ರಾಜ್ಯದಲ್ಲಿ ಪ್ರತಿಯೊಬ್ಬರ 'ಮನೆ ಬಾಗಿಲಿಗೆ ಆರೋಗ್ಯ ಸೇವೆ' ಒದಗಿಸುವ ಆಲೋಚನೆಯೊಂದಿಗೆ "ಗೃಹ ಆರೋಗ್ಯ" ಎಂಬ ಯೋಜನೆ ಜಾರಿಗೊಳಿಸುವ ಚಿಂತನೆಯನ್ನು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆದಿಟ್ಟಿದ್ದಾರೆ.
ಬೆಂಗಳೂರು (ಆ.23): ರಾಜ್ಯದಲ್ಲಿ ಪ್ರತಿಯೊಬ್ಬರ 'ಮನೆ ಬಾಗಿಲಿಗೆ ಆರೋಗ್ಯ ಸೇವೆ' ಒದಗಿಸುವ ಆಲೋಚನೆಯೊಂದಿಗೆ "ಗೃಹ ಆರೋಗ್ಯ" ಎಂಬ ಯೋಜನೆಯ ರೂಪುರೇಷೆಯನ್ನು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತೆರೆದಿಟ್ಟಿದ್ದಾರೆ.
ಈ ಕುರಿತು ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ವೇಳೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಈಗಾಗಲೇ ಗೃಹ ಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಗ್ಯಾರಂಟಿ ಯೋಜನೆಗಳ ಮಾದರಿಯಲ್ಲೇ ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಗೊಳಿಸಲು ಸರ್ಕಾರ ಗಂಭೀರ ಚೀಂತನೆ ಮಾಡಿದೆ. ಅಂದರೆ, ವೈದ್ಯರ ತಂಡವು ಮನೆ ಮನೆಗೆ ಭೇಟಿ ಮಾಡಿ ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧ ಒದಗಿಸುವ 'ಗೃಹ ಆರೋಗ್ಯ' ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಅಮೇರಿಕಾದಲ್ಲಿ ಮೃತಪಟ್ಟ ದಾವಣಗೆರೆ ಕುಟುಂಬದ ಮೃತದೇಹಗಳನ್ನೂ ಕನ್ನಡ ನಾಡಿಗೆ ತರಲಾಗಲಿಲ್ಲ: ಅಂತಿಮ ದರ್ಶನವೂ ಸಿಗಲಿಲ್ಲ
ಇನ್ನು ಮೊದಲ ಹಂತದಲ್ಲಿ ರಾಜ್ಯದಲ್ಲಿ ಪ್ರಾಯೋಗಿಕವಾಗಿ 8 ಎಂಟು ಜಿಲ್ಲೆಗಳಲ್ಲಿ ಯೋಜನೆ ಜಾರಿಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧತೆ ನಡೆಸಿದೆ. ಯಾವುದೇ ಒಂದು ರೋಗ ಕಾಣಿಸಿಕೊಂಡ ನಂತರ, ಚಿಕಿತ್ಸೆ ನೀಡುವುದರ ಬದಲಿಗೆ ಯಾವುದೇ ರೋಗ ಕಾಣಿಸಿಕೊಳ್ಳುವ ಪ್ರಾರಂಭದ ಅವಧಿಯಲ್ಲಿಯೇ ತಾಪಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಉದ್ದೇಶಿತ ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಸಿಬ್ಬಂದಿ ಪ್ರತಿದಿನ ಜನರ ಮನೆ ಬಾಗಿಲಿಗೆ ತೆರಳಲಿದ್ದಾರೆ. ಆಗ ಕುಟುಂಬದ ಸದಸ್ಯರನ್ನು ತಪಾಸಣೆಗೆ ಒಳಪಡಿಸಲಿದ್ದಾರೆ. ರಕ್ತದೊತ್ತಡ (ಬಿಪಿ), ಮಧುಮೇಹ (ಶುಗರ್) ಸೇರಿ ಸಣ್ಣಪುಟ್ಟ ಖಾಯಿಲೆಗೆ ಸ್ಥಳದಲ್ಲಿಯೇ ಔಷಧ ನೀಡಲಾಗುತ್ತದೆ.
ಗಂಭೀರ ಕಾಯಿಲೆಗಳ ಪತ್ತೆಗೆ ಕ್ರಮ: ಇನ್ನು ಮನೆ ಬಾಗಿಲಿಗೆ ಹೋಗುವ ಆರೋಗ್ಯ ಸಿಬ್ಬಂದಿ ಹ್ಯಾಂಡ್ ಎಕ್ಸ್‌ರೇ ಹಿಡಿದು ಹೋಗುತ್ತಾರೆ. ಈ ವೇಳೆ ಗಂಭೀರ ರೋಗದ ಮುನ್ಸೂಚನೆ ಕಂಡುಬಂದಲ್ಲಿ ಹ್ಯಾಂಡ್ ಎಕ್ಸ್‌ರೇ ಮಾಡುತ್ತಾರೆ. ಈ ವೇಳೆ ಗಂಭೀರ ಕಾಯಿಲೆ ಇರುವುದು ಪತ್ತೆಯಾದಲ್ಲಿ ಕೂಡಲೇ ಅವರನ್ನು ಹೆಚ್ಚುವರಿ ಚಿಕಿತ್ಸೆಗೆ ಶಿಫಾರಸು ಮಾಡಲಾಗುತ್ತದೆ. ಈ ಮೂಲಕ ಜನಸಾಮಾನ್ಯರು ಗಂಭೀರ ರೋಗಕ್ಕೆ ಒಳಗಾಗಿ ಪ್ರಾಣಹಾನಿಗೆ ಒಳಗಾಗುವುದನ್ನು ತಡೆಗಟ್ಟುವುದು ಇದರ ಮುಖ್ಯ ಉದ್ದೇಶವಾಗಿದೆ. ಇನ್ನು ನಮ್ಮ ಗುರಿ ಕೇವಲ ಹೊಸ ಯೋಜನೆಗಳನ್ನು ಜಾರಿಗೆ ತರುವುದು ಮಾತ್ರವಲ್ಲದೇ ಈಗಾಗಲೇ ಇರುವ ಪ್ರಮುಖ ಯೋಜನೆಗಳನ್ನು ಯಶಸ್ವಿ ಅನುಷ್ಠಾನದ ಮೂಲಕ ಜನರಿಗೆ ತಲುಪುವಂತೆ ಮಾಡುವುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಿಜೆಪಿ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲು: ಕುಟುಕಿದ ಕಾಂಗ್ರೆಸ್
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ 'ಗೃಹ ಆರೋಗ್ಯ ಯೋಜನೆ. ಮನೆ ಬಾಗಿಲಿಗೆ ಆರೋಗ್ಯ ಸೇವೆ ಎಂಬ ಆಲೋಚನೆಯೊಂದಿಗೆ ಗೃಹ ಆರೋಗ್ಯ ಎಂಬ ಯೋಜನೆಯ ರೂಪುರೇಷೆಯನ್ನು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತೆರೆದಿಟ್ಟಿದ್ದಾರೆ. ಉಚಿತ ಅರೋಗ್ಯ ತಪಾಸಣೆ, ಉಚಿತ ಚಿಕಿತ್ಸೆ, ಉಚಿತ ಔಷಧ ನೀಡುವುದು ಗೃಹಆರೋಗ್ಯ ಯೋಜನೆಯ ಉದ್ದೇಶ. ಜನಪರ ಚಿಂತನೆ, ಯೋಜನೆಗಳು ಸಾಧ್ಯವಾಗುವುದು ಕಾಂಗ್ರೆಸ್ಸಿಗೆ ಮಾತ್ರ' ಎಂದು ತಿಳಿಸಿದೆ.