
ಬೆಂಗಳೂರು : ಬಾಗಲಕೋಟೆ, ವಿಜಯಪುರ, ರಾಯಚೂರು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ದೂರು ನೀಡಿದ್ದಾರೆ.
ತಮ್ಮ ಜಿಲ್ಲೆಗಳ ಪದಾಧಿಕಾರಿ ಗಳ ಸಭೆ ಬೇರೆ ದಿನ ನಿಗದಿಯಾಗಿ ತ್ತಾದರೂ ಶನಿವಾರ ಸಭೆಗೆ ಆಗಮಿಸಿದ ಮೂರೂ ಜಿಲ್ಲೆಗಳ ಕೆಲ ಪದಾಧಿಕಾರಿಗಳು, ವಿಜಯಾನಂದ ಕಾಶಪ್ಪನವರ್ ತಮ್ಮದೇ ತಪ್ಪುಗಳಿಂದ ಈ ಬಾರಿಯ ಚುನಾವಣೆಯಲ್ಲಿ ಸೋಲನು ಭವಿಸಿದ್ದಾರೆ.
ಆದರೆ, ಅನಗತ್ಯವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್ .ಪಾಟೀಲ್ ಅವರು ನನ್ನ ಸೋಲಿಗೆ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ. ಅವರ ಈ ವರ್ತ ನೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಲಿದೆ. ಇದು ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ