ಕೊರೋನಾ ನಿಯಂತ್ರಣಕ್ಕೆ ಬಿಎಸ್‌ವೈಗೆ 9 ಸಲಹೆ ನೀಡಿದ ಎಚ್‌ಕೆ ಪಾಟೀಲ್​

Published : Apr 14, 2021, 03:20 PM ISTUpdated : Apr 14, 2021, 03:21 PM IST
ಕೊರೋನಾ ನಿಯಂತ್ರಣಕ್ಕೆ ಬಿಎಸ್‌ವೈಗೆ 9 ಸಲಹೆ ನೀಡಿದ ಎಚ್‌ಕೆ ಪಾಟೀಲ್​

ಸಾರಾಂಶ

ಕೊರೋನಾ ನಿಯಂತ್ರಣ ಮಾಡುವ ಸಲುವಾಗಿ ಮುಖ್ಯಮಂತ್ರಿ ಬಿ. ಎಸ್.​ ಯಡಿಯೂರಪ್ಪನವರಿಗೆ ಕಾಂಗ್ರೆಸ್ ನಾಯಕ ಪತ್ರ ಬರೆದಿದ್ದಾರೆ. ಪತ್ರದಲ್ಲಿ 9 ಸಲಹೆಗಳನ್ನ ನೀಡಿದ್ದಾರೆ.

ಬೆಂಗಳೂರು, (ಏ.14): ಕಳೆದ ವರ್ಷದ ಬಂದು ಹೋಗಿದ್ದ ಕೊರೋನಾ ಮೊದಲ ಅಲೆಗಿಂತ ಈಗ ಬಂದಿರುವ ಎರಡನೇ ಅಲೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹಾಸಿಗಗಳು, ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.

ಈ ಕುರಿತು ಕಾಂಗ್ರೆಸ್ ಹಿರಿಯ ​ ನಾಯಕ ಎಚ್​.ಕೆ. ಪಾಟೀಲ್​  ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಮಹತ್ವದ 9 ಸಲಹೆಗಳನ್ನು ನೀಡಿದ್ದಾರೆ.

ಸಭೆ ಮುಕ್ತಾಯ: ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನ ಕೊಟ್ಟ ಸಿಎಂ! 

ಪಾಟೀಲರು ಕೊಟ್ಟ ಸಲಹೆ ಇಂತಿವೆ
1. ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿ,ಅನುಷ್ಠಾನಗೊಳಿಸಿ.(ಕಾಗದದ ಮೇಲೆ ಉಳಿಯುವ ಆದೇಶ
ಮಾಡಬೇಡಿ).

2. ಆಕ್ಸಿಜನ್ ವಿಪುಲವಾಗಿ ಲಭ್ಯವಾಗುವಂತೆ ವ್ಯವಸ್ಥೆಗೊಳಿಸಿ.ಅಗತ್ಯವೆನಿಸಿದರೆ, ಆಕ್ಸಿಜನ್ ಬಳಕೆ ಮಾಡುವ, ಕೈಗಾರಿಕಾ ಉದ್ದೇಶಕ್ಕೆ ಆಕ್ಸಿಜನ್ ಉಪಯೋಗಿಸುವ ಕೈಗಾರಿಕೆಗಳನ್ನು ಕೆಲ ಕಾಲ ಬಂದ್ ಮಾಡಿ. ಆಕ್ಸಿಜನ್ ಹಾಸಿಗೆಗಳನ್ನು ತುರ್ತಾಗಿ ಹೆಚ್ಚಿಸಿ.

3. ಎಲ್ಲಿ ಜನ ಹೆಚ್ಚು ಸೇರುತ್ತಾರೆ ಎಂಬ ಭಾವನೆ-ಮಾಹಿತಿ ಇದೆಯೋ ಅಲ್ಲಿ ತಾತ್ಕಾಲಿಕ ಕೋರೋನಾ ತಪಾಸಣಾ ಕೇಂದ್ರ ಸ್ಥಾಪಿಸಿ. ಪರೀಕ್ಷೆಗಳನ್ನು ಮಾಡಿ. ಸೊಂಕಿತರು ಮತ್ತು ಶಂಕಿತರನ್ನು ಉಳಿದವರಿಂದ ಪ್ರತ್ಯೇಕಿಸಿ. ಪರೀಕ್ಷೆ ಮತ್ತು ಪರಿಣಾಮಕಾಗಿ ಪ್ರತ್ಯೇಕಿಸುವುದರಿಂದ ಮಾತ್ರ ಈ ರೋಗ ಹರಡುವಿಕೆಯನ್ನು ತಡೆಗಟ್ಟಬಹುದು.

4. ತಪಾಸಣಾ ಪರಿಣಾಮ ವಿಳಂಬವಾಗಿ ಬರುತ್ತಿವೆ. ಟೆಸ್ಟ್​ ಕಿಟ್​ಗಳ ಕೊರತೆ ಇದೆ. ಸಕಾಲಿಕ ಪರೀಕ್ಷೆ, ಫಲಿತಾಂಶ ಹಾಗೂ ಚಿಕಿತ್ಸೆ ಕಡೆಗೆ ದೃಢ ಹೆಜ್ಜೆ ಇಡಿ.

5. ಫಾರ್ಮಸಿಗಳಲ್ಲಿ ಔಷಧಿ ಸರಳವಾಗಿ ದೊರಕುವಂತೆ ಮಾಡಿ. ಈಗಿರುವ ಪದ್ಧತಿ ಜನರಿಗೆ ತೊಂದರೆ ಮಾಡುತ್ತಿದೆ.

6. ತುರ್ತಾಗಿ ಅಗತ್ಯ ಪ್ರಮಾಣದಲ್ಲಿ ಔಷಧಿ ಮತ್ತು ಪರಿಕರಗಳ ದಾಸ್ತಾನು ಮಾಡಿಕೊಳ್ಳಿ. ಕೊರೊನಾ ಚಿಕಿತ್ಸೆ ನೀಡುವ ಪ್ರತಿಯೊಂದು ಆಸ್ಪತ್ರೆಯಲ್ಲೂ ಲಭ್ಯವಿರುವ ಔಷಧಿ ಮತ್ತು ಪರಿಕರಗಳ ವಿವರಗಳನ್ನು ಸಾರ್ವಜನಿಕವಾಗಿ ದೈನಿಂದಿನ ಆಧಾರದ ಮೇಲೆ ಪ್ರಕಟಿಸಿ.

7. ಲಸಿಕಾ ಕಾರ್ಯಕ್ರಮ ನಿಸ್ತೇಜಗೊಂಡಿದೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ಪ್ರಯೋಜನವಾಗಿರುವ ಕುರಿತು
ಜಾಗೃತಿ ಮೂಡಿಲ್ಲ. ಲಸಿಕೆ ಪಡೆದವರೂ ಸಹ ಸೊಂಕಿಗೆ ತುತ್ತಾಗಿರುವುದರಿಂದ ಜನರಲ್ಲಿ ಲಸಿಕೆ ಪಡೆಯುವುದರಿಂದ ಪ್ರಯೋಜನಗಳ ಕುರಿತು ಅನುಮಾನ ಮೂಡಿದೆ. ಒಂದು ವೇಳೆ ಲಸಿಕೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೇ, ವೈಜ್ಞಾನಿಕ ಆಧಾರಗಳು ಮತ್ತು ಪ್ರಮಾಣಗಳೊಂದಿಗೆ ಅದನ್ನು ಸಾಬೀತುಪಡಿಸಿ ಜನರ ಗಮನಕ್ಕೆ ಸತ್ಯವಾದ ಮಾಹಿತಿಯನ್ನು ನೀಡಿ, ಜಾಗೃತಿ ಮೂಡಿಸಿ.

8. ಔಷಧಿಯನ್ನು ಪಡೆಯಲು ಕೊರೊನಾ ಸೋಂಕಿತರು ಹರಸಾಹಸ ಮಾಡಬೇಕಾಗಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಔಷಧಿ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿ.

9. ಚುನಾವಣಾ ನೆಪದಿಂದ ಸರ್ವಪಕ್ಷ ಸಭೆ ವಿಳಂಬ ಮಾಡುವದು ಸೂಕ್ತವಲ್ಲ. 18ರ ಬದಲು ತುರ್ತಾಗಿ ಸರ್ವಪಕ್ಷಗಳ ಸಭೆ ಮಾಡಿ. ಸಭೆಯ ಅಜೆಂಡಾ ನಿರ್ಧರಿಸಿ, ಬಹಿರಂಗಗೊಳಿಸಿ.ಈ ಸಭೆಯಲ್ಲಿ ತಜ್ಞರ ಸಮಿತಿಯ ಶಿಫಾರಸ್ಸುಗಳನ್ನು ಮಂಡಿಸಿ. 
ಹಲವಾರು ಅಗತ್ಯ ನಿರ್ಣಯಗಳನ್ನು ಕೈಗೊಳ್ಳುವದನ್ನು ವಿಳಂಬ ಮಾಡಬೇಡಿ. ಕೊರೊನಾ ಔಷಧಿ ನಾಗರೀಕರಿಗೆ ಸುಲಭವಾಗಿ, ಸರಳವಾಗಿ ದೊರೆಯುವಂತೆ ಕ್ರಮಕೈಗೊಳ್ಳಿ, ಅದಕ್ಕಾಗಿ ಮತ್ತೆ ಬೇರೆ ವಿವರಗಳು ಅಂದರೆ, ಸೋಂಕಿತರ ಆಧಾರ್ ಮತ್ತಿತರ ವೈಯಕ್ತಿಕ ವಿವರಗಳು ಮೆಡಿಕಲ್ ಸ್ಟೋರ್‍ಗೆ ಅಗತ್ಯವಿಲ್ಲ. ಉಳಿದ ಔಷಧಿಗಳಂತೆ ಈ ಔಷಧಿಗಳನ್ನು ಲಭ್ಯಗೊಳಿಸಿ. ಈ ಮೇಲಿನ ಕ್ರಮಗಳು ತುರ್ತು ಅಗತ್ಯಗಳು, ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ