ದರ್ಶನ್ ಧ್ರುವ ನಾರಾಯಣ್ ಕುಟುಂಬಕ್ಕೆ ಮತ್ತೊಂದು ಶಾಕ್: ದಿವಂಗತ ಆರ್.ಧ್ರುವ ನಾರಾಯಣ್ ಧರ್ಮಪತ್ನಿ ವೀಣಾ ನಿಧನ

By Govindaraj SFirst Published Apr 7, 2023, 11:36 AM IST
Highlights

ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಮತ್ತೊಂದು ಶಾಕ್ ಆಗಿದ್ದು, ದಿವಂಗತ ಆರ್.ಧ್ರುವ ನಾರಾಯಣ್ ಅವರ ಧರ್ಮಪತ್ನಿ ವೀಣಾ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೈಸೂರು (ಏ.07): ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಮತ್ತೊಂದು ಶಾಕ್ ಆಗಿದ್ದು, ದಿವಂಗತ ಆರ್.ಧ್ರುವ ನಾರಾಯಣ್ ಅವರ ಧರ್ಮಪತ್ನಿ ವೀಣಾ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧೀರ್ಘಕಾಲದ ಕಾಯಿಲೆಯಿಂದ ಬಳಲುತ್ತಿದ್ದ ವೀಣಾ ಹಲವು ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅನಿಲ್ ಚಿಕ್ಕಮಾದು, ಸಾರಾ ಮಹೇಶ್ ಹಾಗೂ ಇತರೆ ನಾಯಕರು ಧ್ರುವನಾರಾಯಣ್ ಪುತ್ರರಿಗೆ ಧೈರ್ಯ ತುಂಬಿದ್ದಾರೆ. ರಾಜ್ಯ ನಾಯಕರು ಧ್ರುವ ನಾರಾಯಣ್ ಪುತ್ರ ದರ್ಶನ್‌ಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಮೈಸೂರಿನ ರೆಡಿಯಂಟ್ ಆಸ್ಪತ್ರೆಗೆ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ವಿವಿಧ ಪಕ್ಷಗಳ ನಾಯಕರು ದೌಡಯಿಸುತ್ತಿದ್ದು, ನಾಳೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಧ್ರುವನಾರಾಯಣ್ ಪುತ್ರ ದರ್ಶನ್ ಮಾಹಿತಿ ನೀಡಿದ್ದಾರೆ. ಸದ್ಯ ಇಂದು ಸಂಜೆ 4 ಗಂಟೆಯ ನಂತರ ಹೆಗ್ಗವಾಡಿ ಗ್ರಾಮಕ್ಕೆ ಪಾರ್ಥಿವ ಶರೀರ ರವಾನೆಯಾಗಲಿದೆ. 

Latest Videos

R Dhruvanarayan Passes Away: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಇನ್ನು ಮಾ.11ರಂದು ಧ್ರುವನಾರಾಯಣ್ ಅವರು ನಿಧನರಾಗಿದ್ದರು. ಅಂದು ಬೆಳಗಿನ ಜಾವದಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಆಗ ಮೈಸೂರಿನ ತಮ್ಮ ನಿವಾಸದಲ್ಲಿದ್ದ ಅವರು, ಆಸ್ಪತ್ರೆಗೆ ಹೋಗುವಷ್ಟರಲ್ಲಿ ನಿಧನರಾಗಿದ್ದರು. ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. 1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು. 

ಎಲ್ಲಾ ಸಮಾಜದವರು ಎಲ್ಲರನ್ನು ಪ್ರೀತಿಯಿಂದ ಕಾಣುತ್ತಿದ್ದ ವ್ಯಕ್ತಿ ಧ್ರುವನಾರಾಯಣ: ಡಿ.ಕೆ.ಶಿವಕುಮಾರ್

2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧ್ರುವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರು. 

click me!