
ನವದೆಹಲಿ(ಸೆ.13): ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ. ಕಾಂಗ್ರೆಸ್‌ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ನೋಡಿ ಎಂದರು. ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ? ಆ ರೀತಿ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ? ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ಮಹದಾಯಿ ಯೋಜನೆ ಜಾರಿಗೆ ಬಿಜೆಪಿ ಬದ್ಧ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿಯ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ