ತಿಂಗಳೊಳಗೆ ಎಲ್ಲ ವಕ್ಫ್ ಆಸ್ತಿ ಖಾತಾ ಅಪ್‌ಡೇಟ್ ಕಾರ್ಯ ಮುಗಿಸಿ: ಜಮೀರ್ ಸೂಚನೆ

Published : Sep 20, 2024, 08:46 AM ISTUpdated : Sep 20, 2024, 08:59 AM IST
ತಿಂಗಳೊಳಗೆ ಎಲ್ಲ ವಕ್ಫ್ ಆಸ್ತಿ ಖಾತಾ ಅಪ್‌ಡೇಟ್ ಕಾರ್ಯ ಮುಗಿಸಿ: ಜಮೀರ್ ಸೂಚನೆ

ಸಾರಾಂಶ

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಅಪ್‌ಡೇಟ್‌ ಕಾರ್ಯ ಮುಂದಿನ ಒಂದು ತಿಂಗಳೊಳಗೆ ಮುಗಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ  ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಗಡುವು ನೀಡಿದರು.

ಕಲಬುರಗಿ (ಸೆ.20): ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಅಪ್‌ಡೇಟ್‌ ಕಾರ್ಯ ಮುಂದಿನ ಒಂದು ತಿಂಗಳೊಳಗೆ ಮುಗಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ  ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಗಡುವು ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 2,566, ನಗರ ಸ್ಥಳೀಯ ಸಂಸ್ಥೆಗಳಲ್ಲಿ 572 ಹಾಗೂ ಆರ್‌ಡಿಪಿಆರ್‌ ಕಚೇರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಬಾಕಿ ಇವೆ. ಬಹಳ ವರ್ಷಗಳಿಂದ ಈ ಕಾರ್ಯ ನಾನಾ ಕಾರಣಕ್ಕೆ ನೆನೆಗುದ್ದಿಗೆ ಬಿದ್ದಿದ್ದು, ಇದನ್ನು ಆದ್ಯತೆ ಮೇಲೆ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

 

'ಪ್ಯಾಲೆಸ್ತೇನ್ ಧ್ವಜ ಹಿಡಿದ್ರೆ ತಪ್ಪೇನಿಲ್ಲ..' ಚರ್ಚೆಗೆ ಗ್ರಾಸವಾದ ಸಚಿವ ಜಮೀರ್ ಸಮರ್ಥನೆ!

ರಾಜ್ಯದಲ್ಲಿ 1.08 ಲಕ್ಷ ಎಕರೆ ವಕ್ಫ್ ಆಸ್ತಿ ಇದ್ದು, ಇದರಲ್ಲಿ 85 ಸಾವಿರ ಎಕರೆ ಪ್ರದೇಶ ಒತ್ತುವರಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 21,440 ಎಕರೆ ಆಸ್ತಿ ಪೈಕಿ 3,610 ಮತ್ತು ಯಾದಗಿರಿ ಜಿಲ್ಲೆಯಲ್ಲಿ 6,194 ಪೈಕಿ 123 ಎಕರೆ ಆಸ್ತಿ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದರು.

ಬುಧವಾರ ಕಲಬುರಗಿಯಲ್ಲಿ ವಕ್ಫ್ ಅದಾಲತ್ ನಡೆಸಿದ್ದು, ಕಲಬುರಗಿ ಜಿಲ್ಲೆಯಿಂದ 368 ಅರ್ಜಿ ಸ್ವೀಕರಿಸಲಾಗಿದೆ. ಇದರಲ್ಲಿ 100 ಒತ್ತುವರಿ, 55 ಖಬರಸ್ತಾನ್ ಬೇಡಿಕೆ ಹಾಗೂ ಇತರೆ ವಿಷಯಕ್ಕೆ 213 ಸೇರಿವೆ. ಅದೇ ರೀತಿ ಯಾದಗಿರಿ ಜಿಲ್ಲೆಯಿಂದ ಸಲ್ಲಿಕೆಯಾದ 82 ಅರ್ಜಿಯಲ್ಲಿ 38 ಅರ್ಜಿ ಒತ್ತುವರಿ, 33 ಖಬರಸ್ತಾನ್ ಬೇಡಿಕೆ ಹಾಗೂ ಉಳಿದ 11 ಅರ್ಜಿಗಳು ಭೂಮಿ ಮಂಜೂರಾತಿ, ಖಾತಾ ಅಪಡೇಟ್, ಸರ್ವೇ ಸಮಸ್ಯೆಗಳಿಗೆ ಸಂಬಂಧಿಸಿವೆ. ಇವುಗಳನ್ನು ಸಹ ಆದ್ಯತೆ ಮೇಲೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದರು.

ಖಬರಸ್ತಾನ್ ಬೇಡಿಕೆ ಪರಿಶೀಲಿಸಿ:

ಮುಸ್ಲಿಂ ಸಮುದಾಯದ ಜನರ ಅಂತ್ಯ ಸಂಸ್ಕಾರಕ್ಕೆ ಸರ್ಕಾರಿ ಜಮೀನು ಇಲ್ಲದಿದ್ದಲ್ಲಿ ಖಾಸಗಿ ಜಮೀನು ಖರೀದಿಸಿ ಖಬರಸ್ತಾನಕ್ಕೆ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಡಿಸಿಗಳಿಗೆ ಸೂಚಿಸಿದರು. ಕಲಬುರಗಿ ಡಿಸಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ ಖಬರಸ್ತಾನ್ ಮಂಜೂರಾತಿಗೆ ಸಲ್ಲಿಕೆಯಾದ 23ರಲ್ಲಿ ಈಗಾಗಲೆ ಎರಡು ಮಂಜೂರು ಮಾಡಿದ್ದು, ಉಳಿದವು ಇಲಾಖಾ ಹಂತದಲ್ಲಿ ಪರಿಶೀಲನೆಯಲ್ಲಿವೆ ಎಂದರು.

ಕುಮಾರಸ್ವಾಮಿಯಂತಹ ರಾಜಕಾರಣಿಗಳಿಂದಲೇ ಗಲಭೆಗಳು ಆಗೋದು: ಸಚಿವ ಜಮೀರ್ ಅಹ್ಮದ್

ಸಭೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಕೆ.ಅನ್ವರ್ ಭಾಷಾ, ಯಾದಗಿರಿ ಜಿಲ್ಲಾಧಿಕಾರಿ ಬಿ.ಸುಶೀಲಾ, ಕಲಬುರಗಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿಸಿಪಿ ಕನಿಕಾ ಸಿಕ್ರಿವಾಲ್, ಯಾದಗಿರಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಧರಣೇಶ ಎಸ್.ಪಿ., ಕಲಬುರಗಿ ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಯಾದಗಿರಿ ಸಿಇಒ ಲವೀಶ್ ಒರ್ಡಿಯಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ವಕ್ಫ್ ಬೋರ್ಡ್ ಸಿಇಒ ಜಿಲಾನಿ ಮೊಕಾಶಿ, ಕಲಬುರಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಸೈಯದ್ ಹಬೀಬ್ ಸರ್ಮಸ್ತ್, ಯಾದಗಿರಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಜಹಿರುದ್ದಿನ್ ಸವೆರಾ ಸೇರಿದಂತೆ ಎರಡು ಜಿಲ್ಲೆಗಳ ಅಲ್ಪಸಂಖ್ಯಾತ, ವಕ್ಫ್ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರರು, ಎಡಿಎಲ್‌ಆರ್‌, ಡಿಡಿಎಲ್‌ಆರ್, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ