
ಬೆಂಗಳೂರು (ಏ.16): ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಮೇಲೆ ತೆರಿಗೆ ದಾಳಿ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ. ಅದಕ್ಕೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಂದ ಮೇಲೆ ಈ ಹೋರಾಟ ಯಶಸ್ವಿಯಾಗಿದೆ ಎಂದೇ ಅರ್ಥ. ಬೆಂಗಳೂರಿನಲ್ಲಿ ಕಸಕ್ಕೆ, ಪಾರ್ಕಿಂಗ್‌ಗೆ ಶುಲ್ಕ ವಿಧಿಸಿದ್ದಾರೆ. ಇದು ತುಘಲಕ್ ದರ್ಬಾರ್ ಆಗಿದೆ. ಯಾರೂ ಕೇಳುವವರಿಲ್ಲ. ಸಿಎಂ ಸಿದ್ದರಾಮಯ್ಯ ವೀಲ್‌ಚೇರ್‌ನಲ್ಲಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಬೊಟ್ಟು ಇಟ್ಟುಕೊಂಡು ದೇವಸ್ಥಾನಗಳಲ್ಲಿ ಹೋಮ ಮಾಡಿಸುತ್ತಿದ್ದಾರೆ. ಎಲ್ಲವನ್ನೂ ಮುಸ್ಲಿಮರಿಗೆ ಧಾರೆ ಎರೆಯುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ: ಜಾತಿ ಗಣತಿ ವರದಿ ದಂಗಲ್: ತಮ್ಮ ಜಾತಿ ಪರ ವಾದ ಮಂಡನೆಗೆ ಸಚಿವರ ಸಿದ್ಧತೆ!
ಎಲ್ಲವನ್ನೂ ಮುಸ್ಲಿಮ ರಿಗೆ ಧಾರೆ ಎರೆಯುತ್ತಿದ್ದಾರೆ
ಇಲ್ಲಿ ಆಡಳಿತವನ್ನು ಯಾರೂ ನಡೆಸುತ್ತಿಲ್ಲ. ಅಧಿಕಾರಕ್ಕಾಗಿ ಕಿತ್ತಾಟ ಮಾತ್ರ ನಡೆಯುತ್ತಿದೆ. ಈ ಹಿಂದೆ ಮುಡಾ ಹಗರಣದ ವಿರುದ್ಧ ಪಾದಯಾತ್ರೆ ಮಾಡಿದ್ದಕ್ಕಾಗಿ ಸಚಿವರು ರಾಜೀನಾಮೆ ನೀಡಿದರು. ಮುಖ್ಯಮಂತ್ರಿ ಸೈಟುಗಳನ್ನು ವಾಪಸ್ ಕೊಟ್ಟರು. ಇವೆಲ್ಲ ನಮ್ಮ ಹೋರಾಟದ ಫಲವಾಗಿಯೇ ಆಗಿದೆ. ಈಗಲೂ ಹೋರಾಟ ಮಾಡಿ ಫಲಿತಾಂಶ ನೀಡುತ್ತೇವೆ ಎಂದರು.
ಇದನ್ನೂ ಓದಿ: ಜಾತಿ ಜನಗಣತಿ: 58% ಮುಸ್ಲಿಮರು ನಗರವಾಸಿ, ಹಳ್ಳಿಯಲ್ಲಿ ಎಸ್ಟಿ, ಒಕ್ಕಲಿಗರೆಲ್ಲಿ?
ಭಾರತದ ಸಂಸತ್ತು ಯಾವತ್ತಿಗೂ ಶ್ರೇಷ್ಠವಾದುದು. ಇವರನ್ನು ಕೇಳಿ ಯಾರೂ ವಕ್ಫ್ ಕಾನೂನು ತರುವುದಿಲ್ಲ. ಹಿಂದೆ ಮನಮೋಹನ್ ಸಿಂಗ್ ಅವಧಿಯಲ್ಲಿ ತಂದ ಕಾನೂನಿನಿಂದಾಗಿ ಭೂಮಿ ಕಬಳಿಕೆಯಾಗಿದೆ. ವಕ್ಫ್ ತಿದ್ದುಪಡಿ ಕಾನೂನನ್ನು ಎಲ್ಲರೂ ಪಾಲಿಸಲೇಬೇಕು. ಕಾಂಗ್ರೆಸ್‌ನವರು 50 ಸಲ ಸಂವಿಧಾನ ಬದಲಿಸಿದ್ದಾರೆ. ಅವರಿಂದ ಬಿಜೆಪಿ ಬುದ್ಧಿ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ