ಬಿಜೆಪಿ ಆಡಳಿತದ ಸಾಧನೆಯಿಂದ ಕಾಂಗ್ರೆಸ್‌ ನಾಯಕರು ಹತಾಶೆ: ಸಿ.ಸಿ.ಪಾಟೀಲ

By Kannadaprabha NewsFirst Published Nov 15, 2021, 9:53 AM IST
Highlights

*  ಹತಾಶರಾಗಿ ಬಿಟ್‌ಕಾಯಿನ್‌ ಹೆಸರಲ್ಲಿ ವಿನಾಕಾರಣ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ
*  ಕಾಂಗ್ರೆಸ್‌ ಮುಖಂಡರಿಗೆ, ಇದೇ ಬಿಟ್‌ ಕಾಯಿನ್‌ ತಿರುಗುಬಾಣವಾಗಿ ಮುಳುವಾಗಲಿದೆ
*  ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ
 

ಗದಗ(ನ.15):  ರಾಜ್ಯದಲ್ಲಿ(Karnataka) ಯಾವುದೇ ಭ್ರಷ್ಟಾಚಾರಕ್ಕೆ(Corruption) ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ ಈಗಾಗಲೇ ಯಶಸ್ವಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್‌ ನಾಯಕರು ಬಿಟ್‌- ಕಾಯಿನ್‌(Bitcoin) ಹೆಸರಿನಲ್ಲಿ ವಿನಾಕಾರಣ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸಲು ಹವಣಿಸುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ .ಪಾಟೀಲ(CC Pati) ಹೇಳಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿಟ್‌ ಕಾಯಿನ್‌ ವಿಚಾರದಲ್ಲಿ ವಿವಾದ ಸೃಷ್ಟಿಸಿ ಅದರಿಂದ ರಾಜಕೀಯ ದುರ್ಲಾಭ ಪಡೆದುಕೊಳ್ಳಬಹುದು ಎಂಬ ಹಗಲು ಗನಸು ಕಾಣುತ್ತಿರುವ ಕಾಂಗ್ರೆಸ್‌(Congress) ಮುಖಂಡರಿಗೆ, ಇದೇ ಬಿಟ್‌ ಕಾಯಿನ್‌ ತಿರುಗುಬಾಣವಾಗಿ ಮುಳುವಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸಾಬೀತಾಗುತ್ತದೆ. ಬಿಜೆಪಿ ನಾಯಕರೇ ತಮಗೆ ಬಿಟ್‌ಕಾಯಿನ್‌ ಹಗರಣದ ಮಾಹಿತಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ಸಿನ ಮುಖಂಡರೊಬ್ಬರು ಹೇಳುವ ಮೂಲಕ ಈ ತನಿಖೆಯ ಹಾದಿ ತಪ್ಪಿಸಲು ಮತ್ತು ಬಿಜೆಪಿಯಲ್ಲಿ ಹುಳಿ ಹಿಂಡಿ ಒಡಕು ಸೃಷ್ಟಿಸಲು ಹವಣಿಸಿರುವುದು ಸ್ಪಷ್ಟವಾಗಿದೆ. ಆದರೆ, ಇಂತಹ ಹುನ್ನಾರಗಳ ಆಟ ನಡೆಯುವುದಿಲ್ಲ. ಬಿಜೆಪಿಯಲ್ಲಿ ಆಂತರಿಕ ಒಕ್ಕಟ್ಟು ಗಟ್ಟಿಯಾಗಿದೆ. ಕಾಂಗ್ರೆಸ್ಸಿನ ಹಾಗೆ ಒಂದು ಮನೆ ಹಲವು ಬಾಗಿಲು ಎಂಬಂಥ ಪರಿಸ್ಥಿತಿ ನಮ್ಮಲ್ಲಿಲ್ಲ ಎಂದು ಸಚಿವ ಪಾಟೀಲ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ.

'2018ರಲ್ಲಿ ಶ್ರೀಕಿಯನ್ನು ಬಿಟ್ಟಿದ್ದು ಕಾಂಗ್ರೆಸ್‌ ಸರ್ಕಾರ: Bitcoin Scam ಬಯಲು ಮಾಡಿದ್ದೇ ನಾವು'

ಬಿಟ್‌ ಕಾಯಿನ್‌ ಹಗರಣ ಈಗಾಗಲೇ ಕೆಲವು ಕಾಂಗ್ರೆಸ್‌ ಮುಖಂಡರ ಕಾಲಿಗೆ ಸುತ್ತಿಕೊಂಡಿರುವುದು ಬಹಿರಂಗವಾಗಿದ್ದರೂ ಸಹ, ತಾವೇ ಸ್ವತಃ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವ ದುಸ್ಸಾಹಸಕ್ಕೆ ಇಳಿಯುತ್ತಿರುವ ವರ್ತನೆ ನಿಜಕ್ಕೂ ವಿಚಿತ್ರವಾಗಿದೆ. ಹಗರಣದ ಬಗ್ಗೆ ಸೂಕ್ತ ತನಿಖೆ ಮಾಡಿದ್ದು ಮತ್ತು ಇ.ಡಿ(ED) ಹಾಗೂ ಸಿಬಿಐಗೆ(CBI) ಶಿಫಾರಸು ಮಾಡಿದ್ದೇ ನಮ್ಮ ಸರ್ಕಾರ, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿಯವರೇ ಸ್ಪಷ್ಟಪಡಿಸಿದ್ದಾರೆ. ಅದರಂತೆ ಈಗ ತನಿಖೆ ಸರಿಯಾದ ದಿಕ್ಕಿನಲ್ಲಿಯೇ ನಡೆಯುತ್ತಿರುವುದರಿಂದ ಯಾರೂ ಸ್ವ ಕಪೋಲಕಲ್ಪಿತವಾಗಿ ರಾಜಕೀಯ(Politics) ಪ್ರೇರಿತ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿ.ಸಿ. ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

ನಿಮ್ಮಪ್ಪನ ನೋಡಿ ಕಲಿತುಕೊಳ್ಳಿ : ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಮುಖಂಡ

ಬಿಟ್‌ ಕಾಯಿನ್‌ (Bitcoin) ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ (Karnataka Govt) ವಿರುದ್ಧ ಹಾಗೂ ಪೊಲೀಸ್‌ ಇಲಾಖೆ (Police department) ಕಾರ್ಯವೈಖರಿ ಬಗ್ಗೆ ಶಾಸಕ ಪ್ರಿಯಾಂಕ ಖರ್ಗೆ (Priyank kharge) ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಸುರಪುರ ಶಾಸಕ ನರಸಿಂಹನಾಯಕ ( ರಾಜೂಗೌಡ) (Rajugowda) ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ವಿಚಾರ : ಬಿ.ವೈ.ವಿಜಯೇಂದ್ರ ಮಹತ್ವದ ಹೇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್‌ ನಲ್ಲಿ ತಮ್ಮನ್ನು ಸಂಪರ್ಕಿಸಿದ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಅವರು, ವಿರೋಧ ಪಕ್ಷದಲ್ಲಿ ಇದ್ದೇವೆ ಅನ್ನುವ ಕಾರಣಕ್ಕೆ ಖರ್ಗೆ ಸುಖಾ ಸುಮ್ಮನೆ ಹೇಳಿಕೆ ನೀಡುತ್ತಿದ್ದಾರೆ. ಆರೋಪದಲ್ಲಿ ಯಾವುದೇ ಘನತೆ ಇಲ್ಲ. ಅಷ್ಟಕ್ಕೂ ಕಾಂಗ್ರೆಸ್ನವರಿಗೆ (Congress) ಸರ್ಕಾರದ ವಿರುದ್ಧ ಯಾವುದಾದರೊಂದು ವಿಷಯದ ಬಗ್ಗೆ ಬೇಕಾಗಿದ್ದರಿಂದ ಈಗ ಬಿಟ್‌ ಕಾಯಿನ್‌ (Bitcoin) ವಿಚಾರ ಮುಂದಿಟ್ಟುಕೊಂಡು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ರಾಜುಗೌಡ ವಿಪಕ್ಷಗಳನ್ನು ಟೀಕಿಸಿದರು.

ಶಾಸಕ ಪ್ರಿಯಾಂಕ್‌ ಅವರ ತಂದೆ ಮಲ್ಲಿಕಾರ್ಜುನ ಖರ್ಗೆಯವರು (Mallikarjun kharge) ಸಚಿವರಾಗಿಯೂ ಕೆಲಸ ಮಾಡಿದ್ದಾರೆ, ಅವರು ಯಾವ ಯಾವ ಖಾತೆ ಗಳಲ್ಲಿ ಕೆಲಸ ಮಾಡಿದ್ದಾರೆ ಅನ್ನೋದನ್ನು ಶಾಸಕ ಪ್ರಿಯಾಂಕ ಖರ್ಗೆ ಅರಿತುಕೊಳ್ಳಲಿ. ಪೊಲೀಸ್‌ ಇಲಾಖೆ (Police department) ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಹೋಮ್‌ ಮಿನಿಸ್ಟರ್‌ (Home Minister) ಆಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ ಖರ್ಗೆ ಅವರಿಗೆ ಗೊತ್ತಿರುತ್ತದೆ. ಈಗ ಬಿಟ್‌ ಕಾಯಿನ್‌ ಬಗ್ಗೆ ಪೊಲೀಸರ (Police) ವಿರುದ್ಧ ಇಲ್ಲಸಲ್ಲದ ಆರೋಪ ಸಲ್ಲದು ಎಂದು ರಾಜುಗೌಡ ಪ್ರಿಯಾಂಕ ಖರ್ಗೆ ವಿರುದ್ಧ ಹರಿಹಾಯ್ದರು.
 

click me!