ಪಿ.ಜಿ. ಮುಗಿಸಿದ ವೈದ್ಯರಿಗೆ ಕಡ್ಡಾಯ ಸರ್ಕಾರಿ ಸೇವೆ

Kannadaprabha News   | Asianet News
Published : Aug 22, 2020, 10:47 AM ISTUpdated : Aug 22, 2020, 10:49 AM IST
ಪಿ.ಜಿ. ಮುಗಿಸಿದ ವೈದ್ಯರಿಗೆ ಕಡ್ಡಾಯ ಸರ್ಕಾರಿ ಸೇವೆ

ಸಾರಾಂಶ

ವೈದ್ಯಕೀಯ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳು ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಸೇವೆ ಸಲ್ಲಿಸಲು ಆನ್‌ಲೈನ್‌ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ 

ಬೆಂಗಳೂರು (ಆ.22): ವೈದ್ಯಕೀಯ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳು ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಸೇವೆ ಸಲ್ಲಿಸಲು ಆನ್‌ಲೈನ್‌ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಸಚಿವರು, ಸುಪ್ರೀಂಕೋರ್ಟ್‌ ಕಳೆದ ವರ್ಷ ಆಗಸ್ಟ್‌ನಲ್ಲಿ ತೀರ್ಪು ನೀಡಿದ ಬಳಿಕ ಮೊದಲ ಬಾರಿಗೆ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳ ಕೋರ್ಸ್‌ ಮುಗಿದ ಮೇಲೆ ಅವರನ್ನು ಸರ್ಕಾರಿ ವೈದ್ಯಕೀಯ ಸೇವೆಗೆ ಬಳಸಿಕೊಳ್ಳಲು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. 

ಬೆಂಗಳೂರು: ಲಕ್ಷದ ಅಂಚಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಈ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಿವಾಸಿ ವೈದ್ಯರು ಅಥವಾ ಆರೋಗ್ಯ ಇಲಾಖೆಯಲ್ಲಿ ತತ್ಸಮಾನ ಹುದ್ದೆ ನೀಡಲಾಗುತ್ತದೆ. ನೋಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!
Puneeth Rajkumar ಸಮಾಧಿಗೆ ನಮಿಸಿದ 'ಕಾಕ್ರೋಚ್ ಜನತಾ ಪಾರ್ಟಿ'! ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸಾಥ್!