
ಬೆಂಗಳೂರು (ಮಾ.13) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರದಿಂದ ಕರ್ನಾಟಕ ಸರ್ವತೋಮುಖ ಅಭಿವೃದ್ಧಿ ಕಂಡಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರ(Vijayanagara assembly constituency)ದ ಚಂದ್ರಶೇಖರ್ ಆಜಾದ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ASSEMBLY ELECTION: ಸಚಿವ ಸೋಮಣ್ಣ ಜೊತೆ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ?
ಭಾರತವು ವಿಶ್ವದ ಅತಿಡೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಬಿಜೆಪಿ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ರಾಜಕೀಯ ಪಕ್ಷ. ಬಿಜೆಪಿ ಅಭಿವೃದ್ಧಿ ಪರ, ಜನರ ಆಶಯದಂತೆ ನಡೆಯುವ ಪಕ್ಷ. ನಾನು ಜನಪರ ಆಡಳಿತದ ಜನಸೇವಕ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೆಮ್ಮೆಯಿಂದ ಹೇಳುತ್ತಾರೆ. ಕೊರೋನಾ ಸಾಂಕ್ರಮಿಕ ರೋಗದ ಸಮಯದಲ್ಲಿ ದೇಶದ 135 ಕೋಟಿ ಜನರ ಜೀವ ರಕ್ಷಣೆ ಮಾಡಿದ ಪುಣ್ಯ ಪ್ರಧಾನಿಗೆ ಸಲ್ಲುತ್ತದೆ. ಕೊರೋನಾ(Corona virus) ಸಮಯದಲ್ಲಿ 80 ಕೋಟಿ ಜನರಿಗೆ ಹಸಿವಿನಿಂದ ಬಳಲಬಾರದೆಂದು ಪ್ರತಿ ತಿಂಗಳು ಉಚಿತವಾಗಿ ದಿನಸಿ ವಿತರಿಸಿದರು. ಇನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai)ನೇತೃತ್ವದ ರಾಜ್ಯ ಸರ್ಕಾರದಿಂದ ಕರ್ನಾಟಕ ಸರ್ವತೋಮುಖ ಅಭಿವೃದ್ಧಿ ಕಂಡಿದೆ ಎಂದು ಶ್ಲಾಘಿಸಿದರು.
ಅಭ್ಯರ್ಥಿ ಆಯ್ಕೆಗೆ ನಾಡಿದ್ದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ
ಸಮಾವೇಶದಲ್ಲಿ ಬೆಂಗಳೂರು ನಗರ ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್, ಗೋವಿಂದರಾಜ ನಗರ ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ವಿಜಯ ನಗರ ಮಂಡಲ ಅಧ್ಯಕ್ಷ ಟಿ.ವಿ.ಕೃಷ್ಣ ಮತ್ತು ಮುಖಂಡರಾದ ಎಚ್.ರವೀಂದ್ರ, ಮೋಹನ್ ಕುಮಾರ್, ರಾಮಪ್ಪ, ಬಾಬಿ ವೆಂಕಟೇಶ್, ಎ.ಎಚ್.ಬಸವರಾಜ್, ಸೋಮಶೇಖರ್, ಡಾ ಎಸ್.ರಾಜು, ಅವಲಹಳ್ಳಿ ಚಂದ್ರಪ್ಪ ಪಾಲ್ಗೊಂಡಿದ್ದರು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ