
ಕಾರವಾರ (ಏ.20): ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ 6 ತಿಂಗಳ ಒಳಗೆ ಯಥಾವತ್ತಾಗಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಅವರು ಶನಿವಾರ ಹೊನ್ನಾವರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರ ತಂದ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಯಶೋಗಾಥೆಗಳನ್ನು ಒಳಗೊಂಡ ಕಿರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.
ಇದನ್ನೂ ಓದಿ: 'ಬಡವರ ಅನ್ನ, ಭೂಮಿ ಕಿತ್ತ ಖುಷಿಗೆ ವೇದಿಕೆಯಲ್ಲೇ ಡಾನ್ಸ್ ಮಾಡಿದ್ರಾ ಸಚಿವ್ರೇ?..' ಮಂಕಾಳು ವೈದ್ಯ ಡಾನ್ಸ್‌ಗೆ ಜನರ ಆಕ್ರೋಶ
ಸಾಮಾನ್ಯ ವರ್ಗದ ಜನರು ಸುರಕ್ಷಿತವಾಗಿ ಹಾಗೂ ಆರ್ಥಿಕವಾಗಿ ಸಬಲರಾಗಿ ನೆಮ್ಮದಿಯ ಜೀವನ ಸಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಲಾಗುತ್ತಿದ್ದು, ಹಣಕಾಸಿನ ಯಾವುದೇ ಕೊರತೆ ಇಲ್ಲ ಎಂದರು.
ಇದನ್ನೂ ಓದಿ: Mankala Vaidya ಹೇಳಿಕೆ ವಿರುದ್ಧ Afsar kodlipet ಆಕ್ರೋಶ Mankala Vaidya Vs Afsar kodlipet | Kannada News
ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದವರೂ ಕೂಡ ತಮ್ಮ ರಾಜ್ಯಗಳಲ್ಲಿ ಕೂಡಾ ಇದನ್ನು ಜಾರಿಗೊಳಿಸುತ್ತಿದ್ದಾರೆ ಎಂದ ಸಚಿವರು, ಈ ವರ್ಷದ ರಾಜ್ಯ ಬಜೆಟ್‌ನಲ್ಲಿ 56 ಸಾವಿರ ಕೋಟಿ ರು. ಅನುದಾನವನ್ನು ಐದು ಗ್ಯಾರಂಟಿ ಯೋಜನೆಗೆ ಮೀಸಲಿಡಲಾಗಿದೆ ಎಂದರು.
ಹೊನ್ನಾವರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯಕ, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್ ಮತ್ತಿತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ