯತ್ನಿಸಿದ ಆರೋಪಿ ಬಂಧನ
ಮಹಿಳೆಯ ಈ ವಿಡಿಯೋ ವೈರಲ್ ಆಗಿದ್ದು, ಜೆಡಿ ಎಸ್ ಕಾರ್ಯಕರ್ತರಿಗೆ ಇದರಿಂದ ನೋವಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ. ಈ ಸಂಬಂಧ ಸೈಬರ್‌ಡ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ