ಲಂಚ ಪ್ರಕರಣ: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಶಾಸಕ ಡಾ. ಚಂದ್ರು ಲಮಾಣಿಗೆ ಬೇಲ್!

Kannadaprabha News, Ravi Janekal |   | Kannada Prabha
Published : Mar 12, 2026, 06:17 AM IST
Chandru Lamani

ಸಾರಾಂಶ

MLA Chandru Lamani bribery case ಲಂಚ ಪ್ರಕರಣದಲ್ಲಿ ಲೋಕಾಯುಕ್ತರಿಂದ ಬಂಧಿತರಾಗಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಇತರ ಇಬ್ಬರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಲಕ್ಷ್ಮೇಶ್ವರ (ಮಾ.12): ಲಂಚ ಪ್ರಕರಣದ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಇತರ ಇಬ್ಬರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ.

ಫೆ. 21ರಂದು ಲೋಕಾಯುಕ್ತ ದಾಳಿ ವೇಳೆ ಬಂಧನಕ್ಕೆ ಒಳಗಾಗಿದ್ದ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಆಪ್ತ ಸಹಾಯಕ ಮಂಜುನಾಥ ವಾಲ್ಮೀಕಿ, ಗುರು ಲಮಾಣಿ ಅವರಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.

ಪ್ರಕರಣದ ಹಿನ್ನೆಲೆ: ಕಳೆದ ಫೆ. 21ರಂದು ಲಕ್ಷ್ಮೇಶ್ವರದ ಶಾಸಕರ ಒಡೆತನದ ಆಸ್ಪತ್ರೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಆಪ್ತ ಸಹಾಯಕ ಮಂಜುನಾಥ ವಾಲ್ಮೀಕಿ, ಗುರು ಲಮಾಣಿ ಅವರು ಕಾಮಗಾರಿಯೊಂದಕ್ಕೆ ಸಂಬಂಧಿಸಿದಂತೆ ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದರು. ಬಳಿಕ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಇಂದು ಸಿಲಿಂಡರ್ ದರ‌ ಏರಿಕೆ ವಿರೋಧಿಸಿ ಪ್ರತಿಭಟನೆ

ಗದಗ: \Bಸಿಲಿಂಡರ್ ದರ‌ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಮಾ. 12ರಂದು ಸಂಜೆ 4ಕ್ಕೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಪ್ರತಿಭಟನೆ ನೇತೃತ್ವ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪಕ್ಷದ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಶವ್ಯಾಪಿ ಗ್ಯಾಸ್‌ ಟ್ರಬಲ್‌ಗೆ ಹೋಟೆಲ್‌ಗಳು ಬಂದ್‌ : ಜನಜೀವನದ ಮೇಲೆ ಭಾರೀ ಹೊಡೆತ
ತಂತ್ರಜ್ಞಾನದ ಬದಲಾವಣೆಗೆ ತಕ್ಕಂತೆ ‘ಸುಸ್ಥಿರ ಡೇಟಾ ಸೆಂಟರ್‌’