60 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದೇ ಕಾಂಗ್ರೆಸ್‌ ನಾಯಕ: ಕುಮಾರಸ್ವಾಮಿ

By Kannadaprabha News  |  First Published Jan 7, 2025, 7:01 AM IST

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದು ನಾನಲ್ಲ. ಅಂದಿನ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು ಎಂದು ತಿರುಗೇಟು ನೀಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ


ಹುಬ್ಬಳ್ಳಿ(ಜ.07): ರಾಜ್ಯ ಸರ್ಕಾರ ಕಾಮಗಾರಿಗಳಲ್ಲಿ ಶೇ. 60 ಪರ್ಸೆಂಟ್ ಕಮಿಷನ್ ಪಡೆಯುತ್ತಿದೆ ಎಂದು ಆರೋಪಕ್ಕೆ ಸಾಕ್ಷ್ಯ ನೀಡಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲ್‌ಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ಸರ್ಕಾರದ ವಿರುದ್ದ ಶೇ. 40ರಷ್ಟು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಯಾವ ದಾಖಲೆ ನೀಡಿತ್ತು ಎಂದು ಪ್ರಶ್ನಿಸಿದ್ದಾರೆ. 

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಆಗ ಮಾಡಿದ ಆರೋಪದ ಬಗ್ಗೆ ಈವರೆಗೂ ದಾಖಲೆ ಕೊಡಲುಸಾಧ್ಯವಾಗಿಲ್ಲ.ಸರ್ಕಾರಯಾವರೀತಿ ನಡೆದುಕೊಳ್ಳುತ್ತಿದೆ ಎನ್ನುವುದು ಗೊತ್ತು. ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಜನಸಾಮಾನ್ಯರು, ಗುತ್ತಿಗೆದಾರರಿಗೆ ಭ್ರಷ್ಟಾಚಾರದ ಬಿಸಿ ಮುಟ್ಟಿದೆ.

Tap to resize

Latest Videos

ಶಾಸಕರಿಂದ ಶೇ.40 ಕಮೀಷನ್ ದಂಧೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ

ಭ್ರಷ್ಟಾಚಾರ ಮುಚ್ಚಿ ಹಾಕುವ ಪ್ರಯತ್ನ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರದಲ್ಲಿ ಶೇ.60ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಕೇವಲ ಆರೋಪ ಮಾಡುವುದಲ್ಲ. ಸಾಕ್ಷ್ಯಾಧಾರ, ದಾಖಲೆ ಸಮೇತ ಆರೋಪ ಮಾಡಿ, ಅದನ್ನು ಸಾಬೀತುಪಡಿಸಿ ಎಂದು ಕೇಂದ್ರ ಸಚಿವ ಎಚ್‌. ಡಿ.ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬಹಿರಂಗವಾಗಿ ಸವಾಲು ಹಾಕಿದ್ದರು.

40 ಪರ್ಸೆಂಟ್ ಕಮಿಷನ್  ಆರೋಪ ಮಾಡಿದ್ದು ಕೆಂಪಣ್ಣ, : ಸಿದ್ದು ಟಾಂಗ್ 

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದು ನಾನಲ್ಲ. ಅಂದಿನ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

ಬಿಜೆಪಿ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಪಕ್ಷದ ಈ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಆರೋಪ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕಮಿಷನ್ ಆರೋಪವನ್ನು ಗುತ್ತಿಗೆದಾರ ಸಂಘದ ಅಧ್ಯಕ್ಷರು ಕೆಂಪಣ್ಣ ಮಾಡಿದ್ದರು. ಬಿಜೆಪಿಯವರು ಕಮಿಷನ್ ತೆಗೆದುಕೊಂಡಿರುವುದಾಗಿ ಕೆಂಪಯ್ಯನವರು ಆರೋಪಿಸಿದ್ದರು ಎಂದರು.

ನಕ್ಸಲರು ಶರಣಾಗುವ ಸಾಧ್ಯತೆ: 

ನಕಲರು ಶರಣಾಗಲಿ ಎಂದು ಕರೆ ನೀಡಿದ್ದೇನೆ ಹಾಗೂ ನಕ್ಸಲರ ಮನಃಪರಿವರ್ತನೆಯಾಗಿ ಶರಣಾಗುವ ಸಾಧ್ಯತೆಯಿದೆ. ಸಮಾಜದ ಮುಖ್ಯವಾಹಿನಿಗೆ ಅವರನ್ನು ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಉತ್ತರಿಸಿದರು.

60 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದೇ ಕೈ ನಾಯಕರೆಂದ ಎಚ್‌ಡಿಕೆ 

ಬೆಂಗಳೂರು:  ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ ಶೇ.60 ಕಮಿಷನ್ ಸುಲಿಗೆ ಮಾಡುತ್ತಿದೆ ಎಂಬ ತಮ್ಮ ಆರೋಪಕ್ಕೆ ಸಂಬಂಧಿಸಿದಂತೆ ಆಧಾರ ಇಲ್ಲದೆ ಆರೋಪ ಮಾಡುವ ಮಾತೆಲ್ಲಿ ಬಂತು ಮುಖ್ಯಮಂತ್ರಿಗಳೇ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 

ಬಿಜೆಪಿ ಸರ್ಕಾರದ ವಿರುದ್ಡ ಶೇ.40 ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇ.100 ಭ್ರಷ್ಟರಾಗಿದ್ದು

60 ಪರ್ಸೆಂಟ್ ಕಮಿಷನ್ ಕುರಿತ ಆರೋಪ ಆಧಾರರಹಿತ, ದಾಖಲೆ ಕೊಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷದ ಪರವೇ ಇರುವ ಗುತ್ತಿಗೆದಾರರು ಮತ್ತು ತುಮಕೂರಿನ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರ್ಕಾರಕ್ಕಿಂತ ಹಿಂದಿನ ಬಿಜೆಪಿ ಸರ್ಕಾರವೇ ವಾಸಿ ಇತ್ತು ಎಂಬುದಾಗಿ ಅಲವತ್ತುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿಯೂ ಶೇ. 40ರಷ್ಟು ಕಮಿಷನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ನೇರ ಆರೋಪ ಎಂದು ಟಾಂಗ್ ನೀಡಿದ್ದಾರೆ. 

ಕಮಿಷನ್ ವ್ಯವಹಾರ ಇಲ್ಲ ಎಂದಾದರೆ ಅವರ ಪಕ್ಷದವರನ್ನೇ ಕರೆದು ಕೇಳಬೇಕಿತ್ತು. ಪ್ರತಿ ಪಕ್ಕದವರನ್ನೇ ಆರೋಪಕ್ಕೂ ದಾಖಲೆ ಕೇಳುವ ಮುಖ್ಯಮಂತ್ರಿಗಳು, ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟಾಗ ಎಷ್ಟು ದಾಖಲೆ ನೀಡಿದ್ದರು? ಅವರ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದರಾ ಎಂದು ಕಿಡಿಕಾರಿದ್ದಾರೆ.

click me!