ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

Published : Nov 12, 2024, 11:06 AM IST
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

ಸಾರಾಂಶ

ನಿವೃತ್ತ ನ್ಯಾಯಮೂರ್ತಿ ಕುನ್ಹಾ ಅವರು ಅತ್ಯಂತ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದವರು. ಅಂಥವರ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಜೋಶಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಖಂಡನೀಯ. ಅವರು ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಕಮಿಷನ್ ಆಫ್‌ ಎನ್‌ಕ್ವಯರಿ ಕಾಯ್ದೆಯಡಿ ಇಂತಹ ಹೇಳಿಕೆಗಳನ್ನು ನೀಡಿದಾಗ 6 ತಿಂಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವಿದೆ: ಸಚಿವ ದಿನೇಶ್ ಗುಂಡೂರಾವ್ 

ಬೆಂಗಳೂರು(ನ.12):  ಕೋವಿಡ್ ಭ್ರಷ್ಟಾಚಾರಗಳ ಕುರಿತು ವರದಿ ನೀಡಿರುವ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಡೆ ಖಂಡನೀಯ. ಇದು ಕಮಿಷನ್ ಆಫ್ ಎನ್‌ಕ್ವಯರಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಡಳಿತ ಪಕ್ಷ ಕಾಂಗ್ರೆಸ್ ರಾಜ್ಯಪಾಲರಿಗೆ ದೂರು ನೀಡಿದೆ. 

ರಾಜ್ಯ ಸರ್ಕಾರದ ಮುಖ್ಯ ವಕ್ತಾರರೂ ಆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ರಾಜಭವನಕ್ಕೆ ತೆರಳಿ ಪ್ರಹ್ಲಾದ್ ಜೋಶಿ ಅವರ ವಿರುದ್ಧ ದೂರು ಸಲ್ಲಿಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್, ನಿವೃತ್ತ ನ್ಯಾಯಮೂರ್ತಿ ಕುನ್ಹಾ ಅವರು ಅತ್ಯಂತ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದವರು. ಅಂಥವರ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಜೋಶಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಖಂಡನೀಯ. ಅವರು ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಕಮಿಷನ್ ಆಫ್‌ ಎನ್‌ಕ್ವಯರಿ ಕಾಯ್ದೆಯಡಿ ಇಂತಹ ಹೇಳಿಕೆಗಳನ್ನು ನೀಡಿದಾಗ 6 ತಿಂಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವಿದೆ ಎಂದರು. 

ಈ ವಿಚಾರವನ್ನು ರಾಷ್ಟ್ರಪತಿಗಳ ಗಮನಕ್ಕೆ ತಂದು ಅವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ರಾಜ್ಯಪಾಲರು ನಮ್ಮ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದರಲ್ಲದೆ, ಈ ರೀತಿಯ ವೈಯಕ್ತಿಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ತಿಳಿಸಿದರು. 

ಕೇಂದ್ರ ಸಚಿವರು ಎಂದಾಕ್ಷಣ ಏನು ಬೇಕಾದರೂ ಮಾತನಾಡಬಹುದು ಎಂಬ ಅಹಂಕಾರ ಪ್ರವೃತ್ತಿಯಲ್ಲಿ ಪ್ರಹ್ಲಾದ್ ಜೋಶಿಯವರಿದ್ದಾರೆ. ಅವರ ಇತ್ತೀಚಿನ ಹೇಳಿಕೆಗಳು ಅಹಂಕಾರದಿಂದ ಕೂಡಿವೆ. ನಿವೃತ್ತ ನ್ಯಾಯಮೂರ್ತಿಗಳನ್ನು ಕಾಂಗ್ರೆಸ್ ಏಜೆಂಟ್ ಎಂದರೆ ಏನರ್ಥ? ಜೋಶಿಯವರು ರಾಜಕಾರಣಿಯಾಗಿ ನಮ್ಮ ಬಗ್ಗೆ ಮಾತನಾಡಲಿ. ಅಥವಾ ಕಾನೂನು ಹೋರಾಟ ನಡೆಸಲಿ. ಆದರೆ ಗೌರವಾನ್ವಿತ ನ್ಯಾಯಮೂರ್ತಿಗಳ ವೈಯಕ್ತಿಕ ನಿಂದನೆ ಸರಿಯಲ್ಲ ಎಂದರು. 

ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಬೇಕಿದ್ದರೆ ಆಯೋಗದ ವರದಿಯನ್ನು ವಿಮರ್ಶಿಸಲಿ. ಆದರೆ ಕುನ್ಹಾ 28 ಅವರ ವೈಯಕ್ತಿಕ ನಿಂದನೆ ಸರಿಯಲ್ಲ. ಜೋಶಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದುಕೊಂಡು ನಮ್ಮ ತನಿಖಾ ಆಯೋಗಗಳು, ವ್ಯವಸ್ಥೆಗಳ ವಿರುದ್ದ ಮಾತ ನಾಡುತ್ತಿರುವುದು ದುರಂತ. ಈ ರೀತಿ ನಿಂದನೆಗಳನ್ನು ಮಾಡಿದರೆ ಮುಂದೆ ಯಾರು ಕೂಡ ತನಿಖೆ ನಡೆಸುವ ಜವಾಬ್ದಾರಿ ತೆಗೆದುಕೊಳ್ಳಲು ಬರದಿರುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಿದರು.

ಕೈ ಎಜೆಂಟ್ ಎಂದಿಲ್ಲ ನ್ಯಾ. ಮೈಕಲ್ ಕುನ್ಹಾರನ್ನು ನಾನು ಕಾಂಗ್ರೆಸ್ ಏಜೆಂಟ್ ಎಂದು ಹೇಳಿಲ್ಲ. ಕಾಂಗ್ರೆಸ್ ಏಜೆಂಟರ ರೀತಿ ನಡೆದುಕೊಳ್ಳಬೇಡಿ ಎಂದಿದ್ದೇನೆ. ಅವರ ಮೇಲೆ ನನಗೆ ವೈಯಕ್ತಿಕ ದ್ವೇಷ, ಅಸೂಯೆ ಇಲ್ಲ. ಕಾಂಗ್ರೆಸ್‌ನವರು ತರಾತುರಿಯಲ್ಲಿ ವರದಿ ಕೊಡಿಸಿದ್ದಾರೆ. ಪ್ರೊಸಿಜರ್‌ಫಾಲೋ ಆಗಿಲ್ಲ. ಈ ರೀತಿ ಮಾಡಬೇಡಿ, ಫೇರ್‌ಆಗಿ ತನಿಖೆ ಮಾಡಿ ಅಂದಿದ್ದೀನಿ. ಕುನ್ಹಾ ಅವರಿಗೆ ಇಂಟಿಗ್ರಿಟಿ ಪ್ರಶ್ನಿಸಿದ್ದೇನೆ ಎಂದು ಅನಿಸಿದರೆ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ