ಹೈಸೆಕ್ಯುರಿಟಿ ನಂಬರ್‌ ಪ್ಲೇಟಲ್ಲಿ 700 ಕೋಟಿ ಭ್ರಷ್ಟಾಚಾರ

By Kannadaprabha News  |  First Published Jan 11, 2024, 11:55 AM IST

ಸಾರ್ವಜನಿಕ ಅನುಕೂಲಕ್ಕಾಗಿ ಇರಬೇಕಾದ ಅಧಿಕಾರಿಗಳು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಸುಮಾರು ಎರಡು ಕೋಟಿ ಹಳೆಯ ವಾಹನಗಳ ಮಾಲೀಕರನ್ನು ಹೆಚ್ಚಿನ ದರದಲ್ಲಿ ಎಚ್‌ಎಸ್‌ಆರ್‌ಪಿ ಖರೀದಿಸುವಂತಹ ಪರಿಸ್ಥಿತಿ ನಿರ್ಮಿಸಿದ್ದಾರೆ. ಅಲ್ಲದೇ, ಸಾರ್ವಜನಿಕ ಹಣವನ್ನು ಸಂಘಟಿತವಾಗಿ ಲೂಟಿ ಮಾಡಲಾಗುತ್ತಿದೆ. ಈ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖ 


ಬೆಂಗಳೂರು(ಜ.11): 2019ರ ಏ.1 ಮೊದಲು ಖರೀದಿಸಿದ ವಾಹನಗಳಿಗೆ ಉನ್ನತ ಸುರಕ್ಷತಾ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆಯ ಆದೇಶ ಬಳಿಕ 700 ಕೋಟಿ ರು.ಗ‍ಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತ ಸಂಸ್ಥೆಗೆ ದೂರು ದಾಖಲಿಸಲಾಗಿದೆ. ಅಖಿಲ ಕರ್ನಾಟಕ ವಾಹನ ನಂಬರ್‌ ಪ್ಲೇಟ್‌ ತಯಾರಕರು ಮತ್ತು ಮಾರಾಟಗಾರರ ಸಂಘದ ಅಧ್ಯಕ್ಷ ಎಸ್‌.ಎನ್‌.ಜಿತೇಂದ್ರ ದೂರು ನೀಡಿದ್ದಾರೆ.

ಸಾರ್ವಜನಿಕ ಅನುಕೂಲಕ್ಕಾಗಿ ಇರಬೇಕಾದ ಅಧಿಕಾರಿಗಳು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಸುಮಾರು ಎರಡು ಕೋಟಿ ಹಳೆಯ ವಾಹನಗಳ ಮಾಲೀಕರನ್ನು ಹೆಚ್ಚಿನ ದರದಲ್ಲಿ ಎಚ್‌ಎಸ್‌ಆರ್‌ಪಿ ಖರೀದಿಸುವಂತಹ ಪರಿಸ್ಥಿತಿ ನಿರ್ಮಿಸಿದ್ದಾರೆ. ಅಲ್ಲದೇ, ಸಾರ್ವಜನಿಕ ಹಣವನ್ನು ಸಂಘಟಿತವಾಗಿ ಲೂಟಿ ಮಾಡಲಾಗುತ್ತಿದೆ. ಈ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Tap to resize

Latest Videos

ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ: ಭಾರೀ ದಂಡದ ಎಚ್ಚರಿಕೆ ಕೊಟ್ಟ ಸಾರಿಗೆ ಇಲಾಖೆ

ಎಚ್‌ಎಸ್‌ಆರ್‌ಪಿ ತಯಾರಕರಿಂದ ಹಳೆಯ ಮತ್ತು ಹೊಸ ವಾಹನಗಳಿಗೆ ಖಾಲಿ ನೋಂದಣಿ ಫಲಕಗಳನ್ನು ಖರೀದಿಸಬೇಕು. ಈ ಫಲಕಗಳ ಮೇಲೆ ವಿತರಕರು ನೋಂದಣಿ ಸಂಖ್ಯೆಯನ್ನು ಉಲ್ಲೇಖಿಸಬೇಕು. ನಂತರ ಹಳೆಯ ವಾಹನಗಳ ಮಾಲೀಕರಿಗೆ ಎಚ್‌ಎಸ್‌ಆರ್‌ಪಿಗಳನ್ನು ಮಾರಾಟ ಮಾಡಬೇಕು. ಆದರೆ ಈ ರೀತಿ ಮಾಡದೆ ಅಕ್ರಮ ಎಸಗಲಾಗುತ್ತಿದೆ. ಹಳೆಯ ವಾಹನಗಳಿಗೆ ದುಬಾರಿ ಬೆಲೆ ವಿಧಿಸಲಾಗುತ್ತಿದೆ ಎಂದು ದೂರಲಾಗಿದೆ.

click me!