
ಮಡಿಕೇರಿ(ಅ.21): ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ನಿಷೇಧಕ್ಕೆ ಮುಂದಾದರೆ ದೇಶವೇ ದಂಗೆ ಏಳಲಿದೆ ಎಂದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಎಚ್ಚರಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಸ್ಥಳಗಳಲ್ಲಿ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ಆರ್‌ಎಸ್‌ಎಸ್ ನಡೆಸುವ ಎಲ್ಲ ಬಗೆಯ ಚಟುವಟಿಕೆಗಳಿಗೂ ನಿಷೇಧ ಹೇರಲು ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು ಇದು ಖಂಡನೀಯ. ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರು, ಕೇಂದ್ರ ಗೃಹ ಸಚಿವರು ಎಲ್ಲರೂ ಆರ್‌ಎಸ್‌ಎಸ್‌ನಿಂದ ಬಂದವರು. ಆರ್‌ಎಸ್‌ಎಸ್ ಒಂದು ಜಾತಿಗೆ ಸೀಮಿತವಾಗಿಲ್ಲ. ಇಡೀ ದೇಶದಲ್ಲೇ ವಿಶಾಲವಾಗಿ ಬೆಳೆಯುತ್ತಿದ್ದು, ನಿಷೇಧ ಮಾಡಲು ಮುಂದಾದರೆ ಇಡೀ ದೇಶವೇ ದಂಗೆ ಏಳುತ್ತದೆ ಎಂದು ಹೇಳಿದರು.
1975, 1992ರಲ್ಲಿ ಆರ್‌ಎಸ್‌ಎಸ್‌ನನ್ನು ನಿಷೇಧ ಮಾಡಿತ್ತು. ಯಾವುದಕ್ಕೂ ಜಗ್ಗದೇ ಮತ್ತೆ ಬಲಿಷ್ಠವಾಗಿ ನಿಂತಿದೆ ಎಂದರು. ಎಲ್ಲಾ ವರ್ಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕರನ್ನು ನೋಡಿ ಕಾಂಗ್ರೆಸ್‌ಗೆ ಭಯ ಆರಂಭವಾಗಿದೆ. ಇಂದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನದಿಂದ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬಿಡುಗಡೆಯಾಗಬೇಕಿದ್ದ ಅನುದಾನ ಬಿಡುಗಡೆಯಾಗದೇ ಅಭಿವೃದ್ಧಿ ಕುಂಠಿತವಾಗಿದೆ. ಕಾಂಗ್ರೆಸ್ ಆರ್‌ಎಸ್‌ಎಸ್ ನಿಷೇಧ ಮಾಡುವ ಕುರಿತು ಆಲೋಚನೆ ಮಾಡುವುದನ್ನು ಬಿಟ್ಟು ಅಭಿವೃದ್ಧಿಗೆ ಗಮನ ಹರಿಸಲಿ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ