ಸುರೇಶ್‌ ಕುಮಾರ್‌ ವಿವಾದಾತ್ಮಕ ಹೇಳಿಕೆ : ಮಹಿಳೆಯರಿಗೆ ಅವಮಾನ ಆರೋಪ- ದೂರು

Kannadaprabha News   | Kannada Prabha
Published : Jan 26, 2026, 11:08 AM IST
S Suresh Kumar

ಸಾರಾಂಶ

ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್.ಸುರೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ.ಪ್ರಕಾಶ್‌ ಮತ್ತು ಮನೋಹರ್‌ ನೇತೃತ್ವದ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದೆ.

ಬೆಂಗಳೂರು : ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್.ಸುರೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ.ಪ್ರಕಾಶ್‌ ಮತ್ತು ಮನೋಹರ್‌ ನೇತೃತ್ವದ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದೆ.

ಶಾಸಕರು ಕ್ಷಮೆಯಾಚಿಸಲಿ ಎಂಬ ಘೋಷಣೆ

ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ ಎಂಬ ಘೋಷಣೆಗಳುಳ್ಳ ಪೋಸ್ಟರ್‌ಗಳನ್ನು ಅಂಟಿಸುವ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದರು. ಬಳಿಕ ಈ ಸಂಬಂಧ ದೂರು ಕೊಡಲು ಬಸವೇಶ್ವರ ನಗರ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ ಈ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹಾಗಾಗಿ ಅಲ್ಲಿಗೆ ತೆರಳಿ ದೂರು ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದರು.

ಕಾಂಗ್ರೆಸ್‌ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು

ಈ ಹಿನ್ನೆಲೆಯಲ್ಲಿ ಭಾನುವಾರ ಕಾಂಗ್ರೆಸ್‌ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ನಿಂದನೆ ಹೇಳಿಕೆ ನೀಡಿರುವ ಶಾಸಕ ಸುರೇಶ್‌ ಕುಮಾರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎಲ್ಲ ನಗರಗಳಲ್ಲಿ ಸಂಚಾರಿ ಗ್ರಿಡ್‌ಗೆ ಚಿಂತನೆ : ಡಿ.ಕೆ.ಶಿವಕುಮಾರ್
ಪೋಕ್ಸೋ ಕನಿಷ್ಠ ಶಿಕ್ಷೆ ಮೇಲ್ಮನವಿ ಸಲ್ಲಿಸಲು ತಡ, ಸರ್ಕಾರಕ್ಕೇ ದಂಡ ವಿಧಿಸಿದ ಕೋರ್ಟ್‌!