ಮಹಾರಾಷ್ಟ್ರ ವಿಮೆ ಕ್ಯಾತೆ ಬಗ್ಗೆ ಅಮಿತ್‌ ಶಾಗೆ ದೂರು: ಬೊಮ್ಮಾಯಿ

Published : Mar 17, 2023, 05:15 AM IST
ಮಹಾರಾಷ್ಟ್ರ ವಿಮೆ ಕ್ಯಾತೆ ಬಗ್ಗೆ ಅಮಿತ್‌ ಶಾಗೆ ದೂರು: ಬೊಮ್ಮಾಯಿ

ಸಾರಾಂಶ

ಅಮಿತ್‌ ಶಾ ಸಂಧಾನ ಮಹಾದಿಂದ ಉಲ್ಲಂಘನೆ, ಮಹಾರಾಷ್ಟ್ರ ನಿರ್ಧಾರ ಅಕ್ಷಮ್ಯ ಅಪರಾಧ: ಸಿಎಂ ಬಸವರಾಜ ಬೊಮ್ಮಾಯಿ   

ಬೆಂಗಳೂರು(ಮಾ.17):  ಕರ್ನಾಟಕಕ್ಕೆ ಸೇರಿದ ಗಡಿ ಭಾಗದ ಜನರಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಯೋಜನೆ ನೀಡಲು ನಿರ್ಣಯ ಕೈಗೊಂಡಿರುವುದನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ದೂರು ನೀಡಲು ಮುಂದಾಗಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆ ಕುರಿತ ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಅಕ್ಷಮ್ಯ ಅಪರಾಧ ಎಂದು ಹರಿಹಾಯ್ದರು.

ಮಹಾರಾಷ್ಟ್ರದ ಅನುದಾನ ತಡೆಯಲು ಕ್ರಮ: ಸಿಎಂ ಬೊಮ್ಮಾಯಿ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಚ್‌ ಆದೇಶ ಬರುವವರೆಗೆ ಕಾಯಬೇಕು. ಅಲ್ಲಿವರೆಗೆ ಯಾವುದೇ ಪ್ರಚೋದನೆ ನಡೆಯಬಾರದೆಂದು ಒಪ್ಪಲಾಗಿತ್ತು. ಈಗ ಅದರ ಉಲ್ಲಂಘನೆಯಾಗಿದೆ. ಕೂಡಲೇ ಆಜ್ಞೆಯನ್ನು ಹಿಂದೆಗೆದುಕೊಳ್ಳಬೇಕು. ಈ ವಿಚಾರವನ್ನು ಕೇಂದ್ರ ಗೃಹ ಸಚಿವರ ಗಮನಕ್ಕೂ ತರಲಾಗುವುದು ಎಂದು ತಿಳಿಸಿದರು.

ಈ ರೀತಿಯ ಯೋಜನೆಗಳನ್ನು ನಾವೂ ಕೂಡ ಪ್ರಕಟಿಸಬಹುದು. ಹಲವಾರು ತಾಲ್ಲೂಕುಗಳು, ಗ್ರಾಮ ಪಂಚಾಯ್ತಿಗಳು ಮಹಾರಾಷ್ಟ್ರದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ, ಕರ್ನಾಟಕಕ್ಕೆ ಸೇರಬೇಕು ಎಂದು ಈಗಾಗಲೇ ನಿರ್ಣಯ ಮಾಡಿವೆ. ಇಂಥ ಪರಿಸ್ಥಿತಿಯಲ್ಲಿ ಇದ್ದಾಗ ಮಹಾರಾಷ್ಟ್ರದ ಸರ್ಕಾರ ಬಹಳ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

ನಿರ್ಧಾರ ಹಿಂಪಡೆಯಲಿ

ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಚ್‌ ಆದೇಶ ಬರುವವರೆಗೂ ಕಾಯಬೇಕು. ಅಲ್ಲಿವರೆಗೆ ಯಾವುದೇ ಪ್ರಚೋದನೆ ನಡೆಯಬಾರದೆಂದು ಅಮಿತ್‌ ಶಾ ಸಮ್ಮುಖ ಒಪ್ಪಲಾಗಿತ್ತು. ಈಗ ಅದರ ಉಲ್ಲಂಘನೆಯಾಗಿದೆ. ಹೀಗಾಗಿ ಈ ವಿಚಾರವನ್ನು ಅಮಿತ್‌ ಶಾ ಗಮನಕ್ಕೆ ತರಲಾಗುವುದು. ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಖಂಡಿಸುತ್ತೇನೆ. ಕೂಡಲೇ ಆಜ್ಞೆಯನ್ನು ಆ ರಾಜ್ಯ ಹಿಂಪಡೆಯಬೇಕು ಅಂತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ
ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !