ಸುರಪುರ ಉಪಚುನಾವಣೆಗೆ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್‌

By Ravi JanekalFirst Published Mar 21, 2024, 9:53 PM IST
Highlights

ಲೋಕಸಭಾ ಚುನಾವಣೆ ಜೊತೆಗೆ ಉಪಚುನಾವಣೆ ನಡೆಯಲಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಎರಡು ಉಪ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ದಿ.ರಾಜಾ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ್ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಬೆಂಗಳೂರು (ಮಾ.21): ಲೋಕಸಭಾ ಚುನಾವಣೆ ಜೊತೆಗೆ ಉಪಚುನಾವಣೆ ನಡೆಯಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಎರಡು ಉಪ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ದಿ.ರಾಜಾ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ್ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ.

ಮುಂದಿನ ವಿಧಾನಸಭಾ ಉಪ ಚುನಾವಣೆಯಲ್ಲಿ ಕರ್ನಾಟಕ ಸುರಪುರದಿಂದ ದಿ. ರಾಜಾ ವೆಂಕಟಪ್ಪ ನಾಯಕ ಪುತ್ರರಾದ ರಾಜಾ ವೇಣುಗೋಪಾಲ ನಾಯಕ್ ಹಾಗೂ ಮಹಾರಾಷ್ಟ್ರದ ಅಂಕೋಲ ವೆಸ್ಟ್‌ನಿಂದ ಸಜೀದ್ ಖಾನ್ ಪಠಣ್ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಈ ಕೆಳಕಂಡ ವ್ಯಕ್ತಿಗಳ ಉಮೇದುವಾರಿಕೆಯ ಪ್ರಸ್ತಾವನೆಗಳನ್ನು ಅನುಮೋದಿಸಲಾಗಿದೆ. .

Lok Sabha election 2024: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಯಾವಾಗ ಮತದಾನ?

ಮೇ 7ರಂದು ಉಪ ಚುನಾವಣೆ:

ದೇಶದಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಜೊತೆಗೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯು ನಡೆಯಲಿದೆ. ದೇಶದಲ್ಲಿ ಒಟ್ಟು ನಾಲ್ಕು ರಾಜ್ಯದಲ್ಲಿ ತೆರವಾದ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಮಾಡಲಾಗುತ್ತದೆ.  ಕರ್ನಾಟಕದಲ್ಲಿ ಒಟ್ಟು 2 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಅದರಲ್ಲಿ ಉತ್ತರ ಕರ್ನಾಟಕದಲ್ಲಿ ಮೇ 7ಕ್ಕೆ 2ನೇ ಹಂತದ ಚುನಾವಣೆ ನಡೆಯಲಿದ್ದು, ಇದೇ ವೇಳೆ ಎಸ್‌ಟಿ ಮೀಸಲು ಕ್ಷೇತ್ರವಾದ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ.

ಉಗ್ರಾಣ ನಿಗಮ ಅಧ್ಯಕ್ಷ ನೇಮಕ ಆದೇಶ; ಸಿಎಂ ಸಿದ್ದರಾಮಯ್ಯರ ಹೆಸರನ್ನೇ ನಕಲಿ ಮಾಡಿದ ಕಿರಾತಕರು!

ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತ ಫೆ.25ರಂದು ಸಾವನ್ನಪ್ಪಿದ್ದರು. ಕಾಂಗ್ರೆಸ್‌ ಶಾಸಕರಾಗಿದ್ದ ಇವರು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು. ಇದರ ಬೆನ್ನಲ್ಲಿಯೇ ಶಾಸಕರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ತೆರವಾದ ಶಾಸಕ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯುತ್ತಿದೆ.

click me!