ಶ್ರೀರಾಮನ ಅವಹೇಳನ ಮಾಡಿದ್ದ ಶಿಕ್ಷಕಿ ವಜಾ; ಘಟನೆ ಕುರಿತು ಸತ್ಯಶೋಧನಾ ತಂಡದಿಂದ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್!

By Kannadaprabha NewsFirst Published Feb 13, 2024, 9:42 PM IST
Highlights

ತರಗತಿ ಒಳಗಡೆ ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ವಜಾಗೊಂಡಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನಾ ತಂಡವನ್ನು ರಚಿಸುವಂತೆ ಕರ್ನಾಟಕ ಶಿಕ್ಷಣ ಇಲಾಖೆಗೆ ಕಾಂಗ್ರೆಸ್ ಮುಖಂಡರು ಮಂಗಳವಾರ ಒತ್ತಾಯಿಸಿದ್ದಾರೆ.

ಮಂಗಳೂರು (ಫೆ.13): ತರಗತಿ ಒಳಗಡೆ ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ವಜಾಗೊಂಡಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನಾ ತಂಡವನ್ನು ರಚಿಸುವಂತೆ ಕರ್ನಾಟಕ ಶಿಕ್ಷಣ ಇಲಾಖೆಗೆ ಕಾಂಗ್ರೆಸ್ ಮುಖಂಡರು ಮಂಗಳವಾರ ಒತ್ತಾಯಿಸಿದ್ದಾರೆ.

ಸೇಂಟ್ ಜೊರೋಸಾ ಆಂಗ್ಲ ಶಾಲೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಬಿ ರಮಾನಾಥ್ ರೈ ಮತ್ತು ವಿನಯ್ ಕುಮಾರ್ ಸೊರಕೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮಂಡ್ಯ: ವಿಚಾರಣೆ ನೆಪದಲ್ಲಿ ಠಾಣೆಗೆ ಕರೆತಂದು ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು!

ಪ್ರತಿಭಟನೆಗೆ ಮಕ್ಕಳನ್ನು ಬಳಸಿಕೊಳ್ಳುವ ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆಗಳ ಬಗ್ಗೆ ತನಿಖೆ ನಡೆಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ರೈ ಹೇಳಿದರು.

ಶಾಲೆಗೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗದಲ್ಲಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರೆ ಫರ್ಜಾನಾ ಮಾತನಾಡಿ, ಈ ಘಟನೆಯಿಂದಾಗಿ ಶಾಲೆಗೆ ಪೊಲೀಸರು ರಕ್ಷಣೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಜೈ ಶ್ರೀ ರಾಮ್ ಘೋಷಣೆ ಕೂಗಲು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಸ್ಥಳೀಯ ಬಿಜೆಪಿ ಶಾಸಕರ ಹೇಳಿಕೆ ಖಂಡನಾರ್ಹ ಎಂದರು.

'ಶ್ರೀರಾಮ ಒಂದು ಕಲ್ಲು' ಎಂದ ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಪೋಷಕರು ಆಕ್ರೋಶ

ಕಾಂಗ್ರೆಸ್ ಮುಖಂಡರಾದ ಜೆ ಆರ್ ಲೋಬೋ, ಮಮತಾ ಗಟ್ಟಿ, ಶಶಿಧರ ಹೆಗಡೆ, ಶಾಹುಲ್ ಹಮೀದ್, ಶಾಲೆಟ್ ಪಿಂಟೋ ನಿಯೋಗದಲ್ಲಿದ್ದರು.

click me!